50 ಕ್ಷೇತ್ರಗಳ ಉಪಸಮರ ಫಲಿತಾಂಶ | 21ರಲ್ಲಿ ಬಿಜೆಪಿ ಗೆಲುವು; ಕರ್ನಾಟಕದಲ್ಲಿ ಕಾಂಗ್ರೆಸ್‌, ಬಂಗಾಳದಲ್ಲಿ ಟಿಎಂಸಿ ‘ಕ್ಲೀನ್ ಸ್ವೀಪ್’

Date:

ಮಹಾರಾಷ್ಟ್ರ, ಜಾರ್ಖಂಡ್‌ನಲ್ಲಿ ವಿಧಾನಸಭಾ ಚುನಾವಣೆಗಳು ನಡೆದಿವೆ. ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಗೆಲುವು ಸಾಧಿಸಿ, ಅಧಿಕಾರ ಉಳಿಸಿಕೊಂಡಿದೆ. ಅಂತೆಯೇ, ಜಾರ್ಖಂಡ್‌ನಲ್ಲಿ ಕಾಂಗ್ರೆಸ್‌ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟವೂ ಅಧಿಕಾರ ಉಳಿಸಿಕೊಂಡು, ಮತ್ತೆ ಸರ್ಕಾರ ರಚನೆಗೆ ಸಜ್ಜಾಗಿದೆ. ಇದೇ ಸಮಯದಲ್ಲಿ, ಕರ್ನಾಟಕವೂ ಸೇರಿದಂತೆ ದೇಶಾದ್ಯಂತ 48 ವಿಧಾನಸಭಾ ಕ್ಷೇತ್ರ ಮತ್ತು 2 ಲೋಕಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದೆ. ಈ ಪೈಕಿ, 20 ವಿಧಾನಸಭಾ ಕ್ಷೇತ್ರ ಮತ್ತು 1 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ, 7 ವಿಧಾನಸಭಾ ಕ್ಷೇತ್ರ ಮತ್ತು 1 ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿವೆ. ಉಳಿದ 21 ಕ್ಷೇತ್ರಗಳ ಪೈಕಿ ಪಂಜಾಬ್‌ನಲ್ಲಿ ಎಎಪಿ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸೇರಿದಂತೆ ಆಯಾ ರಾಜ್ಯಗಳ ಸ್ಥಳೀಯ ಪಕ್ಷಗಳು ಗೆದ್ದು ಬೀಗಿವೆ.

ಉತ್ತರ ಪ್ರದೇಶದಲ್ಲಿ 9, ರಾಜಸ್ಥಾನಲ್ಲಿ 7, ಪಶ್ಚಿಮ ಬಂಗಾಳದಲ್ಲಿ 6, ಅಸ್ಸಾಂನಲ್ಲಿ 5, ಬಿಹಾರ ಮತ್ತು ಪಂಜಾಬ್‌ನಲ್ಲಿ ತಲಾ 4, ಕರ್ನಾಟಕದಲ್ಲಿ 3, ಕೇರಳ, ಮಧ್ಯಪ್ರದೇಶ, ಸಿಕ್ಕಿಂನಲ್ಲಿ ತಲಾ 1 ಹಾಗೂ ಛತ್ತಿಸ್‌ಗಢ, ಗುಜರಾತ್, ಮೇಘಾಲಯ ಮತ್ತು ಉತ್ತರಾಖಂಡಲ್ಲಿ ತಲಾ 1 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದೆ. ಅಲ್ಲದೆ, ಕೇರಳ ಮತ್ತು ಮಹಾರಾಷ್ಟ್ರದಲ್ಲಿ ತಲಾ ಒಂದು ಲೋಕಸಭಾ ಕ್ಷೇತ್ರಗಳಿಗೂ ಉಪಚುನಾವಣೆ ನಡೆದಿದೆ.

ಈ ಪೈಕಿ, ಪಶ್ಚಿಮ ಬಂಗಾಳದ ಒಟ್ಟು ಆರೂ ಕ್ಷೇತ್ರಗಳಲ್ಲಿಯೂ ಟಿಎಂಸಿ, ಕರ್ನಾಟಕದ ಒಟ್ಟು ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆದ್ದಿದ್ದು, ‘ಕ್ಲೀನ್‌ ಸ್ವೀಪ್’ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
image 22

ಇನ್ನು ಲೋಕಸಭಾ ಉಪಚುನಾವಣೆಯಲ್ಲಿ ಕೇರಳದ ವಯನಾಡ್‌ನಲ್ಲಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಬರೋಬ್ಬರಿ 6 ಲಕ್ಷ ಮತಗಳನ್ನು ಪಡೆದಿದ್ದು, ಸಿಪಿಐ ಅಭ್ಯರ್ಥಿ ಸತ್ಯನ್ ಮೊಕೆರಿ ಅವರನ್ನು 4 ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದಾರೆ. ಪ್ರಿಯಾಂಕಾ ಮೊದಲ ಬಾರಿಗೆ ಸಂಸದೆಯಾಗಿ ಸಂಸತ್‌ ಪ್ರವೇಶಿಸಿದ್ದಾರೆ.

ಮಹಾರಾಷ್ಟ್ರದ ನಾಂದೆಡ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಸಂತುಕ್‌ರಾವ್ ಹಂಬಾರ್ಡೆ ಅವರು ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ 45 ಸಾವಿರ ಮತಗಳ ಅಂತರದಿಂದ ಗೆದ್ದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...