ಉಪಸಮರ ಫಲಿತಾಂಶ | ವಯನಾಡ್‌ನಲ್ಲಿ ಗೆಲುವಿನತ್ತ ಪ್ರಿಯಾಂಕಾ; 1.57 ಲಕ್ಷ ಮತಗಳ ಮುನ್ನಡೆ

Date:

ರಾಹುಲ್‌ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿದೆ. ಶನಿವಾರ ಮತ ಎಣಿಕೆ ನಡೆಯುತ್ತಿದೆ. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ರಾಹುಲ್‌ ಗಾಂಧಿ ಅವರ ಸಹೋದರಿ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಗೆಲುವಿನ ಹಾದಿಯಲ್ಲಿದ್ದಾರೆ. ಬರೋಬ್ಬರಿ 1.57 ಲಕ್ಷ ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಚುನಾವಣಾ ಆಯೋಗದ ಇತ್ತೀಚಿನ ಮಾಹಿತಿ ಪ್ರಕಾರ, ಪ್ರಿಯಾಂಕಾ ಗಾಂಧಿ 2,39,554 ಮತಗಳನ್ನು ಪಡೆದಿದ್ದರೆ, ಅವರ ಪ್ರತಿಸ್ಪರ್ಧಿ ಸಿಪಿಐನ ಸತ್ಯನ್ ಮೊಕೆರಿ ಅವರು 82,082 ಮತಗಳನ್ನು ಪಡೆದಿದ್ದಾರೆ. ಪ್ರಿಯಾಂಕಾ ಮತ್ತು ಸತ್ಯನ್ ಅವರ ನಡುವಿನ ಅಂತರ ಬರೋಬ್ಬರಿ1,57,472 ಮತಗಳಷ್ಟಿದೆ.

ಇನ್ನು, ಕೆಲವೇ ಕೆಲವು ಸುತ್ತಿನ ಮತ ಎಣಿಕೆ ಮಾತ್ರವೇ ಬಾಕಿ ಉಳಿದಿದ್ದು, ಪ್ರಿಯಾಂಕಾ ಗಾಂಧಿ ಗೆಲುವು ಖಚಿತವೆಂದು ಹೇಳಲಾಗುತ್ತಿದೆ. ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...