ಸಿ.ಎ ಸೈಟ್‌ ದುರುಪಯೋಗ | ಛಲವಾದಿ ನಾರಾಯಣಸ್ವಾಮಿ ಎಂಎಲ್‌ಸಿ ಸ್ಥಾನ ರದ್ದುಪಡಿಸಲು ರಾಜ್ಯಪಾಲರಿಗೆ ಮನವಿ

Date:

ವಿಧಾನ ಪರಿಷತ್ತಿನ ಮುಖ್ಯಸಚೇತಕ ಸಲೀಂ ಅಹ್ಮದ್, ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ಎಂಎಲ್‌ಸಿ ಮಂಜುನಾಥ ಭಂಡಾರಿ, ವಸಂತ್ ಕುಮಾರ್ ಅವರ ನೇತೃತ್ವದ ನಿಯೋಗ ಮಂಗಳವಾರ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋತ್‌ ಅವರನ್ನು ಭೇಟಿ ಮಾಡಿ, ಛಲವಾದಿ ನಾರಾಯಣಸ್ವಾಮಿ ಅವರ ಎಂಎಎಲ್‌ಸಿ ಸ್ಥಾನ ರದ್ದುಪಡಿಸುವಂತೆ ಮನವಿ ಮಾಡಿತು.

ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸರ್ಕಾರದಿಂದ ಪಡೆದುಕೊಂಡ ನಿವೇಶನವನ್ನು ದುರುಪಯೋಗಪಡಿಸಿಕೊಂಡಿದ್ದು, ಕರ್ನಾಟಕ ಗೃಹ ಮಂಡಳಿಗೆ ತಪ್ಪು ಮಾಹಿತಿ ಒದಗಿಸಿ ಕಾನೂನುಬಾಹಿರವಾಗಿ ಸಿ.ಎ ಸೈಟ್ ಪಡೆದಿದ್ದಾರೆ ಎಂದು ಸಲೀಂ ಅಹ್ಮದ್ ನಿಯೋಗ ಆರೋಪಿಸಿದೆ.

ರಾಜ್ಯಪಾಲರಿಗೆ ನೀಡಿದ ದೂರಿನಲ್ಲಿ ಏನಿದೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಕ್ಷಣ ಉದ್ದೇಶಕ್ಕಾಗಿ ಪಡೆದುಕೊಂಡು ಹೌಸಿಂಗ್‌ ಬೋರ್ಡ್‌ನಲ್ಲಿರುವ ಸಿ.ಎ ಸೈಟ್‌ನಲ್ಲಿ ಧಮ್ ಬಿರಿಯಾನಿ ಹೋಟೆಲ್‌ ನಡೆಸಲು ಬಾಡಿಗೆ ಕೊಡಲಾಗಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಗಂಭೀರ ಆರೋಪ ಮಾಡಿದ್ದಾರೆ.

ಹೌಸಿಂಗ್ ಬೋರ್ಡ್ ಸದಸ್ಯರಾಗಿದ್ದ ಸಂದರ್ಭದಲ್ಲಿ ಛಲವಾದಿ ನಾರಾಯಣ ಸ್ವಾಮಿ ಅವರು ಕೆಐಎಡಿಬಿಯಿಂದ ಸಿಎ ಸೈಟ್ ಪಡೆದುಕೊಂಡಿದ್ದರು. ಅದೇ ಸಂದರ್ಭದಲ್ಲಿ ಅವರು ಆದರ್ಶ ಸ್ಕೂಲ್ ಎಜುಕೇಶನ್ ಗ್ರೂಪ್‌ನ ಸಂಚಾಲಕರೂ ಆಗಿದ್ದರು. ಶಿಕ್ಷಣ ಸಂಸ್ಥೆ ನಡೆಸಲು ಪಡೆದುಕೊಂಡ ಸೈಟ್‌ನಲ್ಲಿ ಇದೀಗ ‘ಆನಂದ್ ಧಂ ಬಿರಿಯಾನಿ ಹೋಟೆಲ್‌’ ನಡೆಯುತ್ತಿದೆ ಎಂದು ದೂರಿದ್ದಾರೆ.

“ಶಿಕ್ಷಣ ಉದ್ದೇಶಕ್ಕೆ ಪಡೆದ ಜಾಗವನ್ನು ಅದೇ ಉದ್ದೇಶಕ್ಕೆ ಬಳಸಿಕೊಳ್ಳಬೇಕು ಎಂಬುವುದು ನಿಯಮವಾಗಿದೆ. ಆದರೆ, ಶಿಕ್ಷಣ ಉದ್ದೇಶಕ್ಕಾಗಿ ಪಡೆದಿರುವ ಸಿಎ ಸೈಟ್ ನಲ್ಲಿ ಧಂ ಬಿರಿಯಾನಿ ಹೊಟೇಲ್ ನಡೆಸುತ್ತಿದ್ದಾರೆ. ರಾಜ್ಯಪಾಲರಿಗೆ ಇದನ್ನು ವಿವರವಾಗಿ ತಿಳಿಸಿದ್ದೇವೆ. ಈ ಕೂಡಲೇ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಯನ್ನು ವಜಾ ಮಾಡಬೇಕು” ಎಂದು ಸಲೀಂ ಅಹ್ಮದ್ ಮಾಧ್ಯಮಗಳಿಗೆ ತಿಳಿಸಿದರು.

“ಛಲವಾದಿ ನಾರಾಯಣಸ್ವಾಮಿ ವಿಪಕ್ಷ ನಾಯಕನ ಸ್ಥಾನದ ಗಾಂಭೀರ್ಯತೆಗೆ ಧಕ್ಕೆ ತಂದಿದ್ದಾರೆ. ಕಳಂಕಿತರು ಆ ಸ್ಥಾನದಲ್ಲಿ ಇರಬಾರದು. 2002 ರಿಂದ 2004 ರವರೆಗೆ ಛಲವಾದಿಯವರು, ಕರ್ನಾಟಕ ಹೌಸಿಂಗ್ ಬೋರ್ಡ್ ಸದಸ್ಯರು ಆಗಿರುತ್ತಾರೆ. ಅವರ ಸ್ಥಾನ ದುರುಪಯೋಗ ಮಾಡಿಕೊಂಡು ಹೌಸಿಂಗ್ ಬೋರ್ಡ್‌ಗೆ ಭೂಸ್ವಾಧೀನ ಆಗಿದ್ದ ಭೂಮಿಯನ್ನು ತಾವು ಪಡೆಯುತ್ತಾರೆ” ಎಂದು
ಮಾಜಿ ಎಂಎಲ್‌ಸಿ ರಮೇಶ್ ಬಾಬು ಕಿಡಿಕಾರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...