ರಾಜ್ಯದ 5 ಜಿಲ್ಲಾಸ್ಪತ್ರೆಗಳಲ್ಲಿ 50 ಹಾಸಿಗೆಗಳ ‘ಕ್ರಿಟಿಕಲ್ ಕೇರ್’ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ

Date:

ರಾಜ್ಯದ 5 ಜಿಲ್ಲಾಸ್ಪತ್ರೆಗಳಲ್ಲಿ 50 ಹಾಸಿಗೆಯ ತೀವ್ರ ನಿಗಾ ಆರೈಕೆ ಘಟಕಗಳ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.

ರಾಷ್ಟ್ರೀಯ ಆರೋಗ್ಯ ಯೋಜನೆಯಡಿ ಅನುಮೋದನೆಗೊಂಡ ಕ್ರಿಟಿಕಲ್ ಕೇರ್‌ಗಳಲ್ಲಿ ಆರೋಗ್ಯ ಇಲಾಖೆ ವ್ಯಾಪ್ತಿಯ 5 ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯ 6 ಆಸ್ಪತ್ರೆಗಳು ಸೇರಿದಂತೆ ಒಟ್ಟು 11 ಆಸ್ಪತ್ರೆಗಳಲ್ಲಿ ತೀವ್ರ ನಿಗಾ ಆರೈಕೆ ಘಟಕಗಳ ನಿರ್ಮಾಣಕ್ಕೆ ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿತ್ತು.

ಆರೋಗ್ಯ ಇಲಾಖೆ ವ್ಯಾಪ್ತಿಗೆ ಬರುವ 5 ಜಿಲ್ಲಾಸ್ಪತ್ರೆಗಳಲ್ಲಿ ಕ್ರಿಟಿಕಲ್ ಕೇರ್ ನಿರ್ಮಾಣಕ್ಕೆ ಇಂದು ನಡೆದ ಸಚಿವ ಸಂಪುಟ‌ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ದೊರಕಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

₹137.75 ಕೋಟಿ ವೆಚ್ವದಲ್ಲಿ 50 ಬೆಡ್ ಕ್ರಿಟಿಕಲ್ ಕೇರ್‌ಗಳ ಸ್ಥಾಪನೆಗೆ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಬೆಂಗಳೂರು ನಗರ ಜಿಲ್ಲೆಯ ಸಿ.ವಿ ರಾಮನ್ ಸಾರ್ವಜನಿಕ ಆಸ್ಪತ್ರೆಯಲ್ಲಿ 100 ಹಾಸಿಗೆಯ ತೀವ್ರ ನಿಗಾ ಆರೈಕೆ ಘಟಕವನ್ನ 45 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಉಳಿದಂತೆ ನಾಲ್ಕು ಜಿಲ್ಲಾಸ್ಪತ್ರೆಗಳಲ್ಲಿ ತಲಾ 50 ಬೆಡ್ ಗಳ ಕ್ರಿಟಿಕಲ್ ಕೇರ್ ಘಟಕಗಳ ನಿರ್ಮಾಣವನ್ನ ತಲಾ 24 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ವೆನ್‌ಲಾಕ್ ಆಸ್ಪತ್ರೆ, ವಿಜಯನಗರ ಜಿಲ್ಲಾಸ್ಪತ್ರೆ, ದೊಡ್ಡಬಳ್ಳಾಪುರ ಹಾಗೂ ರಾಮನಗರ ಜಿಲ್ಲಾಸ್ಪತ್ರೆಗಳಲ್ಲಿ ತಲಾ 50 ಬೆಡ್ ಗಳ ತೀವ್ರ ನಿಗಾ ಆರೈಕೆ ಘಟಕಗಳ ಸ್ಥಾಪನೆಗೆ ಸಂಪುಟದಿಂದ ಅನುಮೋದನೆ ದೊರೆತಿದೆ.

ಇದನ್ನು ಓದಿದ್ದೀರಾ? ಪಾಕ್ ಪರ ಘೋಷಣೆ ಆರೋಪ: ಕಾಂಗ್ರೆಸ್ ಸರ್ಕಾರ ವಜಾಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಬಿಜೆಪಿ ದೂರು

ಈ 5 ತೀವ್ರ ನಿಗಾ ಆರೈಕೆ ಘಟಕಗಳ ನಿರ್ಮಾಣ ಕಾಮಗಾರಿಗಳಿಗೆ ರಾಷ್ಟ್ರೀಯ ಆರೋಗ್ಯ ಯೋಜನೆ PM-ABHIM ಅಡಿ ಅನುದಾನ ದೊರೆಯಲಿದ್ದು, ರಾಜ್ಯ ಸರ್ಕಾರ ಕೂಡ ತನ್ನ ಪಾಲಿನ ವೆಚ್ಚವನ್ನ ಭರಿಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಿದೆ.‌ಸಲಿ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...