ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ ತೀರ್ಮಾನ

Date:

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು (ಮನರೇಗಾ) ಕೇಂದ್ರ ಸರ್ಕಾರ ಹಿಂಪಡೆದಿರುವ ಬಗ್ಗೆ ಸಚಿವ ಸಂಪುಟ ಸಭೆ ಚರ್ಚೆ ನಡೆಸಿದ್ದು, ಇದರ ಬದಲಿಗೆ ತಂದಿರುವ, ವಿಬಿ-ಜಿ ರಾಮ್ ಜಿ ಯೋಜನೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದರು.

ಇಂದು ಸಚಿವ ಸಂಪುಟ ಸಭೆ ನಂತರ ಪತ್ರಿಕಾಗೋಷ್ಠಿ ನಡೆಸಿದ ಅವರು, “ಜನರ ನ್ಯಾಯಾಲಯಕ್ಕೂ ವಿಬಿ-ಜಿ ರಾಮ್ ಜಿ ಯೋಜನೆಯ ತೆಗೆದುಕೊಂಡು ಹೋಗಲು ನಿರ್ಣಯಿಸಲಾಗಿದೆ. ಸಂವಿಧಾನದ 73 ನೇ ತಿದ್ದುಪಡಿಯಾದ ನಂತರ ದೇಶದಲ್ಲಿ ವಿಕೇಂದ್ರೀಕರಣವಾಗಿದೆ. ಈ ಯೋಜನೆಯಿಂದ ವಿಕೇಂದ್ರೀಕರಣಕ್ಕೆ ಕೊಡಲಿ ಏಟು ಬಿದ್ದಿದೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಮನರೇಗಾಕ್ಕೆ ಅನುದಾನ ಕಡಿತ: ಕೇಂದ್ರ ಸರ್ಕಾರದಿಂದ ಗ್ರಾಮೀಣ ಪ್ರದೇಶದ ಬಡವರಿಗೆ ಭಾರೀ ದ್ರೋಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“MNREGA(ಮನರೇಗಾ) ವಾಪಸ್ಸು ಪಡೆಯುವ ಮೂಲಕ ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕನ್ನು ಕಿತ್ತುಕೊಳ್ಳುವ ಕೆಲಸವನ್ನು ಮಾಡಲಾಗಿದೆ. MNREGA ಮೂಲಕ ಪಂಚಾಯಿತಿಗಳಲ್ಲಿ ಆಸ್ತಿ ನಿರ್ಮಾಣವಾಗುತ್ತಿತ್ತು. ಈಗ ಕರಾಳ ಕಾನೂನು ತಂದು ಕಾರ್ಮಿಕರು ಗುತ್ತಿಗೆದಾರರು ಮಾಡಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಲ್ಲಿ ಕೆಲಸ ಮಾಡಬೇಕಿದೆ” ಎಂದು ದೂರಿದರು.

“ಕೇಂದ್ರ ಸರ್ಕಾರ ಕೂಲಿ ಕಾರ್ಮಿಕರ ಹಿತ ಕಾಪಾಡುವ ಆಸಕ್ತಿ ಹೊಂದಿಲ್ಲ, ಉದ್ಯೋಗದ ಹಕ್ಕನ್ನು ಕಿತ್ತುಕೊಂಡಿದೆ. ಗ್ರಾಮಗಳಲ್ಲಿ ಯಾವ ಕೆಲಸವಾಗಬೇಕೆಂದು ತೀರ್ಮಾನಿಸುವ ಅಧಿಕಾರ ಪಂಚಾಯಿತಿಗಳಿಗಿತ್ತು. ಈಗ ಅದನ್ನು ಸಂಪೂರ್ಣವಾಗಿ ಕಿತ್ತುಕೊಂಡು ಕೆಲಸ ಎಲ್ಲಿ ಆಗಬೇಕು ಎಂದು ಕೇಂದ್ರ ಸರ್ಕಾರ ನಿರ್ದೇಶನ ನೀಡುತ್ತದೆ. ಈ ಕರಾಳ ಶಾಸನವನ್ನು ಕರ್ನಾಟಕ ಸರ್ಕಾರ ತೀವ್ರವಾಗಿ ವಿರೋಧಿಸುತ್ತದೆ. ರಾಜಕೀಯವಾಗಿ, ಕಾನೂನಾತ್ಮಕವಾಗಿ ಹಾಗೂ ಜನರ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ” ಎಂದು ತಿಳಿಸಿದರು.

“ಮೇಲ್ನೋಟಕ್ಕೆ 125 ದಿನ ಕೆಲಸ ನೀಡುವುದು ಎಂದು ಹೇಳಿದ್ದರೂ, ನಿರ್ದಿಷ್ಟವಾಗಿ ಆಗುವಂತಿಲ್ಲ. ಇದಕ್ಕೆ ಹಣವೆಲ್ಲಿದೆ? ಶೇ.40ರಷ್ಟು ಅನುದಾನವನ್ನು ರಾಜ್ಯ ಸರ್ಕಾರ ಭರಿಸಬೇಕಿದೆ. ಭಾರಿ ಪ್ರಮಾಣದ ಆರ್ಥಿಕ ಹೊರೆ ಬೀಳುವಂತಿದ್ದರೆ ಸಂಬಂಧಪಟ್ಟ ರಾಜ್ಯಗಳೊಂದಿಗೆ ಚರ್ಚೆ ಮಾಡಬೇಕು. ಆದರೆ ಕೇಂದ್ರ ಸರ್ಕಾರ ಹಾಗೆ ಮಾಡಿಲ್ಲ. 15ನೇ ಹಣಕಾಸು ಆಯೋಗದ ಶಿಫಾರಸುಗಳು ಅನುಷ್ಠಾನಕ್ಕೆ ಬಂದ ನಂತರ ಇದನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ” ಎಂದು ಆರೋಪಿಸಿದರು.

ಇದೇ ಸಂದರ್ಭದಲ್ಲಿ ಪಂಚಾಯತ್ ಚುನಾವಣೆ ಬಗ್ಗೆ ಮಾಹಿತಿ ನೀಡಿದರು. “ಪಂಚಾಯತಿ ಚುನಾವಣೆಯನ್ನು ಆದಷ್ಟು ಶೀಘ್ರವೇ ನಡೆಸಲು ತೀರ್ಮಾನಿಸಲಾಗಿದೆ. ಹಲವಾರು ಪಂಚಾಯತಿಗಳು ಸುಪ್ರೀಂ ಕೋರ್ಟಿಗೆ ಹೋಗುವಂತೆ ರಾಜ್ಯ ಸರ್ಕಾರವನ್ನು ಕೋರಿವೆ. ಒಂದೆರಡು ದಿನಗಳಲ್ಲಿ ಈ ಬಗ್ಗೆ ತೀರ್ಮಾನ ಮಾಡಲಾಗುವುದು” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...