ಸಚಿವ ಸಂಪುಟ ಸಭೆ | ಕೋವಿಡ್ ಅವ್ಯವಹಾರ ತನಿಖೆಗೆ ಎಸ್‌ಐಟಿ, ಸಂಪುಟ ಉಪಸಮಿತಿ ರಚನೆ

Date:

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಕೋವಿಡ್​ ಹಗರಣಕ್ಕೆ ಸಂಬಂಧಿಸಿದಂತೆ ಕ್ಯಾಬಿನೆಟ್‌ ಸಬ್ ಕಮಿಟಿ ಜೊತೆ ಎಸ್‌ಐಟಿ ರಚಿಸುವ ಬಗ್ಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಹಲವು ವಿಷಯಗಳನ್ನು ಚರ್ಚಿಸಲಾಗಿದೆ.

ಸಂಪುಟ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್‌ ​ಕೆ ಪಾಟೀಲ್​, “ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ಕುನ್ಹಾ ಆಯೋಗ ಭಾಗಶಃ ವರದಿ ನೀಡಿದೆ. ಅದರ ಮೇಲೆ ಕೆಲವು ನಿರ್ಣಯ ತೆಗೆದುಕೊಂಡಿದ್ದೇವೆ. ಇದರಲ್ಲಿ ಕ್ರಿಮಿನಲ್ ಕಂಟೆಂಟ್ ಇರುವುದರಿಂದ ಎಸ್ಐಟಿ ರಚನೆಗೆ ತೀರ್ಮಾನ ಮಾಡಿದ್ದೇವೆ ಹಾಗೂ ಕ್ಯಾಬಿನೆಟ್ ಸಬ್ ಕಮಿಟಿ ಕೂಡ ರಚನೆ ಮಾಡಲು ತೀರ್ಮಾ‌ನ ಮಾಡಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸತ್ಯಸಂಶೋಧನಾ ವರದಿಯ ನಂತರ ಯಾರ ಪಾತ್ರ ಏನು ಎಂಬುದನ್ನು ತನಿಖೆ ಮಾಡಿ ಎಸ್.ಐ.ಟಿ ಕ್ರಮ ಕೈಗೊಳ್ಳಲಿದೆ. ಕುನ್ಹಾ ಆಯೋಗವು 11 ಸಂಪುಟಗಳಲ್ಲಿ ವರದಿ ಸಲ್ಲಿಸಿದ್ದು, 7223.64 ಕೋಟಿ ರೂ. ಮೊತ್ತದ ವೈದ್ಯಕೀಯ ಉಪಕರಣಗಳ ಖರೀದಿಯ ಅವ್ಯವಹಾರದ ಕುರಿತು ತನಿಖೆ ನಡೆಸಿದೆ” ಎಂದರು.

“500 ಕೋಟಿಗಳ ಮೊತ್ತದ ವಸೂಲಾತಿ ಶಿಫಾರಸ್ಸು ಮಾಡಿದೆ. ಬಿಬಿಎಂಪಿ ನಾಲ್ಕು ವಲಯಗಳ ಮತ್ತು ರಾಜ್ಯದ ಎಲ್ಲ 31 ಜಿಲ್ಲೆಗಳ ವರದಿ ಸಲ್ಲಿಕೆ ಬಾಕಿಯಿದೆ. 55000 ಕಡತಗಳನ್ನು ಸಂಬಂಧಪಟ್ಟ ಇಲಾಖೆಗಳಿಂದ ಪಡೆದು ಪರಿಶೀಲಿಸಿ ಆಯೋಗವು ವರದಿ ಸಲ್ಲಿಸಿದೆ” ಎಂದು ಹೇಳಿದರು.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ ಜನಗಣತಿ ಎತ್ತುವ ಹಲವು ಪ್ರಶ್ನೆಗಳು

“ಈ ತನಿಖೆ ಮತ್ತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿರಂತರವಾಗಿ ಮೇಲ್ವಿಚಾರಣೆ ನಡೆಸಲು ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ. ಸಚಿವ ಸಂಪುಟದ ಉಪಸಮಿತಿಯ ಸದಸ್ಯರನ್ನು ಅಂತಿಮಗೊಳಿಸಲು ಮುಖ್ಯಮಂತ್ರಿಯವರಿಗೆ ಅಧಿಕಾರ ನೀಡಲಾಗಿದೆ” ಎಂದು ಸಚಿವರು ವಿವರಿಸಿದರು.

“ಹಗರಣದಲ್ಲಿ ಭಾಗಿಯಾದ ಕಂಪನಿಗಳು, ಸಂಸ್ಥೆಗಳನ್ನು ಬ್ಲ್ಯಾಕ್ ಲಿಸ್ಟ್​ಗೆ ಸೇರಿಸಲು ನಿರ್ಧಾರ ಮಾಡಲಾಗಿದೆ. ಎಲ್ಲೆಲ್ಲಿ ಕ್ರಿಮಿನಲ್ ಎಲಿಮೆಂಟ್ ಇದೆ ಎಸ್ಐಟಿ ಅದರ ಬಗ್ಗೆ ಗಮನ ಹರಿಸುತ್ತದೆ. ಯಾರ ಪಾತ್ರ ಏನೂ ಎಂಬುದು ಎಸ್ಐಟಿ ತನಿಖೆಯಲ್ಲಿ ಗೊತ್ತಾಗುತ್ತದೆ. ಪೂರ್ಣ ವರದಿ ಬಂದ ಮೇಲೆ ಏನು ಅವ್ಯವಹಾರ, ಯಾರು ಪಾಲುದಾರರು ಗೊತ್ತಾಗುತ್ತದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...