ಸಚಿವ ಸಂಪುಟ ಸಭೆ | ಗ್ರಾಮ ಪಂಚಾಯತಿ ವಿದ್ಯುತ್ ಬಿಲ್ಲಿನ ಬಡ್ಡಿ ಮನ್ನಾ

Date:

ವಿದ್ಯುತ್ ಸರಬರಾಜು ಕಂಪನಿಗಳು ಗ್ರಾಮ ಪಂಚಾಯತಿ, ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಕುಡಿಯುವ ನೀರು ಮತ್ತು ಬೀದಿ ದೀಪ ಸ್ಥಾವರಗಳಿಗೆ ವಿದ್ಯುತ್ ಸರಬರಾಜು ಮಾಡುತ್ತಿವೆ. ಆದರೆ, ವಿದ್ಯುತ್ ಶುಲ್ಕವನ್ನು ಗ್ರಾಮ ಪಂಚಾಯತಿಗಳು ಪಾವತಿ ಮಾಡಿಲ್ಲ. ಎಲ್ಲ ಗ್ರಾಮ ಪಂಚಾಯತಿಗಳ ಒಟ್ಟು ವಿದ್ಯುತ್‌ ಶುಲ್ಕವು 2024ರ ಮಾರ್ಚ್‌ ಅಂತ್ಯದ ವೇಳೆಗೆ 6,509 ಕೋಟಿ ರೂ. ಬಾಕಿ ಉಳಿದಿದೆ. ಅದರಲ್ಲಿ, ಅಸಲು ಮೊತ್ತ 5,257.70 ಕೋಟಿ ರೂ. ಇದೆ. ಬಡ್ಡಿ ಮೊತ್ತವು 1,350 ಕೋಟಿ ರೂ. ಇದ್ದು, ಆ ಬಡ್ಡಿ ಮೊತ್ತವನ್ನು ಮನ್ನಾ ಮಾಡಲು ರಾಜ್ಯ ಸಚಿವ ಸಂಪುಟವು ನಿರ್ಧರಿಸಿದೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್‌.ಕೆ ಪಾಟೀಲ್, “ಮೈಸೂರು ಮತ್ತು ದಾವಣಗೆರೆ ಈ 2 ಜಿಲ್ಲಾ ಆಸ್ಪತ್ರೆಗಳಲ್ಲಿ ಇನ್-ಹೌಸ್ ಮಾದರಿಯಲ್ಲಿ 2 ಎಂಆರ್‌ಐ ಸ್ಕ್ಯಾನ್‌ ಮಷಿನ್‌ಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ” ಎಂದು ತಿಳಿಸಿದ್ದಾರೆ.

“ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಸಿಟಿ ಸ್ಕ್ಯಾನ್‌ ಮತ್ತು ಎಂಆರ್‌ಐ ಸೇವೆಗಳನ್ನು ಎಲ್ಲ ಫಲನುಭವಿಗಳಿಗೆ ಉಚಿತವಾಗಿ ಒದಗಿಸುವುದು. ರೋಗ ಪತ್ತೆ ಪರೀಕ್ಷೆಗಳಿಗಾಗಿ ಫಲಾನುಭವಿಗಳು ಮಾಡುವ ಹೆಚ್ಚಿನ ಸ್ವಂತ ವೆಚ್ಚವನ್ನು ಕಡಿಮೆ ಮಾಡುವುದು. ನಿಖರವಾದ ರೋಗಪತ್ತೆ ಪರೀಕ್ಷೆಗಳ ಆಧಾರದ ಮೇಲೆ ಸರಿಯಾದ ಚಿಕಿತ್ಸೆಯನ್ನು ಒದಗಿಸಲಾಗುವುದು. ನಿಖರವಾದ ರೋಗಪತ್ತೆ ಸೇವೆಗಳನ್ನು ಒದಗಿಸುವುದರಿಂದ ದೀರ್ಘಕಾಲದ ಕಾಯಿಲೆಗಳನ್ನು ತಡೆಗಟ್ಟಬಹುದು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮರುನಾಮಕರಣ ಮಾಡಲು ನಿರಕ್ಷೇಪಣಾ ಪತ್ರ ಕೋರಿ, ಭಾರತ ಸರ್ಕಾರದ ಗೃಹ ಮಂತ್ರಾಲಯಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಕೇಂದ್ರ ಗೃಹ ಮಂತ್ರಾಲಯ ತಿರಸ್ಕರಿಸಿದೆ. ಆದರೆ, ಭಾರತ ಸಂವಿಧಾನದ 7ನೇ ಪರಿಚ್ಛೇದವು ಒಕ್ಕೂಟ ಪಟ್ಟಿಯಲ್ಲಿ ಬರುವ ವಿವಿಧ ವಿಷಯಗಳ ಬಗ್ಗೆ ವಿವರಿಸುತ್ತದೆ. ಅದರ ಅಡಿಯಲ್ಲಿ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮರುನಾಮಕರಣ ಮಾಡಿ, ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಲು ಸಚಿವ ಸಂಪುಟ ಅನುಮೋದಿಸಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...