ನಾಳೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ, ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

Date:

ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ (ಸೆ.17) ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ. ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು (ಸೆ.16) ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆಯೂ ಚರ್ಚಿಸಲಾಗುವುದು. ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ಪರವಾಗಿದೆ” ಎಂದರು.

371 ಜೆ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ 371 ಜೆ ಕಾನೂನು ತರಲಾಗಿದ್ದು,, ಇದಕ್ಕಾಗಿ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿಮುಖ್ಯಮಂತ್ರಿ ಧರಂಸಿಂಗ್ ಅವರು ಶ್ರಮವಹಿಸಿದ್ದರು. 2013 ರಲ್ಲಿ ಈ ಕಾನೂನನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸಿತೇ ಹೊರತರು ಬಿಜೆಪಿಯವರಲ್ಲ. ವಾಜಪೇಯಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈ ಕಾನೂನನ್ನು ಜಾರಿಗೆ ತರಲು ತಿರಸ್ಕರಿಸಿದ್ದರು” ಎಂದು ಹೇಳಿದರು.

ಕಲ್ಯಾಣ ಕರ್ನಾಟಕಕ್ಕೆ 5,000 ಕೋಟಿ ಅನುದಾನ

“ಕಾಂಗ್ರೆಸ್ ಸರ್ಕಾರದ ಮೇಲೆ ಕಲ್ಯಾಣ ಕರ್ನಾಟಕ ಭಾಗದ ಜನರ ನಿರೀಕ್ಷೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಡವರ ಪರವಾದ ಸರ್ಕಾರ ನಮ್ಮದು. ಆದ್ದರಿಂದ ಈ ಭಾಗದ ಅಭಿವೃದ್ಧಿಗಾಗಿ 5000 ಕೋಟಿ ರೂ.ಗಳನ್ನು ನೀಡಲಾಗಿದೆ” ಎಂದರು.

ನಾಗಮಂಗಲ ಪ್ರಕರಣ- ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ಅಮಾನತ್ತು

ಮಂಡ್ಯ ಜಿಲ್ಲೆಯ ನಾಗಮಂಗಲದ ಗಲಭೆ ಪ್ರಕರಣದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, “ನಾಗಮಂಗಲ ಶಾಂತವಾಗಿದೆ. ಗಲಭೆ ಪ್ರಕರಣಕ್ಕೆ ಪೊಲೀಸರ ಕರ್ತವ್ಯ ವೈಫಲ್ಯವ ಕಾರಣವೆಂದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ, ಸಂಬಂಧಪಟ್ಟ ಉಪಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇನ್ಸ್ ಪೆಕ್ಟರ್ ನ್ನು ಅಮಾನತ್ತುಗೊಳಿಸಲಾಗಿದೆ. ಈ ಪ್ರಕರಣದಲ್ಲಿ ಹಾನಿಗೊಳಗಾದ ಅಂಗಡಿ ಮುಂಗಟ್ಟ, ವಾಹನಗಳಿಗೆ ಪರಿಹಾರ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು” ಎಂದು ಹೇಳಿದರು..

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...