ಸಚಿವ ಸಂಪುಟ ಸಭೆ | ಒಳಮೀಸಲಾತಿ ಜಾರಿಗೆ ಸಂವಿಧಾನ ತಿದ್ದುಪಡಿಗೆ ಕೇಂದ್ರಕ್ಕೆ ಶಿಫಾರಸ್ಸು

Date:

ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಇರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿ ನೀಡುವ ನಿಟ್ಟಿನಲ್ಲಿ ಸಂವಿಧಾನದ 341(3) ನೇ ವಿಧಿಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ನಿಟ್ಟಿನಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಒಳಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೊಳಿಸಬೇಕು ಎಂದು ಪರಿಶಿಷ್ಟ ಎಡಗೈ ಸಮುದಾಯದ ಸಚಿವರು ಮತ್ತು ಶಾಸಕರು ಪಟ್ಟು ಹಿಡಿದಿದ್ದರು. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಳಮೀಸಲಾತಿ ಜಾರಿಗೊಳಿಸುವ ಭರವಸೆಯನ್ನು ಕಾಂಗ್ರೆಸ್‌ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯ ಬಳಿಕ ಡಾ. ಎಚ್ ಸಿ ಮಹದೇವಪ್ಪ ಮಾತನಾಡಿ, “ಸುಮಾರು ಎರಡು ದಶಕಗಳಿಂದ ದಲಿತರ ಒಳಪಂಗಡಗಳು ಒಳ‌ಮೀಸಲಾತಿಗೆ ಬೇಡಿಕೆ ಇಟ್ಟಿದ್ದವು. ಚಿತ್ರದುರ್ಗದಲ್ಲಿ ಎಸ್‌ಸಿ, ಎಸ್‌ಟಿ ಸಮಾವೇಶದಲ್ಲಿ ಸದಾಶಿವ ಆಯೋಗದ ವರದಿಯನ್ನು ವಿಧಾನಸಭೆಯಲ್ಲಿ ಮಂಡನೆ ಮಾಡುತ್ತೇವೆ ಎಂದಿದ್ದೆವು. ಆದರೆ ಬಿಜೆಪಿ ಸರ್ಕಾರ ತರಾತುರಿಯಲ್ಲಿ ಸಂಪುಟ ಉಪ ಸಮಿತಿ ರಚನೆ ಮಾಡಿ ಸದಾಶಿವ ಆಯೋಗದ ವರದಿ ಅಪ್ರಸ್ತುತ ಎಂದು ಶಿಫಾರಸು ಮಾಡಿತ್ತು. 101 ಜಾತಿಗಳ ಹಿತ ಕಾಪಾಡಲು ಯಾರನ್ನು ಹೊರಗಡೆ ಬಿಡುವ ಪ್ರಶ್ನೆ ಇಲ್ಲ. ಈ ನಿಟ್ಟಿನಲ್ಲಿ 341(3) ಗೆ ತಿದ್ದುಪಡಿ ಮಾಡದೆ ಒಳ‌ಮೀಸಲಾತಿ ಕೊಡಲು ಸಾಧ್ಯ ಇಲ್ಲ. ಈ ನಿಟ್ಟಿನಲ್ಲಿ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಂಪುಟ ನಿರ್ಧಾರ ಮಾಡಲಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಸಚಿವ ಸಂಪುಟ ಸಭೆ | ಗೃಹಜ್ಯೋತಿ ಯೋಜನೆಯ ನಿಯಮ ಬದಲಾವಣೆ: ಶೇ.10ರಷ್ಟು ಬದಲು 10 ಯುನಿಟ್‌ ಫ್ರೀ

ವಿಶ್ವಗುರು ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ

ವಿಶ್ವಕ್ಕೆ ಸಮಾನತೆ ಸಾರಿದ ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿಯನ್ನಾಗಿ ಘೋಷಣೆ ಮಾಡುವಂತೆ ಲಿಂಗಾಯತ ಮಠಾಧೀಶರು, ಪ್ರಗತಿಪರ ಸ್ವಾಮೀಜಿಗಳು, ಪ್ರಗತಿಪರ ಚಿಂತಕರು, ರಾಜಕೀಯ ಮುಖಂಡರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು. ಈ ಬೇಡಿಕೆಗೆ ಈಗ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿ ಘೋಷಿಸಿದೆ.

ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರನ್ನಾಗಿ ಘೋಷಣೆ ಮಾಡುವಂತೆ ತರಳಬಾಳು ಜಗದ್ಗುರುಗಳು, ಮಾದರ ಚೆನ್ನಯ್ಯ ಸ್ವಾಮೀಜಿ, ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶ್ರೀಶೈಲ್ ಜಗದ್ಗುರುಗಳು, ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಡಾ.ರಾಜಶೇಖರ ಶಿವಾಚಾರ್ಯರು, ಡಾ.ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ, ವೀರಭದ್ರ ಶಿವಾ ಕಡಕಂಚಿ, ಜ್ಞಾನಪ್ರಕಾಶ ಸ್ವಾಮೀಜಿ, ಹುಲಸೂರ ಶ್ರೀಗಳು, ಅಕ್ಕ ಅನ್ನಪೂರ್ಣ ತಾಯಿ, ಮೇಹಕರ ಶ್ರೀಗಳು, ಭಾತಂಬ್ರಾ ಶ್ರೀಗಳು, ಡಾ.ಸಿದ್ದರಾಮ ಬೆಲ್ದಾಳ ಶರಣರು, ಡಾ.ಗಂಗಾಂಬಿಕೆ ಅಕ್ಕ, ಭಂತೆ ವರಜ್ಯೋತಿ, ಭಂತೆ ನಾಗರತ್ನ ಸೇರಿದಂತೆ ವಿವಿಧ ಮಠಗಳ ಸುಮಾರು 48 ಶ್ರೀಗಳು ಮನವಿ ಪತ್ರಕ್ಕೆ ಹಾಕಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಳೆದ ವಾರ ಮನವಿ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...