ಸಚಿವ ಸಂಪುಟ ಸಭೆ | ಕಾಲೇಜುಗಳಿಗೆ ನೌಕರರ ನೇಮಕ; ಬುಡಕಟ್ಟು ಪಂಗಡಗಳಿಗೆ ಪೌಷ್ಟಿಕ ಆಹಾರ ಖರೀದಿಗೆ ಒಪ್ಪಿಗೆ

Date:

ಕಾಲೇಜು ಶಿಕ್ಷಣ ಇಲಾಖೆ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯವಾಗಿ ಭರ್ತಿ ಮಾಡಬೇಕಿರುವ 347 ಗ್ರೂಪ್-ಡಿ ನೌಕರರು ಮತ್ತು 102 ಡಾಟಾ ಎಂಟ್ರಿ ನೌಕರರನ್ನು (ಒಟ್ಟು 449) ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ನೇಮಕಾತಿಯಲ್ಲಿ ಸಾಮಾಜಿಕ ನ್ಯಾಯ ಪಾಲನೆಗಾಗಿ ಮೀಸಲಾತಿ ಪದ್ದತಿಯನ್ನು ಅನುಸರಿಸಲು ಕೂಡ ನಿರ್ಧರಿಸಿದೆ.

ವಿಧಾನಸೌಧದಲ್ಲಿ ಗುರುವಾರ ಸಚಿವ ಸಂಪುಟ ಸಭೆ ನಡೆದಿದೆ. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್ ಮಾತನಾಡಿದ್ದಾರೆ. “ರಾಜ್ಯದ 8 ಜಿಲ್ಲೆಗಳಲ್ಲಿ ವಾಸಿಸುತ್ತಿರುವ 11 ಬುಡಕಟ್ಟು ಪಂಗಡ – ಕೊರಗ, ಜೇನುಕುರುಬ, ಸೋಲಿಗ, ಎರವ, ಕಾಡುಕುರುಬ, ಮಲೆಕುಡಿಯ, ಸಿದ್ದಿ, ಹಸಲರು, ಗೌಡಲು, ಗೊಂಡ ಮತ್ತು ಬೆಟ್ಟಕುರುಬ – ಜನಾಂಗದ ಒಟ್ಟು 47,859 ಕುಟುಂಬಗಳಿಗೆ ಪೌಷ್ಟಿಕ ಆಹಾರವನ್ನು ಉಚಿತವಾಗಿ ಸರಬರಾಜು ಮಾಡಲು ಟೆಂಡರ್ ಆಹ್ವಾನಿಸಿ, ಆಹಾರ ಖರೀದಿಸಲು ಅನುಮೋದನೆ ದೊರೆತಿದೆ” ಎಂದು ಅವರು ತಿಳಿಸಿದ್ದಾರೆ.

“ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್‌ ತೆರೆಯಲು ನಿರ್ಧರಿಸಲಾಗಿದೆ. ಕೆಎಸ್‌ಆರ್‌ಟಿಸಿ ಎಲ್ಲ ನಿಗಮಗಳಿಂದ ಒಟ್ಟು 750 ಎಲೆಕ್ಟ್ರಿಕ್‌ ಬಸ್‍ಗಳನ್ನು ಜೆಸಿಸಿ ಆಧಾರದಲ್ಲಿ ಕಾರ್ಯಾಚರಣೆಗೆ ತರಲು ಅನುಮೋದನೆ ದೊರೆತಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯ ನೀರಾವರಿ (ನೀರಿನ ಕರ ವಿಧಿಸುವಿಕೆ) ನಿಯಮಗಳು-1965ಕ್ಕೆ ತಿದ್ದುಪಡಿ ಮಾಡಲು ಅಧಿಸೂಚನೆ ಹೊರಡಿಸಲು ನಿರ್ಧರಿಸಲಾಗಿದೆ. ಕಾಲುವೆ, ಕೆರೆ, ಜಲಾಶಯಗಳ ಮೂಲಕ ಒದಗಿಸುವ ನೀರಿಗೆ ಪ್ರತಿ ಎಂಸಿಎಫ್‌ಟಿಗೆ 3 ಲಕ್ಷ ರೂ. ಹಾಗೂ ರಾಜಧನ, ನೈಸರ್ಗಿಕ ಜಲಮಾರ್ಗ, ನದಿ, ಹಳ್ಳಗಳಿಂದ ಒದಗಿಸುವ ಪ್ರತಿ ಎಂಸಿಎಫ್‌ಟಿಗೆ 1.50 ಲಕ್ಷ ರೂ. ರಾಜಧನ ನಿಗದಿಪಡಿಸಲು ಅನುಮೋದನೆ ದೊರೆತಿದೆ. ಅಲ್ಲದೆ, ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಕಾಮಗಾರಿಗಳಿಗೆ 36.98 ಕೋಟಿ ರೂ.ಮೊತ್ತದ ಆಸ್ತಿ ಮತ್ತು ಹೊಣೆಗಾರಿಕೆಯನ್ನು ರಾಜ್ಯ ನೀರಾವರಿ ನಿಗಮದಿಂದ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಹಸ್ತಾಂತರಿಸಲು ಅನುಮೋದಿಸಲಾಗಿದೆ” ಎಂದು ವಿವರಿಸಿದ್ದಾರೆ.

“ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿರುವ ಲ್ಯಾಬ್‍ಗಳಿಗೆ ರಾಸಾಯನಿಕಗಳು ಹಾಗೂ ಕಂಪ್ಯೂಟರ್ ರೇಡಿಯಾಗ್ರಫಿ ಸಿಸ್ಟಂಗಳಿಗೆ ಡ್ರೈ ಲೇಸರ್ ಎಕ್ಸ್ ರೇ ಫಿಲ್ಮ್ ಮತ್ತು ಪರಿಕರಗಳನ್ನು ರಾಷ್ಟ್ರೀಯ ಉಚಿತ ರೋಗ ಪತ್ತೆ ಮತ್ತು ಉಚಿತ ಔಷಧಿ ಸೇವೆಗಳ ಕಾರ್ಯಕ್ರಮದಡಿ ಖರೀದಿಸಲು ನಿರ್ಧರಿಸಲಾಗಿದೆ” ಎಂದಿದ್ದಾರೆ.

“ಮೈಸೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ಅಂಬೇಡ್ಕರ್ ಭವನದ ಕಾಮಗಾರಿ ಪೂರ್ಣಗೊಳಿಸಲು 19.10 ಕೋಟಿ ರೂ. ಬಿಡಗಡೆಗೆ ಅನುಮೋದನೆ ಸಿಕ್ಕಿದೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನಲ್ಲಿ ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣ ಕಾಮಗಾರಿಗೆ 12 ಕೋಟಿ ರೂ. ಮೊತ್ತದ ಅಂದಾಜು ಪಟ್ಟಿಗೂ ಅನುಮೋದನೆ ದೊರೆತಿದೆ” ಎಂದು ಎಚ್‌.ಕೆ ಪಾಟೀಲ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...