ಎನ್‌ಪಿಎಸ್ ರದ್ದುಗೊಳಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ : ಸಿಎಂ ಸಿದ್ದರಾಮಯ್ಯ

Date:

  • ಸಂಪುಟ ಸಭೆಯಲ್ಲಿ ಚರ್ಚಿಸಿ ಎನ್ ಪಿಎಸ್ ಭವಿಷ್ಯ ನಿರ್ಧಾರ
  • ಸಿಎಂ ಭೇಟಿಯಾಗಿ ಮನವಿ ಸಲ್ಲಿಸಿದ ಸರ್ಕಾರಿ ನೌಕರರ ಸಂಘ

ಹಳೆಯ ಪಿಂಚಣಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಬಜೆಟ್ ವೇಳೆ ಘೋಷಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಕೋರಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳ ನಿಯೋಗವು ಇಂದು ಅವರನ್ನು ಭೇಟಿ ಮಾಡಿತು.

ನಿಯೋಗದೊಂದಿಗಿನ ಮಾತುಕತೆ ಬಳಿಕ ಸಭೆ ಬಗ್ಗೆ ಮಾಹಿತಿ ನೀಡಿದ ಸಿಎಂ, ನಿಮ್ಮ ಮನವಿ ಬಗ್ಗೆ ಸರ್ಕಾರ ಚರ್ಚೆ ನಡೆಸಲಿದೆ. ನೀವು ಕೂಡ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲು ನೌಕರರು ಕೆಲಸ ಮಾಡಬೇಕು, ಪ್ರಾಮಾಣಿಕವಾಗಿ ಕಾರ್ಯಕ್ರಮಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕೆಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ವಿಧಾನ ಪರಿಷತ್ ಸದಸ್ಯ ವಿ.ಎಸ್ ಉಗ್ರಪ್ಪ ಅವರು ಮಾತನಾಡಿ, 1.4.2006 ರಲ್ಲಿ ಎನ್.ಪಿ.ಎಸ್ ಜಾರಿಯಾಗಿದೆ. 2.98 ಲಕ್ಷ ನೌಕರರು ಇದರ ವ್ಯಾಪ್ತಿಗೆ ಒಳಪಡುತ್ತಾರೆ. ಪಿಂಚಣಿ ಮೊತ್ತವನ್ನು ಎನ್.ಎಸ್.ಡಿ.ಎಲ್ ನಲ್ಲಿ ಠೇವಣಿ ಇಡಲಾಗಿದೆ.

ಈ ಮೊತ್ತ ಬಳಕೆ ಮಾಡಿ ಇವರು ನಿವೃತ್ತಿಯಾಗುವ ವೇಳೆಗೆ ಲಭ್ಯವಾಗುವಂತೆ ಜಿ.ಪಿ.ಎಫ್ ನಲ್ಲಿ ಇಡಬಹುದು. ವೋಟ್ ಫಾರ್ ಒ ಪಿ ಎಸ್ ನಲ್ಲಿ ಭಾಗಿಯಾದವರ ಮೇಲೆ ಕೈಗೊಂಡಿರುವ ಶಿಸ್ತಿನ ಕ್ರಮ ಕೈಬಿಡುವ ಕುರಿತು ಸರ್ಕಾರ ತೀರ್ಮಾನಿಸಬೇಕು ಎಂದು ವಿವರಿಸಿದರು.ಸಿದ್ದರಾಮಯ್ಯ ಎನ್_ಪಿಎಸ್

ಈ ಸುದ್ದಿ ಓದಿದ್ದೀರಾ?:ಆಸ್ಪತ್ರೆ ಬಿಲ್: ವಿಮೆ ಯೋಜನೆ ಸರಳೀಕರಿಸಲು ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ರಾಜಸ್ತಾನ, ಛತ್ತೀಸ್‌ಘಡದಲ್ಲಿ ಎನ್‌ಪಿಎಸ್‌ ರದ್ದಾಗಿದ್ದು, ಕರ್ನಾಟಕದಲ್ಲೂ ಅದನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು. ಎನ್.ಪಿ.ಎಸ್ ರದ್ದು ಮಾಡುವುದರಿಂದ ಯೋಜನೆಯಡಿ ಲಭ್ಯವಿರುವ ಒಟ್ಟು 19 ಸಾವಿರ ಕೋಟಿ ಹಣವನ್ನು ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ದೊರೆಯಲಿದೆ.

ನೌಕರರ ಪಾಲಿನ 9 ಸಾವಿರ ಕೋಟಿ ಜಿಪಿಎಫ್ ಗೆ ಪರಿವರ್ತನೆ ಮಾಡಿಕೊಳ್ಳುಬಹುದು ಹಾಗೂ ಸರ್ಕಾರದ 10 ಸಾವಿರ ಕೋಟಿ ರೂ.ಗಳು ಸರ್ಕಾರದ ಪಾಲನ್ನು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಳಕೆ ಮಾಡಿಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ಎನ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಂ ತೇಜ ತಿಳಿಸಿದರು.

ಮಾಜಿ ಸಚಿವ ವಿ.ಎಸ್.ಉಗ್ರಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಕೆ.ಪಿ.ಟಿ.ಸಿಎಲ್, ಆರೋಗ್ಯ, ಜಲಮಂಡಳಿ, ಕಂದಾಯ ಇಲಾಖೆ ನೌಕರರ ಸಂಘ ಸೇರಿದಂತೆ ಹಲವು ಸಂಘಟನೆಗಳ ನೂರಕ್ಕೂ ಹೆಚ್ಚು ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...