ಸಂಪುಟ ಪುನರ್‌ ರಚನೆ | ನಿಷ್ಕ್ರಿಯ ಸಚಿವರಿಗೆ ಕೊಕ್ –ನಾಗೇಂದ್ರಗೆ ಮತ್ತೆ ಮಣೆ?

Date:

ರಾಜ್ಯದಲ್ಲಿ ಕಾಂಗ್ರೆಸ್‌ ಒಳಗೆ ಅಧಿಕಾರ ಜಟಾಪಟಿ ನಡೆಯುತ್ತಲೇ ಇದೆ. ಅಂತಹ ಜಟಾಪಟಿ ಇರುವಂತೆ ನೋಡಿಕೊಳ್ಳಲಾಗುತ್ತಿದೆ ಎಂಬ ಆರೋಪಗಳಿವೆ. ಮುಖ್ಯಮಂತ್ರಿ ಬದಲಾವಣೆ, ಮೂರು ಉಪ ಮುಖ್ಯಮಂತ್ರಿ ಹುದ್ದೆಗಳ ರಚನೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಕಾಂಗ್ರೆಸ್‌ ಒಳಗೆ ಚರ್ಚೆಗಳು ನಡೆದು, ಆ ಎಲ್ಲ ಚರ್ಚೆಗಳಿಗೆ ಬ್ರೇಕ್‌ ಹಾಕಲಾಗಿತ್ತು. ಅದಾದ ಬಳಿಕ, ಸಂಪುಟ ಪುನರ್‌ ರಚನೆಯ ಚರ್ಚೆ ಕೆಳೆದ ಕೆಲ ತಿಂಗಳುಗಳಿಂದ ಮುನ್ನೆಲೆಯಲ್ಲಿತ್ತು. ಇದೀಗ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ, ಸಂಪುಟ ಪುನರ್ ರಚನೆ ಅಥವಾ ಸುಂಪುಟ ವಿಸ್ತರಣೆಯ ಚರ್ಚೆಗೆ ಮತ್ತಷ್ಟು ಪುಷ್ಟಿ ನೀಡಿದೆ.

ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ ರಚನೆಯ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರ ಹೇಳಿಕೆ ಕಾಂಗ್ರೆಸ್‌ ಒಳಗೆ ರಾಜಕೀಯ ಚಟುವಟಿಕೆಗಳು ಗರಿಗೆದರುವಂತೆ ಮಾಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳು ಕಾಂಗ್ರೆಸ್‌ ನಾಯಕರ ಓಲೈಕೆಗೆ ಮುಂದಾಗಿದ್ದಾರೆ. ತಮ್ಮ ಬೇಡಿಕೆಗಳನ್ನು ಮುಂದಿಡುತ್ತಿದ್ದಾರೆ ಎಂದು ಹೇಳಲಾಗಿದೆ.

ಸಚಿವ ಸಂಪುಟದ ಪುನರ್‌ ರಚನೆ ಅಥವಾ ವಿಸ್ತರಣೆಯಾಗುತ್ತದೆ ಎಂಬ ವಿಚಾರ ಆಗಾಗ್ಗೆ ಚರ್ಚೆಯಲ್ಲಿತ್ತು. ಆದರೆ, ವಾಲ್ಮೀಕಿ ನಿಗಮ ಮತ್ತು ಮುಡಾದಲ್ಲಿ ಹಗರಣ ನಡೆದಿವೆ ಎಂಬ ಆರೋಪಗಳನ್ನು ನಿಭಾಯಿಸಲು ಹೆಣಗಾಡುತ್ತಿದ್ದ ರಾಜ್ಯ ಸರ್ಕಾರವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ, ಹಗರಣ ಆರೋಪಗಳು ಬದಿಗೆ ಸರಿದಿವೆ. ಈ ಬೆನ್ನಲ್ಲೇ, ಸಚಿವ ಸಂಪುಟದ ಪುನರ್‌ ರಚನೆ ಚರ್ಚೆ ಮುನ್ನೆಲೆ ಬಂದಿದೆ. ಡಿಸೆಂಬರ್ ಅಂತ್ಯದಲ್ಲೇ ಸಚಿವ ಸಂಪುಟ ಪುನರ್‌ ರಚನೆಯಾಗುತ್ತದೆ ಎಂಬ ಮಾತುಗಳೂ ಈ ಹಿಂದೆ ಕೇಳಿಬಂದಿದ್ದವು. ಆದರೆ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಸಚಿವ ಸಂಪುಟದ ಪುನರ್‌ ರಚನೆ ಬಗ್ಗೆ ಒಲವಿಲ್ಲದ ಕಾರಣ, ಸಂಪುಟ ಪುನರ್‌ ರಚನೆಯ ಚರ್ಚೆ ಹಿನ್ನೆಲೆಗೆ ಸರಿದಿತ್ತು ಎಂದು ಹೇಳಲಾಗಿದೆ.

ಇತ್ತೀಚೆಗೆ, ಕೆ.ಜೆ. ಜಾರ್ಜ್​ ಮತ್ತು ಟಿ.ಬಿ ಜಯಚಂದ್ರ ಸಂಪುಟ ಪುನರ್‌ ರಚನೆ ಬಗ್ಗೆ ಮಾತನಾಡಿದ್ದರು. ಈ ಬೆನ್ನಲ್ಲೇ, ಜನವರಿ 1ರಂದು ಮಾಧ್ಯಮಗಳೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನರ್‌ ರಚನೆ ಅಥವಾ ವಿಸ್ತರಣೆ ಆಗುವ ಬಗ್ಗೆ ಸೂಚನೆ ನೀಡಿದ್ದಾರೆ.

ಪ್ರಸ್ತುತ ಸಂಪುಟದಲ್ಲಿರುವ ಕೆಲವು ಸಚಿವರ ಕಾರ್ಯವೈಖರಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಹೈಕಮಾಂಡ್​ಗೆ ಅಸಮಾಧಾನವಿದೆ. ಕೆಲ ಸಚಿವರು ತಮ್ಮ ಇಲಾಖೆಯ ಕೆಲಸಗಳಿಗೆ ಸರಿಯಾಗಿ ಒತ್ತು ಕೊಡುತ್ತಿಲ್ಲ. ಅಭಿವೃದ್ಧಿ ಕಾರ್ಯಗಳ ಬಗ್ಗೆ ಗಮನ ಹರಿಸುತ್ತಿಲ್ಲ ಎಂಬ ಆರೋಪಗಳಿವೆ. ಅಂತಹ ಸುಮಾರು ಐದು ಅಥವಾ ಆರು ಸಚಿವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಈ ವರದಿ ಓದಿದ್ದೀರಾ?: ಕರ್ನಾಟಕದಲ್ಲಿ ವಕ್ಫ್‌ ವಿವಾದ: ಅಂತಿಮವಾಗಿ ಗೆದ್ದಿದ್ದು ಯಾರು?

ಜನವರಿ ಎರಡನೇ ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಆ ಸಮಯದಲ್ಲಿ, ಅವರು ಸಚಿವ ಸಂಪುಟ ಪುನರ್‌ ರಚನೆಯ ಬಗ್ಗೆ ಹೈಕಮಾಂಡ್‌ ಜೊತೆ ಚರ್ಚಿಸಲಿದ್ದಾರೆ. ಬಹುಶಃ, ರಾಜ್ಯ ಬಜೆಟ್‌ ಅಧಿವೇಶನಕ್ಕೂ ಮುನ್ನ ಸಂಪುಟ ಪುನರ್ ರಚನೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಆದಾಗ್ಯೂ, ಸಂಪುಟ ಪುನರ್‌ ರಚನೆ ಮಾಡುವುದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಇಷ್ಟವಿಲ್ಲ. ಪುನರ್ ರಚನೆಗೆ ಅವರು ಒಪ್ಪಿಕೊಳ್ಳುತ್ತಿಲ್ಲ. ಒಂದು ವೇಳೆ, ಡಿ.ಕೆ ಶಿವಕುಮಾರ್ ಒಪ್ಪದಿದ್ದರೆ ಸಂಪುಟ ಪುನರ್‌ ರಚನೆಯನ್ನು ಮುಂದೂಡುವ ಸಾಧ್ಯತೆಯೂ ಇದೆ ಎಂಬ ಮಾತುಗಳೂ ಕೇಳಿಬಂದಿವೆ.

ಆದರೂ, ಡಿ.ಕೆ ಶಿವಕುಮಾರ್‌ ಅವರನ್ನು ಕಾಂಗ್ರೆಸ್‌ ಹೈಕಮಾಂಡ್‌ ಒಪ್ಪಿಸಲಿದೆ. ಈ ಬಾರಿ, ಸಂಪುಟಕ್ಕೆ ‘ಸರ್ಜರಿ’ ನಡೆಯಲಿದೆ ಎಂಬ ನಂಬಿಕೆ ಸಚಿವ ಸ್ಥಾನದ ಆಕಾಂಕ್ಷಿಗಳಾಗಿರುವ ಕಾಂಗ್ರೆಸ್‌ ಶಾಸಕರಲ್ಲಿದೆ.

ಅಲ್ಲದೆ, ವಾಲ್ಮೀಕಿ ಹಗರಣದಲ್ಲಿ ಬಂಧನಕ್ಕೊಳಗಾಗಿದ್ದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ, ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂದೂ ಹೇಳಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...