‘ಭಾರತ’ವೆಂದರೆ ಹಿಂದೂರಾಷ್ಟ್ರ, ‘ಇಂಡಿಯಾ’ ಎಂದು ಕರೆಯಬೇಡಿ : ಆರ್‌ಎಸ್‌ಎಸ್‌ ಮುಖ್ಯಸ್ಥ ಭಾಗವತ್

Date:

  • ವಿಪಕ್ಷಗಳ ಮೈತ್ರಿಕೂಟವಾದ ‘ಇಂಡಿಯಾ’ದ ಮೂರನೇ ಸಭೆ ಮುಂಬೈನಲ್ಲಿ ಮುಗಿದ ಬೆನ್ನಲ್ಲೇ ಹೇಳಿಕೆ
  • ನಾಗ್ಪುರ, ಗುವಾಹಟಿಯಲ್ಲಿ ಸಮಾರಂಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಮೋಹನ್ ಭಾಗವತ್

“ಭಾರತವೆಂದರೇನೇ ಹಿಂದೂರಾಷ್ಟ್ರ, ‘ಇಂಡಿಯಾ’ ಎಂದು ಕರೆಯಬೇಡಿ, ಭಾರತೀಯರೆಲ್ಲರೂ ಹಿಂದೂಗಳೇ” ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ.

ನಾಗಪುರ ಹಾಗೂ ಗುವಾಹಟಿಯಲ್ಲಿ ಆಯೋಜಿಸಲಾಗಿದ್ದ ಪ್ರತ್ಯೇಕ ಸಮಾರಂಭದಲ್ಲಿ ಮಾತನಾಡುತ್ತಾ ಆರ್‌ಎಸ್‌ಎಸ್ ಮುಖ್ಯಸ್ಥ ಈ ಹೇಳಿಕೆ ನೀಡಿದ್ದಾರೆ.

‘ಭಾರತ ಹಿಂದೂ ರಾಷ್ಟ್ರ, ಎಲ್ಲ ಭಾರತೀಯರೂ ಹಿಂದೂಗಳೇ, ಹಿಂದೂಗಳು ದೇಶದ ಸಮಸ್ತ ಭಾರತೀಯರನ್ನೂ ಪ್ರತಿನಿಧಿಸುತ್ತಾರೆ” ಎಂದು ಮೋಹನ್ ಭಾಗವತ್ ಪ್ರತಿಪಾದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಷ್ಟ್ರೀಯ ಸ್ವಯಂ ಸೇವಕ ಸಂಘವು ದೇಶದ ಸಮಸ್ತ ಜನರ ಬಗ್ಗೆ ಕಾಳಜಿ ಹೊಂದಿದೆ ಎಂದಿರುವ ಅವರು, ನಮ್ಮ ದೇಶದ ಹೆಸರು ಯುಗಯುಗಾಂತರಗಳಿಂದ ಭಾರತ. ಭಾಷೆ ಯಾವುದೇ ಇರಲಿ, ಹೆಸರು ಒಂದೇ ಆಗಿರುತ್ತದೆ ಎಂದು ಭಾಗವತ್ ಹೇಳಿದ್ದಾರೆ.

“ನಮ್ಮ ದೇಶ ಭಾರತ. ನಾವು ‘ಇಂಡಿಯಾ’ ಎಂಬ ಪದವನ್ನು ಬಳಸುವುದನ್ನು ನಿಲ್ಲಿಸಬೇಕು ಮತ್ತು ಎಲ್ಲಾ ಪ್ರಾಯೋಗಿಕ ಕ್ಷೇತ್ರಗಳಲ್ಲಿ ‘ಭಾರತ್’ ಪದವನ್ನು ಬಳಸಲು ಪ್ರಾರಂಭಿಸಬೇಕು. ಆಗ ಮಾತ್ರ ಬದಲಾವಣೆ ಆಗುತ್ತದೆ. ನಾವೆಲ್ಲರೂ ನಮ್ಮ ದೇಶವನ್ನು ‘ಭಾರತ್’ ಎಂದು ಕರೆಯಬೇಕು ಮತ್ತು ಅದನ್ನು ಇತರರಿಗೆ ವಿವರಿಸಬೇಕು ಎಂದು ಇದೇ ವೇಳೆ ಮನವಿ ಮಾಡಿದ್ದಾರೆ.

ಇದನ್ನು ಓದಿ : ಬಸವರಾಜು ಮೇಗಲಕೇರಿ ಆಡಿಯೊ ಅಂಕಣ | ಕೋಲೆ ಬಸವನೊಂದಿಗೆ ಬೀದಿಯಲ್ಲಿ ಬದುಕುವ ನೆಲೆ ಇಲ್ಲದ ಅಲೆಮಾರಿಗಳು

“ಭಾರತ ಅಥವಾ ಹಿಂದೂಸ್ತಾನ ಅನ್ನೋದು ಹಿಂದೂ ರಾಷ್ಟ್ರ. ಇದು ವಾಸ್ತವ ಸಂಗತಿ. ಸೈದ್ದಾಂತಿಕವಾಗಿ ಎಲ್ಲ ಭಾರತೀಯರೂ ಹಿಂದೂಗಳೇ. ಹಿಂದೂ ಎಂದರೆ ಭಾರತೀಯ ಎಂದೇ ಅರ್ಥ. ಇವತ್ತು ಭಾರತದಲ್ಲಿ ಇರುವ ಎಲ್ಲರೂ ಹಿಂದೂ ಸಂಸ್ಕೃತಿ ಜೊತೆ ನಂಟು ಹೊಂದಿದ್ದಾರೆ. ಹಿಂದೂ ಪೂರ್ವಜರು ಹಾಗೂ ಹಿಂದೂ ಭೂಮಿಯ ಜೊತೆ ಎಲ್ಲರೂ ನಂಟು ಹೊಂದಿದ್ದಾರೆ. ಇದರ ಹೊರತಾಗಿ ಮತ್ತೇನೂ ಇಲ್ಲ” ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿವರಿಸಿದ್ದಾರೆ.

“ಆರ್‌ಎಸ್‌ಎಸ್‌ನ ಸಿದ್ದಾಂತ ಹಾಗೂ ವಿಚಾರಧಾರೆಗಳನ್ನು ಎಲ್ಲರೂ ಅರ್ಥ ಮಾಡಿಕೊಂಡಿದ್ದಾರೆ. ಕೆಲವರು ಒಪ್ಪಿದ್ದಾರೆ, ಮತ್ತೆ ಕೆಲವರು ಒಪ್ಪಿಲ್ಲ” ಎಂದಿರುವ ಮೋಹನ್ ಭಾಗವತ್, ”ನಮ್ಮ ಸಿದ್ದಾಂತವನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರ ಮಾಡುವ ಜವಾಬ್ದಾರಿ ಸಹಜವಾಗಿಯೇ ಈ ದೇಶ, ಈ ಸಮಾಜ ಹಾಗೂ ಮಾಧ್ಯಮಕ್ಕೆ ಇದೆ” ಎಂದು ಹೇಳಿದರು.

“ಭಾರತವು ಎಲ್ಲರನ್ನೂ ಒಂದುಗೂಡಿಸುವ ದೇಶವಾಗಿದ್ದು, ಜಗತ್ತಿಗೆ ಇಂದು ಭಾರತದ ಅಗತ್ಯವಿದೆ. ಭಾರತವಿಲ್ಲದೆ ಜಗತ್ತು ಓಡಲು ಸಾಧ್ಯವಿಲ್ಲ. ನಾವು ಯೋಗದ ಮೂಲಕ ಜಗತ್ತನ್ನು ಸಂಪರ್ಕಿಸಿದ್ದೇವೆ. ಪೋಷಕರು ತಮ್ಮ ಮಕ್ಕಳಿಗೆ ಭಾರತೀಯ ಸಂಸ್ಕೃತಿ, ಸಂಪ್ರದಾಯ, ಕೌಟುಂಬಿಕ ಮೌಲ್ಯಗಳ ಬಗ್ಗೆ ಅರಿವು ಮೂಡಿಸಬೇಕು” ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ.

ವಿಪಕ್ಷಗಳ ಮೈತ್ರಿಕೂಟವಾದ ‘ಇಂಡಿಯಾ’ದ ಮೂರನೇ ಸಭೆ ಮುಂಬೈನಲ್ಲಿ ಮುಗಿದ ಬೆನ್ನಲ್ಲೇ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಯು ಚರ್ಚೆಗೆ ಗ್ರಾಸವಾಗಿದ್ದು, ವಿವಾದಕ್ಕೂ ಎಡೆಮಾಡಿಕೊಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...