ಅಮರಾವತಿ ಚುನಾವಣೆ: ಪಕ್ಷದ ವಿರುದ್ಧ ಪ್ರಚಾರ; ನವನೀತ್ ರಾಣಾ ವಿರುದ್ಧ ಸಿಎಂಗೆ BJP 22 ಅಭ್ಯರ್ಥಿಗಳ ದೂರು

Date:

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಕ್ತಾಯಗೊಂಡಿದೆ. ಇದೇ ಸಮಯದಲ್ಲಿ, ಬಿಜೆಪಿ ಮಾಜಿ ಸಂಸದೆ ನವನೀತ್ ರಾಣಾ ವಿರುದ್ಧ ಗಂಭೀರ ಆರೋಪವೂ ಕೇಳಿಬಂದಿದೆ. ಅಮರಾವತಿ ಪಾಲಿಕೆ ವ್ಯಾಪ್ತಿಯಲ್ಲಿ ಪಕ್ಷದ ವಿರುದ್ಧವೇ ರಾಣಾ ಪ್ರಚಾರ ಮಾಡಿದ್ದಾರೆಂದು ಆರೋಪಿಸಿ ಬಿಜೆಪಿಯ 22 ಅಭ್ಯರ್ಥಿಗಳು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ಗೆ ಪತ್ರ ಬರೆದಿದ್ದಾರೆ. ನವನೀತ್ ರಾಣಾ ಅವರನ್ನು ಪಕ್ದಿಂದ ಉಚ್ಛಾಟಿಸಬೇಕೆಂದು ಆಗ್ರಹಿಸಿದ್ದಾರೆ.

ಪತ್ರ ಬರೆದಿರುವ 22 ಮಂದಿಯಲ್ಲಿ 20 ಅಭ್ಯರ್ಥಿಗಳು ಚುನಾವಣೆಯಲ್ಲಿ ಸೋಲುಂಡಿದ್ದಾರೆ. ಇಬ್ಬರು ಮಾತ್ರವೇ ಗೆಲುವು ಸಾಧಿಸಿದ್ದಾರೆ. ಅವನೀತ್ ರಾಣಾ ಅವರು ಪಕ್ಷದ ವಿರುದ್ಧ ಪ್ರಚಾರ ಮಾಡಿದ್ದೇ, ಈ ಸೋಲಿಗೆ ಕಾರಣವೆಂದು ಆರೋಪಿಸಿದ್ದಾರೆ. ಅಲ್ಲದೆ, ತಮ್ಮನ್ನು ಡಮ್ಮಿ ಅಭ್ಯರ್ಥಿಗಳೆಂದೂ, ಅವರ ಪತಿ ರವಿ ರಾಣಾ ಅವರ ‘ಯುವ ಸ್ವಾಭಿಮಾನ್ ಪಕ್ಷ’ದಿಂದ ಸ್ಪರ್ಧಿಸಿದ್ದ ಅಭ್ಯರ್ಥಿಗಳೇ ಬಿಜೆಪಿಯ ನೈಜ ಅಭ್ಯರ್ಥಿಗಳೆಂದೂ ಆಕ್ರಮಣಕಾರಿಯಾಗಿ ಪ್ರಚಾರ ಮಾಡಿದ್ದಾರೆ ಎಂದು ದೂರಿದ್ದಾರೆ.

ನವನೀತ್ ರಾಣಾ ಅವರ ಪತಿ ರವಿ ರಾಣಾ ಅವರು ಯುವ ಸ್ವಾಭಿಮಾನ್ ಪಕ್ಷವನ್ನು ಕಟ್ಟಿದ್ದರೂ, ನವನೀತ್ ರಾಣಾ ಅವರು ಬಿಜೆಪಿಯಲ್ಲಿಯೇ ಇದ್ದಾರೆ. ಈ ಹಿಂದೆ, ಬಿಜೆಪಿ ಮತ್ತು ಯುವ ಸ್ವಾಭಿಮಾನ್ ಪಕ್ಷ ಮೈತ್ರಿ ಮಾಡಿಕೊಂಡಿದ್ದವು. ಆದರೆ, ಸ್ಥಳೀಯ ಚುನಾವಣೆಗೂ ಮುನ್ನ ಮೈತ್ರಿ ಮುರಿದುಬಿದ್ದಿತ್ತು. ಬಿಜೆಪಿಯಲ್ಲೇ ಇದ್ದ ನವನೀತ್ ರಾಣಾ ಅವರು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಇದೀಗ ಅವರ ವಿರುದ್ಧ ಬಿಜೆಪಿ ಅಭ್ಯರ್ಥಿಗಳಿಂದ ಅಸಮಾಧಾನ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

85 ಸದಸ್ಯ ಬಲವಿರುವ ಅಮರಾವತಿ ನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 25, ಕಾಂಗ್ರೆಸ್ ಹಾಗೂ ಯುವ ಸ್ವಾಭಿಮಾನ್ ಪಕ್ಷಗಳು ತಲಾ 15, ಎಐಎಂಐಎಂ 12, ಎನ್‌ಸಿಪಿ 11, ಶಿಂಧೆ ಶಿವಸೇನೆ ಮತ್ತು ಬಿಎಸ್‌ಪಿ ತಲಾ 3, ಶಿವಸೇನೆ (ಯುಬಿಟಿ) 2 ಹಾಗೂ ವಂಚಿತ್ ಬಹುಜನ್ ಅಘಾಡಿ ಪಕ್ಷ 1 ಸ್ಥಾನದಲ್ಲಿ ಗೆಲುವು ಸಾಧಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...