ಭಾರತದ ಕೇಸರಿ ನಕ್ಷೆ ರಚನೆ ವಿರೋಧಿಸಿದ ವಿದ್ಯಾರ್ಥಿ ಅಮಾನತಿಗೆ ತಡೆ

Date:

ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆಯ ನಂತರ ಭಾರತದ ಕೇಸರಿ ನಕ್ಷೆ ಬರೆದಿರುವುದನ್ನು ವಿರೋಧಿಸಿದ ವಿದ್ಯಾರ್ಥಿ ಅಮಾನತಿಗೆ ತಡೆಹಿಡಿದ ಎನ್‌ಐಟಿ ಕ್ಯಾಲಿಕಟ್‌

ಕಳೆದ ತಿಂಗಳು ರಾಮ ಮಂದಿರ ಉದ್ಘಾಟನೆಯ ದಿನದಂದು ಭಾರತದ ಕೇಸರಿ ನಕ್ಷೆ ರಚನೆ ವಿರುದ್ಧ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಯನ್ನು ಎನ್‌ಐಟಿ (ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ) ಕ್ಯಾಲಿಕಟ್ ಅಮಾನತು ಮಾಡಿದ ನಂತರ ಕ್ಯಾಂಪಸ್‌ನಲ್ಲಿ ಬಿಗುವಿನ ವಾತಾವರಣ ಕಂಡುಬಂದಿತ್ತು. ಇದೀಗ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಅಮಾನತು ನಿರ್ಧಾರ ತಡೆಹಿಡಿಯಲಾಗಿದೆ. ವಿದ್ಯಾರ್ಥಿಗೆ ಮೇಲ್ಮನವಿ ಸಲ್ಲಿಸಿ ತನ್ನ ಪ್ರತಿಕ್ರಿಯೆ ಮಂಡಿಸಲು ಅವಕಾಶ ಕೊಡಲಾಗಿದೆ

ಎನ್‌ಐಟಿಯಲ್ಲಿ ನಾಲ್ಕನೇ ವರ್ಷದ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ವ್ಯಾಸಖ್ ಪ್ರೇಮ್‌ಕುಮಾರ್ ಅಮಾನತು ಮಾಡಿರುವುದನ್ನು ಕಾಲೇಜು ಆಡಳಿತ ಘೋಷಿಸಿದ ನಂತರ ಅನೇಕ ವಿದ್ಯಾರ್ಥಿ ಸಂಘಟನೆಗಳು ಕಾಲೇಜು ಆವರಣದೊಳಗೆ ಪ್ರತಿಭಟನೆಯನ್ನು ಆಯೋಜಿಸಿವೆ. ಪ್ರಸ್ತುತ ಅಮಾನತುಗೊಂಡ ವಿದ್ಯಾರ್ಥಿಯ ಮೇಲ್ಮನವಿಯನ್ನು ಆಲಿಸಿ ನಿರ್ಧಾರ ಕೈಗೊಳ್ಳುವವರೆಗೂ ಶಾಲಾ ಆಡಳಿತ ಅಮಾನತು ಆದೇಶದ ಜಾರಿಯನ್ನು ತಡೆಹಿಡಿದಿದೆ. 

ಜನವರಿ 22ರಂದು ವಿಜ್ಞಾನ ಮತ್ತು ಧಾರ್ಮಿಕ ಕ್ಲಬ್ ಎನ್ನುವ ಬ್ಯಾನರ್ ಅಡಿಯಲ್ಲಿ ಕೆಲವು ವಿದ್ಯಾರ್ಥಿಗಳು ಎನ್‌ಐಟಿ ಗೇಟ್ ಬಳಿ ಕೇಸರಿ ಬಣ್ಣದಲ್ಲಿ ಭಾರತದ ನಕ್ಷೆಯನ್ನು ಬಿಡಿಸಿದ್ದರು. ಪ್ರೇಮ್‌ಕುಮಾರ್ ನೇತೃತ್ವದಲ್ಲಿ ಕೆಲವು ವಿದ್ಯಾರ್ಥಿಗಳು ಈ ನಕ್ಷೆಯ ವಿರುದ್ದ ಪ್ರತಿಭಟಿಸಿದ್ದರು. ಪ್ರತಿಭಟನೆಯ ಸಂದರ್ಭ ಪ್ರೇಮ್‌ಕುಮಾರ್ ‘ಭಾರತ ರಾಮರಾಜ್ಯವಲ್ಲ’ ಎನ್ನುವ ಘೋಷಣಾ ಫಲಕವನ್ನು ಹಿಡಿದಿರುವುದನ್ನು ಇತರ ಕೆಲವು ವಿದ್ಯಾರ್ಥಿಗಳು ವಿರೋಧಿಸಿದ ನಂತರ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನವರಿ 31ರಂದು ಸಂಸ್ಥೆಯ ಸ್ಟೂಡೆಂಟ್ ವೆಲ್‌ಫೇರ್‍‌ (ವಿದ್ಯಾರ್ಥಿಗಳ ಕಲ್ಯಾಣ)  ಡೀನ್‌ ಪ್ರೇಮ್‌ಕುಮಾರ್ ಅವರನ್ನು ಒಂದು ವರ್ಷ ಅಮಾನತು ಮಾಡಿರುವುದನ್ನು ಘೋಷಿಸಿದ್ದರು. ಪ್ರೇಮ್‌ಕುಮಾರ್ ಸಂಸ್ಥೆಯಲ್ಲಿ ಸಂಘರ್ಷ ಮತ್ತು ಶಾಂತಿ ಕದಡುವ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು.

ಆದರೆ ಸಿಪಿಐ(ಎಂ)ನ ವಿದ್ಯಾರ್ಥಿ ಸಂಘಟನೆ ಎಸ್‌ಎಫ್‌ಐ ಮತ್ತು ಕಾಂಗ್ರೆಸ್‌ನ ವಿದ್ಯಾರ್ಥಿ ಸಂಘಟನೆ ಕೆಎಸ್‌ಯು ಫೆಬ್ರವರಿ 1ರಂದು ಕಾಲೇಜು ಆವರಣದೊಳಗೆ ಪ್ರತಿಭಟನೆ ಆಯೋಜಿಸಿದ್ದವು. ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆಯ ಕಾವಿನ ನಡುವೆ ಸಂಸ್ಥೆ ಇದೀಗ ಅಮಾನತು ಜಾರಿಯನ್ನು ತಡೆಹಿಡಿದಿರುವುದಾಗಿ ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...