ಚುನಾವಣೆಯಲ್ಲಿ ಸೋತರೆ ಮಕ್ಕಳನ್ನು ನೋಡಿಕೊಳ್ಳಬಹುದು: ಮಹಿಳಾ ಅಭ್ಯರ್ಥಿ ಬಗ್ಗೆ ರಾಜಸ್ಥಾನ ಬಿಜೆಪಿ ಮುಖ್ಯಸ್ಥ!

Date:

ರಾಜಸ್ಥಾನ ಬಿಜೆಪಿ ಮುಖ್ಯಸ್ಥ ಮದನ್ ರಾಥೋಡ್ ಶನಿವಾರ ಮಹಿಳಾ ಅಭ್ಯರ್ಥಿ ವಿರುದ್ಧವಾಗಿ ನೀಡಿರುವ ಹೇಳಿಕೆ ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. “ಆರ್‌ಎಲ್‌ಪಿ ಸಂಸದ ಹನುಮಾನ್ ಬೇನಿವಾಲ್ ಅವರ ಪತ್ನಿ ಕನಿಕಾ ಬೇನಿವಾಲ್ ಖಿನ್ವಸರ್ ಅವರು ವಿಧಾನಸಭಾ ಉಪಚುನಾವಣೆಯಲ್ಲಿ ಸೋತರೆ ಪ್ರಯೋಜನವಾಗುತ್ತದೆ. ಏಕೆಂದರೆ ಅವರು ಮನೆಯಲ್ಲಿಯೇ ಇದ್ದು ತಮ್ಮ ಮಕ್ಕಳನ್ನು ನೋಡಿಕೊಳ್ಳಬಹುದು” ಎಂದು ರಾಜಸ್ಥಾನದ ಬಿಜೆಪಿ ಮುಖ್ಯಸ್ಥ ಮದನ್ ರಾಥೋಡ್ ಹೇಳಿದ್ದಾರೆ.

ನವೆಂಬರ್ 13ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಕನಿಕಾ ಬೇನಿವಾಲ್ ಖಿಂವ್ಸಾರ್‌ ಕ್ಷೇತ್ರದಲ್ಲಿ ಆರ್‌ಎಲ್‌ಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಈ ಬಗ್ಗೆ ಭಾಷಣದಲ್ಲಿ ಮಾತನಾಡಿದ ಮದನ್ ರಾಥೋಡ್, “ಹನುಮಾನ್ ಬೇನಿವಾಲ್ ಮತ್ತು ಅವರ ಪತ್ನಿ ಇಬ್ಬರೂ ರಾಜಕೀಯ ಮಾಡುತ್ತಲೇ ಇದ್ದರೆ ಅವರ ಕುಟುಂಬದ ಕಥೆ ಏನು” ಎಂದು ವ್ಯಂಗ್ಯವಾಡಿದ್ದಾರೆ.

“ತನ್ನ ಪತ್ನಿ ಗೆಲ್ಲದಿದ್ದರೆ ಆಕೆ ತನ್ನ ಪೋಷಕರ ಮನೆಗೆ ಹೋಗುತ್ತಾಳೆ ಎಂದು ಅವರು (ಹನುಮಾನ್ ಬೇನಿವಾಲ್) ಆತಂಕಗೊಂಡಿರುವುದನ್ನು ನಾನು ಸಾಮಾಜಿಕ ಮಾಧ್ಯಮದಲ್ಲಿ ನೋಡಿದ್ದೇನೆ. ಸಹೋದರ, ನೀವು ತುಂಬಾ ಆತಂಕದಲ್ಲಿರುವಾಗ ನೀವು ಯಾಕೆ ಅಂತಹ ರಿಸ್ಕ್ ತೆಗೆದುಕೊಂಡಿರಿ” ಎಂದು ಲೇವಡಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ರಾಜಸ್ಥಾನ | ಆಟೋ-ಬಸ್‌ ನಡುವೆ ಭೀಕರ ಅಪಘಾತ; 12 ಮಂದಿ ದುರ್ಮರಣ

“ಆಕೆ ಗೆಲ್ಲಲು ಸಾಧ್ಯವಿಲ್ಲ ಎಂದು ನಿಮಗೆ (ಹನುಮಾನ್ ಬೇನಿವಾಲ್) ತಿಳಿದಿದೆ. ಆದರೆ ನನ್ನ ಬಳಿ ಒಂದು ಸಲಹೆ ಇದೆ. ಹನುಮಾನ್ ಜಿ ನಿಮ್ಮ ಪತ್ನಿ ಸೋತರೆ ನಿಮಗೆ ಲಾಭವಾಗುತ್ತದೆ. ಆಕೆ ತನ್ನ ಪೋಷಕರ ಮನೆಗೆ ಹೋಗಬಹುದು ಅಥವಾ ಅವಳು ಎಲ್ಲಿಗಾದರೂ ಹೋಗಬಹುದು. ಆದರೆ ಮಕ್ಕಳನ್ನು ನೋಡಿಕೊಳ್ಳುತ್ತಾರೆ. ಮಕ್ಕಳ ಪಾಲನೆ ಮಾಡಬೇಕಲ್ಲವೇ, ನೀವಿಬ್ಬರೂ ರಾಜಕೀಯ ಮಾಡುತ್ತಾ ಹೋದರೆ ಸಂಸಾರ ಏನಾಗುತ್ತೆ. ಇದನ್ನು ಅರ್ಥ ಮಾಡಿಕೊಳ್ಳಬೇಕು” ಎಂದರು.

ಸದ್ಯ ಈ ಹೇಳಿಕೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಹೆಣ್ಣು ಬರೀ ಮನೆಯಲ್ಲಿರಲು, ಮಕ್ಕಳನ್ನು ನೋಡಿಕೊಳ್ಳಲು ಮೀಸಲು ಎಂಬ ಮನಸ್ಥಿತಿಯನ್ನು ಬಿಜೆಪಿ ನಾಯಕರು ಹೊಂದಿದ್ದಾರೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಿಜೆಪಿ ನಾಯಕರ ಕೀಳು ಆಲೋಚನೆ ನೋಡಿ. ರಾಜಕೀಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಕಂಡರೆ ಅವರಿಗೆ ಆಗದು. ಮಹಿಳೆ ರಾಜಕೀಯಕ್ಕೆ ಬಂದರೆ ಮಕ್ಕಳನ್ನು ಸಾಕಲು ಆಗುವುದಿಲ್ಲ ಎಂಬ ಭಾವನೆ ಅವರದ್ದು. ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಬಿಜೆಪಿ ನಾಯಕರ ಇಂತಹ ಹೇಳಿಕೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಂತಹ ಕೀಳು ಮಟ್ಟದ ಹೇಳಿಕೆಗಳನ್ನು ನೀಡುತ್ತಿರುವ ನಾಯಕರಿಗೆ ನಾಚಿಕೆಯಾಗಬೇಕು. ಮಾತೃಶಕ್ತಿಗೆ ಮಾಡಿದ ಅವಮಾನಕ್ಕೆ ಖಿಂವ್ಸಾರ್‌ ಜನರು ಮತಗಳ ಮೂಲಕ ಉತ್ತರ ನೀಡಲಿದ್ದಾರೆ” ಎಂದು ಆ ಕ್ಷೇತ್ರದ ನಾಗರಿಕರೂ ಆದ ಆರ್‌ಎಲ್‌ಪಿಯ ಮಾಜಿ ನಾಯಕ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...