ಯಾವುದಕ್ಕೂ ತಲೆ ಹಾಕದ ನನ್ನ ಪತ್ನಿಯನ್ನು ರಾಜಕಾರಣಕ್ಕೆ ಎಳೆದು ತಂದಿದ್ದನ್ನು ಕ್ಷಮಿಸ್ತೀರಾ: ಜನ‌ಮಾನಸಕ್ಕೆ ಸಿಎಂ ಪ್ರಶ್ನೆ

Date:

ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ, ಯಾವ ವಿಷಯಕ್ಕೂ ತಲೆ ಹಾಕದ ನನ್ನ ಪತ್ನಿಯನ್ನೂ ಅವರ ರಾಜಕಾರಣಕ್ಕೆ ಎಳೆದು ತಂದ್ರಲ್ಲಾ ಇದನ್ನು ನೀವು ಕ್ಷಮಿಸ್ತೀರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಮಾನ್ವಿಯಲ್ಲಿ 45842.17 ಲಕ್ಷ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಶೋಷಿತ-ದಮನಿತ-ಶೂದ್ರ ಜನ ಸಮುದಾಯಗಳ ಸ್ವಾಭಿಮಾನಿ ಸಮಾವೇಷವನ್ನು ಉದ್ಘಾಟಿಸಿ ಮಾತನಾಡಿದರು.

“ನಾನು ಏನು ತಪ್ಪು ಮಾಡಿದ್ದೀನಿ? ಕುರಿ ಕಾಯುವವರ ಮಗ ಎರಡನೇ ಬಾರಿ ಸಿಎಂ ಆಗಿದ್ದೇ ತಪ್ಪಾ? ಐದೈದು ಗ್ಯಾರಂಟಿಗಳನ್ನು, ಹತ್ತಾರು ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇ ತಪ್ಪಾ? ನನ್ನ ಮೇಲಿನ ಹೊಟ್ಟೆಕಿಚ್ಚಿಗೆ ನನ್ನ ಪತ್ನಿಯನ್ನು ಎಳೆಯಬೇಕಿತ್ತಾ? ಅವರು ಏನು ತಾನೆ ತಪ್ಪು ಮಾಡಿದ್ದರು” ಎಂದು ಭಾವನಾತ್ಮಕವಾಗಿ ಜನ ಸಾಗರವನ್ನು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ-ಜೆಡಿಎಸ್‌ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ದರಾಗಿ. ಕೊಟ್ಟ ಕುದುರೆ ಏರಲಾರದ ಕುಮಾರಸ್ವಾಮಿ ವೀರನೂ ಅಲ್ಲ, ಶೂರನೂ ಅಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ರಾಜ್ಯದ ಜನರಿಗೆ ಸಹಾಯ ಮಾಡುವ ಅವಕಾಶ ಇತ್ತು. ರಾಜ್ಯದ ಅಭಿವೃದ್ಧಿ ಮಾಡುವ ಅವಕಾಶವೂ ಇತ್ತು. ಅಧಿಕಾರ, ಅವಕಾಶ ಇದ್ದಾಗ ಜನಪರ ಕೆಲಸ ಮಾಡದ ಕುಮಾರಸ್ವಾಮಿ ಮತ್ತು ಬಿಜೆಪಿಯವರು ಈಗ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಸುಳ್ಳು ಮತ್ತು ಅಪಪ್ರಚಾರ ಮಾಡುತ್ತಿದ್ದಾರೆ” ಎಂದು ಟೀಕಿಸಿದರು.

“ರಾಜ್ಯದ ಬೊಕ್ಕಸ ಖಾಲಿ, ಅಭಿವೃದ್ಧಿ ಕಾರ್ಯಗಳಿಗೆ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರ ನಡೆಸಿದಾಗಲೂ ಜನರ ಕೆಲಸ ಮಾಡಲಿಲ್ಲ. ಬಿಜೆಪಿ ಸ್ವಂತ ಶಕ್ತಿ ಮೇಲೆ ಇವತ್ತಿನವರೆಗೂ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿಲ್ಲ. ಏನಿದ್ದರೂ ಆಪರೇಷನ್ ಕಮಲದ ಮೂಲಕ ಮಾತ್ರ ಬಿಜೆಪಿ ಅಧಿಕಾರ ಹಿಡಿದಿದೆ. ಹೀಗಾಗಿ ಅವರಿಗೆ ಜನರ ಅಭಿವೃದ್ಧಿ ಬೇಕಾಗಿಲ್ಲ. ಬೈಪಾಸ್ ಹಾದಿಯಲ್ಲೇ ಅಧಿಕಾರ ಹಿಡಿಯಲು ಕಾದು ಕುಳಿತಿದ್ದಾರೆ” ಎಂದು ಕಿಡಿಕಾರಿದರು.

“ಕಾರಣವೇ ಇಲ್ಲದೆ ರಾಜೀನಾಮೆ ಕೊಡಿ, ರಾಜಿನಾಮೆ ಕೊಡಿ ಎನ್ನುತ್ತಿದ್ದಾರೆ. ನನಗೂ ಬೇಸರ ಆಗಿದೆ. ಸಾಕಾಗಿದೆ. ಆದರೆ, ನಿಮಗಾಗಿ ನಾನು ಹೋರಾಟ ಮುಂದುವರೆಸಿದ್ದೇನೆ. ನಾನು ಅವರ ಬೆದರಿಕೆಗಳಿಗೆ ಜಗ್ಗೋನೂ ಅಲ್ಲ. ಬಗ್ಗೋನೂ ಅಲ್ಲ. ಹೋರಾಟ ಮುಂದುವರೆಸ್ತೀನಿ” ಎಂದರು.

“ನನ್ನನ್ನು ಕೆಳಗೆ ಇಳಿಸುವ ಬಿಜೆಪಿ-ಜೆಡಿಎಸ್ ಷಡ್ಯಂತ್ರ ಸೋಲಿಸ್ತೀನಿ. ನಿಮ್ಮ ಆಶೀರ್ವಾದ ನನ್ನ ಮೇಲಿರಲಿ. ಬಿಜೆಪಿಗೆ ನೀವೂ ತಕ್ಕ ಪಾಠ ಕಲಿಸಬೇಕು” ಎಂದು ಕರೆ ನೀಡಿದ ಸಿದ್ದರಾಮಯ್ಯ ಅವರು ಬೃಹತ್ ಸ್ವಾಭಿಮಾನಿ ಜನ ಸಮಾವೇಷ ಸಂಘಟಿಸಿದ ಬೋಸರಾಜು ಮತ್ತು ರವಿ ಬೋಸರಾಜು ಅವರಿಗೆ ಅಭಿನಂದನೆ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...