ಭಯೋತ್ಪಾದಕರಿಗೆ ಕೆನಡಾ ಸುರಕ್ಷಿತ ಅಡಗುದಾಣವಾಗುತ್ತಿದೆ: ಭಾರತ ಗಂಭೀರ ಆರೋಪ

Date:

  • ನಿಜ್ಜರ್ ಹತ್ಯೆಯ ಆರೋಪ; ಮುಂದುವರಿದ ಭಾರತ-ಕೆನಡಾ ನಡುವಿನ ಶೀತಲ ಸಮರ
  • ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿಕೆ

ಕೆನಡಾದಲ್ಲಿ ಖಲಿಸ್ತಾನಿ ಉಗ್ರನ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಆರೋಪ ಮಾಡಿದ ಬಳಿಕ ಭಾರತ-ಕೆನಡಾ ನಡುವಿನ ಶೀತಲ ಸಮರ ಮುಂದುವರಿದಿದ್ದು, ಭಯೋತ್ಪಾದಕರಿಗೆ ಕೆನಡಾ ಸುರಕ್ಷಿತ ಅಡಗುದಾಣವಾಗುತ್ತಿದೆ ಎಂದು ಭಾರತ ಗಂಭೀರ ಆರೋಪ ಹೊರಿಸಿದೆ.

ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, ಕೆನಡಾ ಇತ್ತೀಚಿನ ದಿನಗಳಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಗಳಿಗೆ ಸುರಕ್ಷಿತ ಸ್ವರ್ಗವಾಗಿ ಪರಿಣಮಿಸಿದೆ. ಪಾಕಿಸ್ತಾನವು ಪ್ರತ್ಯೇಕತಾವಾದಿಗಳಿಗೆ ಹಣ ನೀಡುತ್ತಿದೆ ಎಂದು ಗುರುವಾರ ಹೇಳಿದ್ದಾರೆ.

ಭಾರತ-ಕೆನಡಾ ರಾಜತಾಂತ್ರಿಕ ಸಮರ ಆರಂಭವಾದ ನಂತರ ಮೊದಲ ಬಾರಿಗೆ ಪತ್ರಿಕಾಗೋಷ್ಠಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಈ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆನಡಾದ ಪ್ರಧಾನಿ ಭಾರತದ ಮೇಲೆ ಮಾಡಿರುವ ಆರೋಪವು ರಾಜಕೀಯ ಪ್ರೇರಿತವಾದುದು. ಈ ಬಗ್ಗೆ ನಮ್ಮ ಅಭಿಪ್ರಾಯಗಳನ್ನು ಈಗಾಗಲೇ ನಾವು ತಿಳಿಸಿದ್ದೇವೆ. ಕೆನಡಾಗೆ ವಲಸೆ ಹೋಗಿ ಖಲಿಸ್ತಾನ್‌ ಉಗ್ರರ ನಾಯಕನಾಗಿದ್ದ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದ ಬಗ್ಗೆ ಯಾವುದೇ ನಿರ್ದಿಷ್ಟ ಮಾಹಿತಿಯನ್ನು ಮೊದಲು ಅಥವಾ ಈಗಲೂ ಹಂಚಿಕೊಂಡಿಲ್ಲ. ಈ ಬಗ್ಗೆ ಮಾಹಿತಿಯನ್ನು ಪಡೆಯಲು ನಾವು ಸಿದ್ಧರಿದ್ದೇವೆ” ಎಂದು ಅರಿಂದಮ್ ಬಾಗ್ಚಿ ಹೇಳಿಕೆ ನೀಡಿದ್ದಾರೆ.

ಭಾರತಕ್ಕೆ ಬೇಕಾಗಿರುವ ಅಪರಾಧಿಗಳು ಮತ್ತು ‘ವಾಂಟೆಡ್’ ವ್ಯಕ್ತಿಗಳ ಬಗ್ಗೆ ನಿರ್ದಿಷ್ಟ ಮಾಹಿತಿಯನ್ನು ನಾವು ಒದಗಿಸಿದ್ದೇವೆ. ಆದರೆ ಕೆನಡಾ ಎಂದಿಗೂ ಅದರ ಮೇಲೆ ಕಾರ್ಯನಿರ್ವಹಿಸಲಿಲ್ಲ ಎಂದಿರುವ ಅವರು, “ಕೆನಡಾ ಸರ್ಕಾರವು ಈ ರೀತಿಯಲ್ಲಿ ವರ್ತಿಸಬಾರದು. ಭಯೋತ್ಪಾದನೆ ಆರೋಪಗಳನ್ನು ಹೊಂದಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಅಥವಾ ನ್ಯಾಯವನ್ನು ಎದುರಿಸಲು ಅವರನ್ನು ಭಾರತಕ್ಕೆ ಕಳುಹಿಸಬೇಕು ಎಂದು ನಾವು ಆಗ್ರಹಿಸುತ್ತೇವೆ” ಎಂದು ಬಾಗ್ಚಿ ತಿಳಿಸಿದ್ದಾರೆ.

“ಕೆನಡಾದಲ್ಲಿ ಭಯೋತ್ಪಾದಕರಿಗೆ ಸುರಕ್ಷಿತ ನೆಲೆಯನ್ನು ಒದಗಿಸಲಾಗಿದೆ. ಸುಮಾರು 20-25ಕ್ಕಿಂತ ಹೆಚ್ಚು ವ್ಯಕ್ತಿಗಳನ್ನು ಭಾರತಕ್ಕೆ ಹಸ್ತಾಂತರ ಮಾಡುವಂತೆ ನಾವು ಹಲವು ವರ್ಷಗಳಿಂದ ವಿನಂತಿ ಮಾಡಿದ್ದೇವೆ. ಅಲ್ಲದೇ, ಇದಕ್ಕೆ ಸಂಬಂಧಿಸಿ ಅವರನ್ನು ತಮ್ಮದೇ ನೆಲದಲ್ಲಿ ವಿಚಾರಣೆ ನಡೆಸುವಂತೆಯೂ ತಿಳಿಸಿದ್ದೆವು. ಆದರೆ ಭಾರತಕ್ಕೆ ಕೆನಡಾವು ಯಾವುದೇ ನೆರವು ನೀಡುತ್ತಿಲ್ಲ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಏನಿದು ವಿವಾದ?
ಪಂಜಾಬ್‌ನ ಜಲಂಧರ್‌ ನಿವಾಸಿ ಹರ್ದೀಪ್ ಸಿಂಗ್ ನಿಜ್ಜರ್, ಕೆನಡಾ ದೇಶಕ್ಕೆ ಪರಾರಿಯಾಗಿದ್ದನು. ಭಾರತದಲ್ಲಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಈತ, ಕೆನಡಾದಲ್ಲಿ ವಲಸೆ ಹೋಗಿ ಖಲಿಸ್ತಾನ್‌ ಉಗ್ರರ ನಾಯಕನಾಗಿದ್ದ. ಕೆನಡಾ ದೇಶದ ಸರ್ರೆ ಎನ್ನುವ ಪ್ರದೇಶದಲ್ಲಿರುವ ಗುರುದ್ವಾರದ ಹೊರಗೆ 2023ರ ಜುಲೈ 18 ರಂದು ಅಪರಿಚಿತ ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಈತನ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದರು.

ಕೆನಡಾದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಯ ಗುಂಪಿನ ಮುಖಂಡ ಹರ್ದೀಪ್‌ ಸಿಂಗ್ ನಿಜ್ಜರ್‌ನ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಕೆನಡಾ ಸಂಸತ್‌ನಲ್ಲೇ ಗಂಭೀರ ಆರೋಪ ಮಾಡಿದ್ದರು. ಆ ಹೇಳಿಕೆಯ ಬಳಿಕ ಭಾರತ-ಕೆನಡಾ ನಡುವೆ ಶೀತಲ ಸಮರ ಆರಂಭವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

ಅಮೆರಿಕ ವಿಮಾನ ನಿಲ್ದಾಣ: ಏರ್ ಕೆನಡಾ ವಿಮಾನಕ್ಕೆ ಅಪ್ಪಳಿಸಿದ ಟ್ರಕ್

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...