ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಯಲು ಸೂಚನೆ; ವಿಎಚ್‌ಪಿ ಆಕ್ರೋಶ

Date:

ಏಪ್ರಿಲ್ 29ರಂದು ನರ್ಸಿಂಗ್ ಸೂಪರಿಟೆಂಡೆಂಟ್ ಪರೀಕ್ಷೆಗಳನ್ನು ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯು ನಡೆಸಲಿದೆ. ಈ ಪರೀಕ್ಷೆ ವೇಳೆ ಪರೀಕ್ಷಾ ಕೊಠಡಿಯಲ್ಲಿ ಅಭ್ಯರ್ಥಿಗಳು ಧಾರ್ಮಿಕ ಸಂಕೇತಗಳಾದ ಜನಿವಾರ, ಮಂಳಸೂತ್ರ, ಮೊದಲಾದವುಗಳನ್ನು ಧರಿಸುವಂತಿಲ್ಲ ಎಂದು ಸೂಚನೆ ನೀಡಲಾಗಿದೆ. ಇದಕ್ಕೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ವಿಎಚ್‌ಪಿಯ ದಕ್ಷಿಣ ಪ್ರಾಂತ ಕಾರ್ಯವಾಹ ಶರಣ್ ಪಂಪ್‌ವೆಲ್ ತನ್ನ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ರೈಲ್ವೆ ಪರೀಕ್ಷೆಯ ಮಾರ್ಗಸೂಚಿಗಳನ್ನು ಹಂಚಿಕೊಂಡಿರುವ ಅವರು ಈ ಸೂಚನೆಯನ್ನು ವಿರೋಧಿಸಿದ್ದಾರೆ.

railway 3

ಇದನ್ನು ಓದಿದ್ದೀರಾ? ಜನಿವಾರ ಬ್ರಾಹ್ಮಣರಿಗೆ ಎಷ್ಟು ಅತ್ಯಗತ್ಯವೋ ಹಿಜಾಬ್ ಕೂಡ ನಮಗೆ ಅಷ್ಟೇ ಅಗತ್ಯ: ಸಂತ್ರಸ್ತ ಮುಸ್ಲಿಂ ವಿದ್ಯಾರ್ಥಿನಿ ಆಲಿಯಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೈಲ್ವೆ ಇಲಾಖೆಯ ನರ್ಸಿಂಗ್ ಸೂಪರಿಟೆಂಡೆಂಟ್ ಹುದ್ದೆಗೆ ಪರೀಕ್ಷೆಯು 29 ಏಪ್ರಿಲ್ 2025ರಂದು ಬೋಂದೆಲ್‌ನ ಬೆಸೆಂಟ್ ವಿದ್ಯಾಕೇಂದ್ರದಲ್ಲಿ ನಡೆಯಲಿದ್ದು, ಆ ಪರೀಕ್ಷೆ ಬರೆಯಬೇಕಾದರೆ ಹಿಂದೂಗಳು ಅವರ ಧಾರ್ಮಿಕ ಸಂಪ್ರದಾಯಗಳಾದ ಮಂಗಳಸೂತ್ರ, ಜನಿವಾರ ಗಳನ್ನೂ ತೆಗೆದು ಪರೀಕ್ಷೆ ಬರೆಯುವಂತೆ ಪ್ರವೇಶ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ರೀತಿಯ ಧಾರ್ಮಿಕ ವಿರೋಧಿ ಧೋರಣೆ ಸಹಿಸಲು ಅಸಾಧ್ಯ” ಎಂದು ಶರಣ್ ಪಂಪ್‌ವೆಲ್ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಮಾನ್ಯ ಜಿಲ್ಲಾಧಿಕಾರಿಗಳೇ / ಮಾನ್ಯ ಸಂಸದರೇ ಇಂತಹ ಆದೇಶವನ್ನು ಕೈಬಿಟ್ಟು ನಡೆಯಲಿರುವ ಪರೀಕ್ಷೆಯಲ್ಲಿ ಹಿಂದೂಗಳ ಭಾವನೆಗೆ ಧಕ್ಕೆಬಾರದ ರೀತಿಯಲ್ಲಿ ಪರೀಕ್ಷಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲು ಆಗ್ರಹಿಸುತ್ತೇನೆ” ಎಂದಿದ್ದಾರೆ. ಹಾಗೆಯೇ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಟ್ಯಾಗ್ ಮಾಡಿದ್ದಾರೆ.

ಇತ್ತೀಚೆಗೆ ಪರೀಕ್ಷೆ ವೇಳೆ ಜನಿವಾರ ತೆಗೆಯಲು ವಿದ್ಯಾರ್ಥಿಯೋರ್ವ ನಿರಾಕರಿಸಿದ ಕಾರಣ ಪರೀಕ್ಷೆ ಬರೆಯಲು ಸಾಧ್ಯವಾಗದ ಘಟನೆ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ. ಇದೀಗ ರೈಲ್ವೆ ಸೂಚನೆ ಬಹಿರಂಗವಾಗಿದೆ. ಇವೆಲ್ಲವುದರ ನಡುವೆ ಹಿಜಾಬ್ ವಿವಾದವೂ ಮತ್ತೆ ಮುನ್ನೆಲೆಗೆ ಬಂದಿದೆ. “ಹಿಜಾಬ್‌ ಧರಿಸಲು ಅವಕಾಶವಿಲ್ಲದ ಕಾರಣ ಅದೆಷ್ಟೋ ಹೆಣ್ಣು ಮಕ್ಕಳು ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲ. ಅದರ ಬಗ್ಗೆ ಯಾರೂ ಗಮನಹರಿಸಿಲ್ಲ” ಎಂದು ಸಂತ್ರಸ್ತ ವಿದ್ಯಾರ್ಥಿನಿಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...