ಬಂಡವಾಳ ಹೂಡಿಕೆ | ಅಪಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು: ಡಿ ಕೆ ಶಿವಕುಮಾರ್

Date:

“ಬಂಡವಾಳ ಹೂಡಿಕೆ ವಿಚಾರವಾಗಿ ರಾಜ್ಯದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು. ಚುನಾವಣೆ ಮುಗಿದ ಬಳಿಕ ಅವರಿಗೆ ದಾಖಲೆ ಸಮೇತ ಉತ್ತರ ನೀಡುತ್ತೇವೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿ, “ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು. ಅವರು ದಾಖಲೆಗಳನ್ನು ಪರಿಶೀಲಿಸಿ ಮಾತನಾಡಬೇಕು. ಬಿಜೆಪಿಯ ದುರಾಡಳಿತ, ಕಿರುಕುಳಕ್ಕೆ ಬೇಸತ್ತು ಲಕ್ಷಾಂತರ ಉದ್ದಿಮೆದಾರರು, ವ್ಯಾಪಾರಿಗಳು ದೇಶ ಬಿಟ್ಟು ಹೋಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಂಡವಾಳ ಹೂಡಿಕೆದಾರರು ನಮ್ಮ ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರಿದ್ದಾರೆ” ಎಂದರು.

“ನಮ್ಮ ಕೈಗಾರಿಕಾ ಸಚಿವರು ಮತ್ತು ಮಾಹಿತಿ ತಂತ್ರಜ್ಞಾನ ಸಚಿವರು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಚುನಾವಣೆ ಮುಗಿದ ಬಳಿಕ ಈ ವಿಚಾರವಾಗಿ ದಾಖಲೆ ಸಮೇತ ಬಿಜೆಪಿ ನಾಯಕರಿಗೆ ಉತ್ತರ ನೀಡುತ್ತೇವೆ. ಕರ್ನಾಟಕ ಪ್ರಗತಿ, ಅಭಿವೃದ್ಧಿ ಹಾಗೂ ಶಾಂತಿಯ ನಾಡು ಎಂದು ಇಡೀ ದೇಶಕ್ಕೇ ಗೊತ್ತಿದೆ. ನಮ್ಮ ರಾಜ್ಯ ಹಾಗೂ ಬೆಂಗಳೂರನ್ನು ಇಡೀ ವಿಶ್ವವೇ ನೋಡುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಜ್ವಲ್ ರೇವಣ್ಣ ಅವರ ವಿಚಾರವಾಗಿ ದೇವೇಗೌಡರ ಪತ್ರದ ಬಗ್ಗೆ ಕೇಳಿದಾಗ, “ಇದು ಅವರ ಕುಟುಂಬದ ವಿಚಾರ. ಈ ವಿಚಾರವಾಗಿ ಮಾತನಾಡುವುದಿಲ್ಲ” ಎಂದರು.

ಸಿಎಂ ಹಾಗೂ ಡಿಸಿಎಂ ನಗರ ಪ್ರದಕ್ಷಿಣೆ ಬಗ್ಗೆ ಮಾಜಿ ಸಿಎಂ ಬೊಮ್ಮಾಯಿ ಅವರ ಟೀಕೆ ಬಗ್ಗೆ ಕೇಳಿದಾಗ, “ಅವರು ಏನಾದರೂ ಟೀಕೆ ಮಾಡಲಿ. ನಾವು ಜನರಿಗಾಗಿ ಕೆಲಸ ಮಾಡುತ್ತೇವೆ. ನಾವು ಜನರಿಗಾಗಿ ಇದ್ದೇವೆ. ಜನ ನಮ್ಮ ಪರವಾಗಿ ಇರುತ್ತಾರೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...