ನೊಬೆಲ್ ವಿಜೇತ ಅಮರ್ತ್ಯ ಸೇನ್‌ಗೆ ನೋಟಿಸ್: ಗಾಂಧಿ ಬದುಕ್ಕಿದ್ದರೆ ಅವರಿಗೂ ಎಸ್‌ಐಆರ್‌ ಬುಲಾವ್ ಬರುತ್ತಿತ್ತು!

Date:

ಸದ್ಯ ದೇಶದ ಹಲವು ರಾಜ್ಯಗಳಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ನಡೆಯುತ್ತಿದ್ದು, ಹಲವು ಎಡವಟ್ಟುಗಳು ನಡೆದಿವೆ. ಭಾರತೀಯ ಚುನಾವಣಾ ಆಯೋಗವು (ECI) ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್‌ ಅವರಿಗೆಯೇ ವಿಚಾರಣೆಗೆ ನೋಟಿಸ್ ನೀಡಿದೆ. ಆಯೋಗದ ಈ ಕ್ರಮವನ್ನು ದೇಶದ ಪ್ರಸಿದ್ಧ ರಾಜಕೀಯ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ತಮ್ಮ ಕಾರ್ಟೂನ್ ಮೂಲಕ ಟೀಕಿಸಿದ್ದಾರೆ.

ಪ್ರಸ್ತುತ 92 ವರ್ಷದ ಅಮರ್ತ್ಯ ಸೇನ್ ಅವರು ವಿದೇಶದಲ್ಲಿದ್ದು ಅವರ ಕುಟುಂಬಸ್ಥರು ನೋಟಿಸ್ ಸ್ವೀಕರಿಸಿದ್ದಾರೆ. ಈ ಕ್ರಮವನ್ನು ಟಿಎಂಸಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳ ನಾಯಕರುಗಳು ತೀವ್ರವಾಗಿ ಖಂಡಿಸಿದ್ದಾರೆ. “ಕೇಂದ್ರ ಸರ್ಕಾರ ನಡೆಸುತ್ತಿರುವ ಕಿರುಕುಳವಿದು” ಎಂದು ಟಿಎಂಸಿ ಆರೋಪಿಸಿದೆ.

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ | ಎಸ್‌ಐಆರ್ ಒತ್ತಡ; ಮತ್ತೋರ್ವ ಬಿಎಲ್‌ಒ ಆತ್ಮಹತ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಡುವೆ ಸಮರ್ಥನೆಗೆ ಇಳಿದಿರುವ ಚುನಾವಣಾ ಆಯೋಗ ಮತದಾರರ ಪಟ್ಟಿ ನಮೂನೆಯಲ್ಲಿ ದಾಖಲಾಗಿರುವ ಮಾಹಿತಿಯಲ್ಲಿ ಕೆಲವು ವ್ಯತ್ಯಾಸಗಳಿವೆ ಆದ್ದರಿಂದ ನೋಟಿಸ್ ನೀಡಲಾಗಿದೆ ಎಂದು ಹೇಳಿಕೊಂಡಿದೆ. ಅಮರ್ತ್ಯ ಸೇನ್ ಮತ್ತು ಅವರ ತಾಯಿ ಅಮಿತಾ ಸೇನ್ ನಡುವಿನ ವಯಸ್ಸಿನ ವ್ಯತ್ಯಾಸವು 15 ವರ್ಷಗಳಿಗಿಂತ ಕಡಿಮೆ ಇದೆ. ಇದನ್ನು ಸರಿಪಡಿಸಲು ವಿಚಾರಣೆ ಅಗತ್ಯ. ಆದ್ದರಿಂದ ನೋಟಿಸ್ ನೀಡಲಾಗಿದೆ ಎಂದು ಹೇಳಿದೆ. ಇನ್ನು ಜನವರಿ 16ರಂದು ವಿಚಾರಣೆಗೆ ಹಾಜರಾಗುವಂತೆ ಅಥವಾ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ತಿಳಿಸಲಾಗಿದೆ.

ಈ ಬೆಳವಣಿಗೆ ನಡುವೆ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ದೈನಿಕ್ ಭಾಸ್ಕರ್‌ಗೆ ನೀಡಿರುವ ಕಾರ್ಟೂನ್ ವೈರಲ್ ಆಗುತ್ತಿದೆ. “ಗಾಂಧಿ ಬದುಕ್ಕಿದ್ದರೆ ಅವರಿಗೂ ಎಸ್‌ಐಆರ್‌ ಬುಲಾವ್ ಬರುತ್ತಿತ್ತು!” ಎಂದು ಸತೀಶ್ ಆಚಾರ್ಯ ಹೇಳಿದ್ದಾರೆ.

“ನೀವು ರಾಷ್ಟ್ರಪಿತವೇ? ಅದಿರಲಿ ನೀವು ಭಾರತೀಯರು ಎಂದು ಸಾಬೀತುಪಡಿಸಬಹುದೇ?” ಎಂದು ಮಹಾತ್ಮ ಗಾಂಧಿ ಅವರನ್ನು ಚುನಾವಣಾ ಅಧಿಕಾರಿ ಪ್ರಶ್ನಿಸುವಂತಿರುವ ಕಾರ್ಟೂನ್ ಇದಾಗಿದೆ.

ಈ ಮೂಲಕ ತಾಂತ್ರಿಕ ಕಾರಣಗಳನ್ನು ಮುಂದಿಟ್ಟುಕೊಂಡು ದೇಶದ ಶ್ರೇಷ್ಠ ಚಿಂತಕರಿಗೆ ಹೇಗೆ ಕಿರುಕುಳ ನೀಡಲಾಗುತ್ತಿದೆ ಎಂಬುದನ್ನು ವ್ಯಂಗ್ಯವಾಡಿದ್ದಾರೆ. “ಒಂದು ವೇಳೆ ಗಾಂಧೀಜಿಯವರು ಇಂದು ಜೀವಂತವಾಗಿದ್ದರೂ ಸಹ ಅವರಿಗೆ ಇಂತಹದ್ದೇ ಒಂದು ನೋಟಿಸ್ ನೀಡಲಾಗುತ್ತಿತ್ತು” ಎಂಬ ಕಲ್ಪನೆಯನ್ನು ಈ ವ್ಯಂಗ್ಯಚಿತ್ರವು ಧ್ವನಿಸುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...