ಉಗ್ರರ ವಿರುದ್ಧದ ಕೇಸ್ ಎನ್‌ಐಎ ತನಿಖೆಗೆ ವಹಿಸಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ

Date:

ಉಗ್ರರ ವಿರುದ್ಧದ ಕೇಸ್‌ಗಳನ್ನು ಕೂಡಲೇ ಎನ್‌ಐಎ ತನಿಖೆಗೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಧಾನಿ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ. ಬೆಂಗಳೂರು ಸುರಕ್ಷತೆ ಬಗ್ಗೆ ಅಧಿಕಾರಿಗಳು ಫೀಲ್ಡ್ ಗೆ ಇಳಿಯಬೇಕು. ಇದರ ಹಿಂದೆ ಅಂತಾರಾಷ್ಟ್ರೀಯ ಸಂಸ್ಥೆಗಳ ಬೆಂಬಲವಿದೆ. ಬೆಂಗಳೂರಿನಲ್ಲಿ ಸ್ಪೋಟ ಮಾಡುವ ಹುನ್ನಾರ ಇದೆ. ಇದನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಕಳೆದ ಎರಡು ತಿಂಗಳಿಂದ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಬೆಂಗಳೂರಿನ ಕಾನೂನು ಸುವ್ಯವಸ್ಥೆ ಅಪರಾಧ ನಿಯಂತ್ರಣ ಕೈ ತಪ್ಪುತ್ತಿದೆ. ನಿತ್ಯ ಕೊಲೆ ಸುಲಿಗೆ ಸಾಮಾನ್ಯವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಹಳಷ್ಟು ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ರಿಜಿಸ್ಟರ್ ಆಗುತ್ತಿಲ್ಲ. ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ ಮಾಡುವುದು ಪೊಲೀಸರ ಕೆಲಸ. ಈ ಸರ್ಕಾರ ಬಂದ ಮೇಲೆ ಮಧ್ಯವರ್ತಿಗಳು ಕೈ ಹಾಕಿ ನಿಯಂತ್ರಣ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಸರ್ಕಾರ ಅವಕಾಶ ಕೊಡಬಾರದು. ಬೆಂಗಳೂರಿನಲ್ಲಿ ಕ್ಲಬ್ ಚಟುವಟಿಕೆಗಳು ಹೆಚ್ಚಾಗಿದೆ, ಹಫ್ತಾ ವಸೂಲಿ ತೀವ್ರವಾಗುತ್ತಿದೆ ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸ್ಫೋಟಕ್ಕೆ ಸಂಚು; ಐವರು ಶಂಕಿತ ಉಗ್ರರ ಬಂಧನ

ಇಲ್ಲೇ ನೆಲಸಿ ಅಪರಾಧ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುವಂತ ಕೆಲಸ ಆಗುತ್ತಿದೆ. ಅಂತಾರಾಷ್ಟ್ರೀಯ ಐಎಸ್‌ಐ ಇವರ ಸಂಪರ್ಕದಲ್ಲಿದ್ದಾರೆ. ಸಿಸಿಬಿ ಅಧಿಕಾರಿಗಳನ್ನು ಬಹಿರಂಗ ಪಡಿಸಿ, ಇದರ ಆಳ ಮತ್ತು ಉದ್ದ ದೊಡ್ಡದಿದೆ. ಇದಕ್ಕೆಲ್ಲಾ ಅಂತಾರಾಷ್ಟ್ರೀಯ ಕುಮ್ಮಕ್ಕು ಇದೆ. ಉಗ್ರರನ್ನು ಬಂಧಿಸಿದ ಸಿಸಿಬಿಗೆ ಅಭಿನಂದನೆ ಸಲ್ಲುಸುತ್ತೇನೆ ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...