ರಾಯಚೂರು | ಪೇದೆ ಮೇಲೆ ಶಾಸಕಿ ಪುತ್ರನಿಂದ ಹಲ್ಲೆ ಪ್ರಕರಣ; ಪೊಲೀಸ್‌ ಸಿಬ್ಬಂದಿ ಸಹಿ ಸಂಗ್ರಹ ಅಭಿಯಾನ

Date:

ಪೊಲೀಸ್‌ ಕಾನ್ಸ್‌ಟೇಬಲ್‌ ಮೇಲೆ ರಾಯಚೂರು ಜಿಲ್ಲೆಯ ದೇವದುರ್ಗ ಶಾಸಕಿ ಕರೆಮ್ಮ ಅವರ ಪುತ್ರ ಮತ್ತು ಪಿಎ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿಲ್ಲವೆಂದು ಅಸಮಾಧಾನಗೊಂಡಿರುವ ಕಾನ್ಸ್‌ಟೇಬಲ್ ಹನಮಂತರಾಯ ಮತ್ತು ಇತರ ಪೇದೆಗಳು ಸಹಿ ಸಂಗ್ರಹ ಅಭಿಯಾನ ಆರಂಭಿಸಿದ್ದಾರೆ.

ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಟ್ರ್ಯಾಕ್ಟರ್‌ಅನ್ನು ವಶಕ್ಕೆ ಪಡೆದ ವಿಚಾರವಾಗಿ ತಮ್ಮ ಮೇಲೆ ಶಾಸಕಿ ಪುತ್ರ ಸಂತೋಷ್ ಮತ್ತು ಪಿಎ ಇಲಿಯಾಸ್ ಸೇರಿದಂತೆ ಎಂಟು ಮಂದಿ ಹಲ್ಲೆ ನಡೆಸಿದ್ದಾರೆ ಎಂದು ಕಾನ್ಸ್‌ಟೇಬಲ್ ಹನಮಂತರಾಯ ದೂರು ದಾಖಲಿಸಿದ್ದರು. ಈ ಬೆನ್ನಲ್ಲೇ ಕೆಲ ಪೊಲೀಸ್‌ ಸಿಬ್ಬಂದಿಗಳನ್ನು ವರ್ಗಾವಣೆ ಮಾಡುವಂತೆ ಶಾಸಕಿ ಕರೆಮ್ಮ ಒತ್ತಾಯಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವಿಚಾರವಾಗಿಯೂ ಪೊಲೀಸ್‌ ಇಲಾಖೆಯ ಬಗ್ಗೆ ದೇವದುರ್ಗ ಠಾಣೆಯ ಕಾನ್ಸ್‌ಟೇಬಲ್‌ಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ತಮ್ಮ ಕುಟುಂಬಕ್ಕೆ ರಕ್ಷಣೆ ನೀಡುವಂತೆ ರಾಯಚೂರು ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್ ಬಿ ಅವರಿಗೆ ಪೇದೆ ಹನಮಂತರಾಯ ಮನವಿ ಮಾಡಿದ್ದಾರೆ.

ಪೊಲೀಸ್‌ ಪೇದೆಯ ಮೇಲೆ ಹಲ್ಲೆ ನಡೆದು ಹಲವಾರು ದಿನಗಳು ಕಳೆದಿವೆ. ಆದರೂ, ಯಾವುದೇ ಕ್ರಮ ಕೈಗೊಂಡಿಲ್ಲ. ರಾಜಕೀಯ ಒತ್ತಡದ ಕಾರಣಕ್ಕೆ ಆರೋಪಿಯನ್ನು ಬಂಧಿಸಿಲ್ಲ ಎಂದು ಎಲ್ ಆ್ಯಂಡ್ ಓ ಠಾಣೆಯ 36 ಮತ್ತು ಟ್ರಾಫಿಕ್ ಠಾಣೆಯ 23 ಪೊಲೀಸ್ ಕಾನ್ಸ್ಟೇಬಲ್​ಗಳು ಸೇರಿ‌ 59 ಸಿಬ್ಬಂದಿಗಳು ಸಹಿ ಸಂಗ್ರಹ ನಡೆಸುತ್ತಿದ್ದಾರೆ. ರಾಯಚೂರು ಎಸ್‌ಪಿಗೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸ್ ಕಾಲೋನಿ ಬಳಿಯೇ ಶಾಸಕಿ ನಿವಾಸ ಮತ್ತು ಜೆಡಿಎಸ್ ಕಚೇರಿ ಇದೆ. ಶಾಸಕಿ ಬೆಂಬಲಿಗರು ಪೊಲೀಸ್ ಕಾಲೋನಿಯಲ್ಲೇ ಓಡಾಡುತ್ತಾರೆ. ಮೂತ್ರವಿಸರ್ಜನೆ ಮಾಡುತ್ತಾರೆ. ನಮ್ಮ ಕುಟುಂಬಗಳಿಗೆ ನಿತ್ಯ ಕಿರಿಕಿರಿಯಾಗುತ್ತಿದೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...