ಜಾತಿ ನಿಂದನೆ ಪ್ರಕರಣ: ಎಫ್‌ಎಸ್‌ಎಲ್‌ ಪರೀಕ್ಷೆಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಧ್ವನಿ ದೃಢ

Date:

ಜಾತಿ ನಿಂದನೆ ಮಾಡಿದ್ದಾರೆಂದು ವೈರಲ್‌ ಆಗಿದ್ದ ಆಡಿಯೋದಲ್ಲಿರುವ ಧ್ವನಿ ಬಿಜೆಪಿ ಶಾಸಕ ಮುನಿರತ್ನ ಅವರದ್ದೇ ಎಂಬುದು ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್ಎಲ್) ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಮುನಿರತ್ನ ತಮಗೆ ಜಾತಿ ನಿಂದನೆ ಮಾಡಿದ್ದಾರೆಂದು ಬಿಬಿಎಂಪಿ ಗುತ್ತಿಗೆದಾರ ಮೇಲು ನಾಯ್ಕರ್ ಆರೋಪಿಸಿದ್ದರು. ಆರೋಪಕ್ಕೆ ಸಂಬಂಧಿಸಿದಂತೆ ಆಡಿಯೋವೊಂದನ್ನೂ ಬಿಡುಗಡೆ ಮಾಡಿದ್ದರು. ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆ ಆಡಿಯೋ ಮತ್ತು ದೂರು ಆಧರಿಸಿ ಪೊಲೀಸರು ಮುನಿರತ್ನ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ಡೆಯಡಿ ಸೆಪ್ಟೆಂಬರ್ 13ರಂದು ಎಫ್‌ಐಆರ್ ದಾಖಲಿಸಿದ್ದರು. ಆಡಿಯೋವನ್ನು ಎಫ್‌ಎಸ್‌ಎಲ್‌ ಪರೀಕ್ಷೆಗೆ ಕಳಿಸಲಾಗಿತ್ತು. ಇದೀಗ, ಆಡಿಯೋದ ಎಫ್‌ಎಸ್‌ಎಲ್‌ ವರದಿ ಬಂದಿದ್ದು, ಆ ಆಡಿಯೋದಲ್ಲಿ ಇರುವುದು ಮುನಿರತ್ನ ಅವರದ್ದೇ ಧ್ವನಿ ಎನ್ನುವುದು ದೃಢಪಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾತಿ ನಿಂದನೆ ಪ್ರಕರಣದಲ್ಲಿ ಮುನಿರತ್ನ ಅವರನ್ನು ಸೆ.14ರಂದು ಪೊಲೀಸರು ಕೋಲಾರದ ಬಳಿ ಬಂದಿಸಿದ್ದರು. ಆ ಬಳಿಕ, ರಾಜಕೀಯ ಮುಖಂಡೆಯೊಬ್ಬರು ಮುನಿರತ್ನ ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆಂದು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ನಂತರದಲ್ಲಿ ಮುನಿರತ್ನ ತಮ್ಮ ಎದುರಾಳಿಗಳಿಗೆ, ರಾಜಕೀಯ ನಾಯಕರಿಗೆ ಹನಿಟ್ರ್ಯಾಪ್‌ ಮಾಡಿದ್ದಾರೆ. ಎಚ್‌ಐವಿ ಸೋಕಿಂತ ರಕ್ತವನ್ನೂ ಇಂಜೆಕ್ಟ್‌ ಮಾಡಲು ಸಂಚು ಹೂಡಿದ್ದರು ಎಂಬ ಆರೋಪಗಳೂ ಕೇಳಿಬಂದಿದ್ದವು. ಈ ಎಲ್ಲ ಆರೋಪಗಳ ಆಧಾರದ ಮೇಲೆ ಮುನಿರತ್ನ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿದ್ದವು. ತನಿಖೆಯನ್ನು ಎಸ್‌ಐಟಿಗೆ ವರ್ಗಾಯಿಸಲಾಗಿತ್ತು.

ಎಲ್ಲ ಪ್ರಕರಣಗಳಲ್ಲಿಯೂ ಮುನಿರತ್ನ ಜಾಮೀನು ಪಡೆದಿದ್ದು, ಜೈಲಿನಿಂದ ಹೊರಬಂದಿದ್ದಾರೆ. ಇದೀಗ, ಜಾತಿನಿಂದನೆ ಪ್ರಕರಣದಲ್ಲಿ ಆಡಿಯೋದಲ್ಲಿರುವುದು ಮುನಿರತ್ನ ಅವರದ್ದೇ ಧ್ವನಿ ಎಂಬುದು ಸಾಬೀತಾಗಿದೆ. ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ರದ್ದಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...