ಜಾತಿ ದೌರ್ಜನ್ಯ | ಮದುವೆ ಮೆರವಣಿಗೆಯಲ್ಲಿ ದಲಿತ ವರನನ್ನು ಕುದುರೆಯಿಂದ ಇಳಿಸಿದ ಸವರ್ಣೀಯರು

Date:

ಮದುವೆ ಮೆರವಣಿಗೆಯಲ್ಲಿ ಕುದುರೆ ಮೇಲೆ ಸಾಗುತ್ತಿದ್ದ ದಲಿತ ವರನನ್ನು ಸರ್ಣೀಯರು ಬಲವಂತವಾಗಿ ಕುದುರೆಯಿಂದ ಕೆಳಗಿಸಿರುವ ಜಾತಿ ದೌರ್ಜನ್ಯದ ಘಟನೆ  ಗುಜರಾತ್‌ನ ಗಾಂಧಿನಗರ ಜಿಲ್ಲೆಯ ಚಡಸಾನಾ ಗ್ರಾಮದಲ್ಲಿ ನಡೆದಿದೆ. ಪ್ರಬಲ ಜಾತಿಯವರು ವರನಿಗೆ ಜಾತಿ ನಿಂದನೆ ಮಾಡಿ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ವರನ ಸೋದರ ಸಂಬಂಧಿ ಮತ್ತು ಸಹೋದರ ಗಾಂಧಿನಗರದ ಮಾನಸ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ನಾಲ್ವರ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದೂರಿನ ಪ್ರಕಾರ, ಸೋಮವಾರ ಮಧ್ಯಾಹ್ನ ವರ ಸುಮಾರು 100 ಜನರೊಂದಿಗೆ ಮದುವೆ ಮೆರವಣಿಗೆಯಲ್ಲಿ ಕುದುರೆ ಮೇಲೆ ಸಾಗುತ್ತಿದ್ದರು. ಆಗ, ವ್ಯಕ್ತಿಯೊಬ್ಬ ಮೋಟಾರ್ ಸೈಕಲ್‌ನಲ್ಲಿ ಬಂದು ವರನಿಗೆ ಬೆದರಿಕೆ ಹಾಕಿದ್ದಾನೆ. ಬಲವಂತವಾಗಿ ವರನನ್ನು ಕುದುರೆಯಿಂದ ಕೆಳಗಿಳಿಯುವಂತೆ ಒತ್ತಾಯಿಸಿದ್ದಾನೆ. ಅಲ್ಲದೆ, ಜಾತಿ ನಿಂದನೆ ಮಾಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಜಾತಿ ದೌರ್ಜನ್ಯ | ದಲಿತ ಮಹಿಳೆಯರಿಗೆ ತೆಂಗಿನ ಚಿಪ್ಪಿನಲ್ಲಿ ಚಹಾ ಕೊಟ್ಟ ಸವರ್ಣೀಯರು

“ನನ್ನ ಸಹೋದರನನ್ನು (ವರ) ಬಲವಂತವಾಗಿ ಕುದುರೆಯಿಂದ ಇಳಿಸಲಾಗಿದೆ. ನಂತರ, ನಮ್ಮ ಕುಟುಂಬ ಸದಸ್ಯರು ಆತನೊಂದಿಗೆ ಮಾತನಾಡಿ, ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಿದರು. ಆ ವೇಳೆ, ಇತರ ಮೂವರು ಸವರ್ಣೀಯರು ಬಂದು ನನ್ನ ಸಹೋದರನಿಗೆ ಜಾತಿ ನಿಂಧನೆ ಮಾಡಿದರು. ಅಲ್ಲದೆ, ಕುಟುಂಬದ ಸದಸ್ಯರೊಬ್ಬರಿಗೆ ಕಪಾಳಕ್ಕೆ ಹೊಡೆದಿದ್ದಾರೆ” ಎಂದು ವರನ ಸಹೋದರ ದೂರಿನಲ್ಲಿ ವಿವರಿಸಿದ್ದಾರೆ.

“ಕುದುರೆ ಸವಾರಿ ಮಾಡಲು ತಮ್ಮ ಅನುಮತಿ ಪಡೆಯಬೇಕೆಂದು ಸವರ್ಣೀಯರು ಹೇಳಿದರು. ಶಾಂತಿಯುತ ಮೆರವಣಿಗೆ ನಡೆಸಲು ನಾವು ಪ್ರಯತ್ನಿಸಿದೆವು. ಆದರೂ, ಸ್ಥಳದಿಂದ ಹೋಗುವಂತೆ ಅವರು ಕುದುರೆ ಮಾಲೀಕರು ಮತ್ತು ವಾದ್ಯದ ಸಿಬ್ಬಂದಿಗಳಿಗೆ ಬೆದರಿಕೆ ಹಾಕಿದರು” ಎಂದು ಆರೋಪಿಸಿದ್ದಾರೆ.

ಗಾಂಧಿನಗರ ಕಲೋಲ್ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರವೀಣ್ ಮನ್ವಾರ್ ಮಂಗಳವಾರ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ‘‘ಘಟನೆಯ ಸಂಬಂಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಆರೋಪಿಗಳನ್ನು ಬಂಧಿಸಲಾಗಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...