ಜಾತಿ ಗಣತಿ ವರದಿ ಜಾರಿ ಮಾಡೇ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಘೋಷಣೆ

Date:

ಜಾತಿ ಗಣತಿಯ ವರದಿಯನ್ನು ಜಾರಿ ಮಾಡೇ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಮೈಸೂರಿನಲ್ಲಿಂದು ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾತಿ ಗಣತಿ ವರದಿ ನನ್ನ ಕೈ ಸೇರಿದೆ. ನಾನು ಇನ್ನೂ ಅದನ್ನು ಪರಿಪೂರ್ಣವಾಗಿ ನೋಡಿಲ್ಲ. ಮುಂದಿನ ದಿನಗಳಲ್ಲಿ ಅದನ್ನು ಸಂಪುಟಕ್ಕೆ ಇಟ್ಟು ಜಾರಿಗೆ ತರುತ್ತೇನೆ. ಜಾತಿ ಗಣತಿ ಜಾರಿ ನಮ್ಮ ಪಕ್ಷದ ಅಜೆಂಡಾ. ಹೀಗಾಗಿ ಜಾರಿ ಮಾಡೇ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕ ಜಾತಿ ಗಣತಿ ವರದಿ ಎಂದೇ ಜನಪ್ರಿಯವಾಗಿರುವ ಸಾಮಾಜಿಕ ಆರ್ಥಿಕ ಮತ್ತು ಶಿಕ್ಷಣ ಸಮೀಕ್ಷೆಯ ಬಹು ನಿರೀಕ್ಷಿತ ವರದಿಯನ್ನು ಈಗಾಗಲೇ ಕೆಎಸ್‌ಸಿಬಿಸಿ ಅಧ್ಯಕ್ಷರಾಗಿದ್ದ ಕೆ ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಧಾನಸೌಧದಲ್ಲೇ ಅತ್ಯಾಚಾರ? ಇದು ಕೇವಲ ತನಿಖೆಯಿಂದ ಬಗೆಹರಿಯುವ ಸಂಗತಿಯಲ್ಲ

ಈ ಬಗ್ಗೆ ಪರ-ವಿರೋಧಗಳು ವ್ಯಕ್ತವಾಗಿವೆ. ಕೆಲವರು ಜಾರಿ ಮಾಡಲೇಬೇಕೆಂದು ಪಟ್ಟು ಹಿಡಿದಿದ್ದರೆ, ಇನ್ನೂ ಕೆಲವರು ಇದನ್ನು ತಿರಸ್ಕೃತ ಮಾಡಬೇಕೆಂದು ಆಗ್ರಹಿಸಿದ್ದಾರೆ. ಇವೆಲ್ಲದರ ನಡುವೆ ಸಿಎಂ ಸಿದ್ದರಾಮಯ್ಯನವರು ವರದಿಯನ್ನು ಜಾರಿ ಮಾಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.

ಮೂಲಗಳ ಪ್ರಕಾರ, ಈ ಜಾತಿ ಗಣತಿ ವರದಿಯು 48 ಸಂಪುಟಗಳನ್ನು ಹೊಂದಿದ್ದು, ಮುಖ್ಯ ಶಿಫಾರಸು ಕಿರುಪುಸ್ತಕವು 200 ಪುಟಗಳನ್ನು ಹೊಂದಿದೆ. ಪ್ರತಿಯೊಂದು ಸಂಪಟವು ವಿವಿಧ ಜಾತಿಗಳ ಗುಂಪಿನ ಅಂಕಿಅಂಶಗಳನ್ನು ಹೊಂದಿದೆ. ವರದಿಯು ವಿಧಾನಸಭಾ ಕ್ಷೇತ್ರಗಳ ಆಧಾರದ ಮೇಲೆ ಜಾತಿ ಅಂಕಿ ಅಂಶಗಳನ್ನು ಒಳಗೊಂಡಿದೆ. ಜೊತೆಗೆ ಹಿಂದಿನ ವರದಿಗಳಲ್ಲಿ ಸೇರಿಸದ ಸಣ್ಣ ಜನಸಂಖ್ಯೆಯನ್ನು ಹೊಂದಿರುವ ಜಾತಿಗಳ ವಿವರಗಳನ್ನು ಒಳಗೊಂಡಿದೆ. ಒಟ್ಟು 1,351 ವಿವಿಧ ಜಾತಿಗಳ ಮೇಲೆ ಸಮೀಕ್ಷೆ ನಡೆಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...