ಜಾತಿ ಗಣತಿ | ಯಾವಾಗ ಆರಂಭ, ಎಂದು ಜಾರಿ ಎಂಬುದನ್ನು ಪ್ರಧಾನಿ ಮೋದಿ ಖಾತ್ರಿ ಪಡಿಸಲಿ: ರಾಹುಲ್‌ ಗಾಂಧಿ

Date:

ಶೀಘ್ರದಲ್ಲೇ ನಡೆಯಲಿರುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನೂ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಬುಧವಾರ ಘೋಷಿಸಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸ್ವಾಗತಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯಲ್ಲಿ ದೇಶದ ಜಾತಿ ಗಣತಿ ನಡೆಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ ಬೆನ್ನಲ್ಲೇ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ದೆಹಲಿಯಲ್ಲಿ ತುರ್ತು ಸುದ್ದಿಗೋಷ್ಠಿ ಕರೆದು ಮಾತನಾಡಿದರು.

“ನಾವು ಸಂಸತ್ತಿನಲ್ಲಿ ಜಾತಿ ಜನಗಣತಿ ಮಾಡುತ್ತೇವೆ ಎಂದು ಹೇಳಿದ್ದೆವು. ಮೀಸಲಾತಿ ವಿಚಾರದಲ್ಲಿ ಗೋಡೆಯಾಗಿರುವ ಶೇ. 50ರ ಮಿತಿಯನ್ನು ಮುರಿಯುತ್ತೇವೆ ಎಂದು ಹೇಳಿದ್ದೆವು. ಅದರೆ, ಪ್ರಧಾನಿ ನರೇಂದ್ರ ಮೋದಿ ಕೇವಲ ನಾಲ್ಕು ಜಾತಿಗಳಿವೆ ಎಂದು ಹೇಳಿದ್ದರು. ಈಗ ಅವರೇ ನಮ್ಮ ಆಗ್ರಹವನ್ನು ಒಪ್ಪಿಕೊಂಡು ಜಾತಿ ಗಣತಿ ಮಾಡುವುದಾಗಿ ಘೋಷಿಸಿದ್ದಾರೆ. ಮೋದಿ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ಮುಕ್ತವಾಗಿ ಸ್ವಾಗತಿಸುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಾತಿ ಗಣತಿ ವಿಚಾರದಲ್ಲಿ ತೆಲಂಗಾಣ ಮಾದರಿ ಬಿಹಾರ ಮಾದರಿಗಿಂತ ಉತ್ತಮವಾಗಿದೆ. ತೆಲಂಗಾಣ ಒಂದು ಮಾದರಿಯಾಗಿದ್ದು, ದೇಶಕ್ಕೆ ನೀಲನಕ್ಷೆಯಾಗಬಹುದು. ಜಾತಿ ಗಣತಿ ಯಾವ ಅವಧಿಗೆ ಮುಗಿಯಲಿದೆ ಎಂಬುದನ್ನು ಪ್ರಧಾನಿ ಮೋದಿಯವರು ದೇಶಕ್ಕೆ ಖಾತ್ರಿ ಕೊಡಬೇಕು. ಕಾಲ ವಿಳಂಬವನ್ನು ನಾವು ಸಹಿಸುವುದಿಲ್ಲ. ನಿರ್ಧಿಷ್ಟ ಸಮಯ ನಿಗದಿ ಪಡಿಸಿ ಶೀಘ್ರವೇ ಕಾರ್ಯ ಆರಂಭವಾಗಬೇಕು. ಕಾಯ್ದೆಯಾಗಿ ಜಾರಿಯಾಗಬೇಕು” ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.

“ಜಾತಿ ಜನಗಣತಿ ಇದು ಮೊದಲ ಹೆಜ್ಜೆ. ಕಾಂಗ್ರೆಸ್ ಪಕ್ಷ ಇದರ ಸುತ್ತ ಹೊಸ ದೃಷ್ಟಿಕೋನವನ್ನು ಹೊಂದಿದ್ದು, ನಮ್ಮ ದೃಷ್ಟಿಕೋನ, ಅವರು ಅಳವಡಿಸಿಕೊಂಡಿದ್ದಕ್ಕೆ ಸಂತೋಷವಿದೆ. ಜಾತಿ ಜನಗಣತಿಯ ಮೂಲಕ ಹೊಸ ಅಭಿವೃದ್ಧಿ ಮಾದರಿಯನ್ನು ತರುವುದು ನಮ್ಮ ಮುಂದಿನ ಗುರಿಯಾಗಿದೆ. ಈ ಗುರಿ ಕೇವಲ ಮೀಸಲಾತಿಗೆ ಸೀಮಿತವಾಗಿಲ್ಲ, ಈ ಸುತ್ತ ಪ್ರಮುಖ ಪ್ರಶ್ನೆಗಳನ್ನು ಎತ್ತುವುದರ ಬಗ್ಗೆಯೂ ನಾವು ಸ್ಪಷ್ಟತೆಯಲ್ಲಿದ್ದೇವೆ. ಅದು ಒಬಿಸಿಗಳು, ದಲಿತರು, ಆದಿವಾಸಿಗಳು – ಈ ದೇಶದ ರಾಜಕೀಯ ವ್ಯವಸ್ಥೆಯಲ್ಲಿ ಹೇಗೆ ಭಾಗಿಯಾಗಲಿದ್ದಾರೆ ಎನ್ನುವ ಬಗ್ಗೆ ನಮಗೆ ಪ್ರಶ್ನೆಗಳಿವೆ” ಎಂದು ಹೇಳಿದರು.

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾದ ಮತ್ತೊಂದು ಪ್ರಮುಖ ವಿಷಯವಿದೆ. ಅದು ಆರ್ಟಿಕಲ್ 15 (5) ಅಡಿಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ. ಎನ್‌ಡಿಎ-ಬಿಜೆಪಿ ಸರ್ಕಾರವು ಇದನ್ನು ಜಾರಿಗೆ ತರಲು ಮುಂದಾಗಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...