ಜಾತಿ ಜನಗಣತಿ ಲಕೋಟೆ ಓಪನ್‌, ಜಾರಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ

Date:

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನಕ್ಕೆ ಬರದೇ ಮತ್ತೆ ಮುಂದಿನ ಸಚಿವ ಸಂಪುಟದಲ್ಲಿ ಸುದೀರ್ಘ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲು ಸಂಪುಟ ತೀರ್ಮಾನಿಸಿದೆ.

ಕರ್ನಾಟಕದ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಧಾರಿತ ಜಾತಿ ಗಣತಿ ವರದಿ ಅನುಷ್ಠಾನ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಇಂದು ಜಾರಿಯ ಸಾಧ್ಯತೆ ಬಗ್ಗೆ ಚರ್ಚಿಸಲಾಗಿದ್ದು, ಅಂತಿಮವಾಗಿ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವುದೆಂದು ನಿರ್ಧರಿಸಲಾಗಿದೆ.

ಕಳೆದ ವರ್ಷ ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್‌ ಹೆಗ್ಡೆ ಸಲ್ಲಿಸಿದ್ದ ದತ್ತಾಂಶ ಅಧ್ಯಯನ ವರದಿ-2024 ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ ಮಾಡಿದ್ದರು. ಶುಕ್ರವಾರದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ಲಕೋಟೆ ಓಪನ್ ಮಾಡಲಾಯಿತು. ಸಚಿವರ ಕೈಗೆ ಜಾತಿ ಗಣತಿ ದತ್ತಾಂಶ ನೀಡಿದ ಬಳಿಕ ಆ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಲಾಯಿತು. ಸಂಪುಟ ಸಹೋದ್ಯೋಗಿಗಳ ಅಭಿಪ್ರಾಯ ಆಲಿಸಿದ ಸಿಎಂ ಸಿದ್ದರಾಮಯ್ಯ, ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏಪ್ರಿಲ್ 17 ರಂದು ನಡೆಯುವ ವಿಶೇಷ ಸಂಪುಟ ಸಭೆಯಲ್ಲಿ ಜಾತಿ ಜನಗಣತಿಯ ಕುರಿತು ಚರ್ಚೆ ನಡೆಸಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.

“ಜಾತಿ ಜನಗಣತಿ ವರದಿಯು 50 ಸಂಪುಟಗಳಲ್ಲಿದೆ. ಇದು 1.38 ಕೋಟಿ ಕುಟುಂಬಗಳ 5.98 ಕೋಟಿ ಜನರನ್ನು ಒಳಗೊಂಡಿದೆ. ಇದು ಶೇಕಡಾ 94.77 ಜನರನ್ನು ಒಳಗೊಂಡಿದೆ. ಕೇವಲ ಶೇಕಡಾ 5.23 ರಷ್ಟು ಜನ ಮಾತ್ರ ಇದರ ವ್ಯಾಪ್ತಿಯಿಂದ ಹೊರಗಿದ್ದಾರೆ” ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.

ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಜಾತಿ ಗಣತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಫೆಬ್ರವರಿ 29, 2024 ರಲ್ಲಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಿತ್ತು. ಆದರೆ ಈ ವರದಿಗೆ ಕಾಂಗ್ರೆಸ್‌ನಲ್ಲೇ ಆಂತರಿಕವಾಗಿ ವಿರೋಧ ವ್ಯಕ್ತವಾಗಿದೆ. ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದ ನಾಯಕರುಗಳು ವರದಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...