ಜಾತಿ ಗಣತಿ | ರಾಜ್ಯ ಮಟ್ಟದ ಸಮೀಕ್ಷೆಗಳಿಗೆ ವಿಶ್ವಾಸಾರ್ಹತೆ ಇಲ್ಲ: ಹೆಚ್‌ ಡಿ ಕುಮಾರಸ್ವಾಮಿ

Date:

ಮುಂಬರುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ನಡೆಸಲು ಕೇಂದ್ರ ಸಂಪುಟ ನಿರ್ಧರಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ನಿರ್ಧಾರ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಬಣ್ಣಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಮುಂಬರುವ ಜನಗಣತಿ ಜೊತೆಯಲ್ಲಿಯೇ ಜಾತಿ ಗಣತಿಯನ್ನೂ ನಡೆಸುವ ಮಹತ್ವದ ನಿರ್ಧಾರವನ್ನು ಮೋದಿಯವರ ನೇತೃತ್ವದಲ್ಲಿ ಕೈಗೊಳ್ಳಲಾಗಿದೆ. ಅವರ ಕ್ರಿಯಾಶೀಲ ನಾಯಕತ್ವದಲ್ಲಿ ಇದು ಐತಿಹಾಸಿಕ ಮತ್ತು ದೂರದೃಷ್ಟಿಯ ನಿರ್ಧಾರವಾಗಿದೆ. ಜಾತಿ ಗಣತಿಯು 1931ರ ನಂತರ ಇದೇ ಮೊದಲ ಬಾರಿಗೆ ಮುಂಬರುವ ರಾಷ್ಟ್ರೀಯ ಜನಗಣತಿಯ ಭಾಗವಾಗಲಿದೆ ಎಂಬುದು ಗಮನಾರ್ಹ” ಎಂದಿದ್ದಾರೆ.

“ಈ ಮಹತ್ವದ ಹೆಜ್ಜೆಯು ಭಾರತವು ಅಧಿಕೃತ, ವೈಜ್ಞಾನಿಕ ಮತ್ತು ಪಾರದರ್ಶಕವಾದ ಜಾತಿ ದತ್ತಾಂಶ ಹೊಂದಲಿದೆ. ಕೇವಲ ರಾಜಕೀಯ ಪ್ರೇರಿತ ರಾಜ್ಯ ಮಟ್ಟದ ಸಮೀಕ್ಷೆಗಳು ವಿಶ್ವಾಸಾರ್ಹತೆ, ಏಕರೂಪತೆ ಹೊಂದಿರುವುದಿಲ್ಲ ಎಂಬುದು ನನ್ನ ಸ್ಪಷ್ಟ ಅಭಿಪ್ರಾಯ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ದಿಟ್ಟ ಕ್ರಮದೊಂದಿಗೆ ಪ್ರಧಾನಿ ಮೋದಿ ಅವರು ಸಮಗ್ರ ಆಡಳಿತ ಮತ್ತು ದತ್ತಾಂಶ ಚಾಲಿತ ನೀತಿ ನಿರೂಪಣೆ ಬಗ್ಗೆ ಹೊಂದಿರುವ ತಮ್ಮ ಅಚಲ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ಅಲ್ಲದೇ, ಈ ಗಣತಿಯು ಕಲ್ಯಾಣ ಕಾರ್ಯಕ್ರಮಗಳನ್ನು ಬಲಗೊಳಿಸುತ್ತದೆ, ಸಾಮಾಜಿಕ ನ್ಯಾಯವನ್ನು ಇನ್ನಷ್ಟು ಖಚಿತಪಡಿಸುತ್ತದೆ ಹಾಗೂ ಸರ್ವರಿಗೂ ಸಮಾನ ಅವಕಾಶಗಳನ್ನು ಸೃಷ್ಟಿಸುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ರಾಷ್ಟ್ರದ ಹಿತದೃಷ್ಟಿಯಿಂದ ಈ ನಿರ್ಣಾಯಕ ಮತ್ತು ದೂರದೃಷ್ಟಿಯ ನಿರ್ಧಾರಕ್ಕಾಗಿ ಪ್ರಧಾನಮಂತ್ರಿಯವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಈ ನಿರ್ಧಾರವನ್ನು ನಾನು, ನಮ್ಮ ಪಕ್ಷವು ಸ್ವಾಗತಿಸುತ್ತದೆ” ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...