ಜಾತಿ ಸಮೀಕ್ಷೆಯು ಸಿಎಂ ಸಿದ್ದರಾಮಯ್ಯರ ರಹಸ್ಯ ಅಜೆಂಡಾಗೆ ನೆರವಾಗುತ್ತಿದೆ: ಕೇಂದ್ರ ಸಚಿವ ಎಚ್‌ಡಿಕೆ ಆರೋಪ

Date:

ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಆಧಾರಿತ ಜಾತಿ ಸಮೀಕ್ಷೆಯನ್ನು ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವ ಬಿಜೆಪಿ ಮತ್ತು ಜೆಡಿಎಸ್‌ ನಿರಂತರವಾಗಿ ಟೀಕಿಸುತ್ತಿವೆ. ವಿರೋಧ ವ್ಯಕ್ತಪಡಿಸುತ್ತಿವೆ. ಮಾತ್ರವಲ್ಲ, ಸಮೀಕ್ಷೆ ಸಹಕರಿಸದಂತೆ ಜನರನ್ನು ಪ್ರೇರೇಪಿಸುತ್ತಿವೆ. ಇದೀಗ, ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಕೂಡ ಜಾತಿ ಸಮೀಕ್ಷೆ ವಿರುದ್ಧ ಮಾತನಾಡಿದ್ದಾರೆ. ‘ಈ ಸಮೀಕ್ಷೆಯು ರಾಜ್ಯದ ಜನರ ಕಲ್ಯಾಣಕ್ಕಾಗಿ ನಡೆಯುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಹಸ್ಯ ಅಜೆಂಡಾಗಳಿಗಾಗಿ ನಡೆಯುತ್ತಿದೆ’ ಎಂದು ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, “ಸಮೀಕ್ಷೆಯಿಂದ ಸರ್ಕಾರ ಏನು ಸಾಧಿಸುತ್ತದೆ? ಜನರು ಅದಕ್ಕೆ ಎಷ್ಟರ ಮಟ್ಟಿಗೆ ಪ್ರತಿಕ್ರಿಯಿಸಿದ್ದಾರೆ? ಎಲ್ಲ ಜಾತಿಗಳಲ್ಲಿ ಬಡವರು ಮತ್ತು ಅನಕ್ಷರಸ್ಥರು ಇದ್ದಾರೆ. ಸರ್ಕಾರ ಮೊದಲು ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಬೇಕು. ರಾಜ್ಯದಲ್ಲಿ ಶಿಕ್ಷಕರು, ಶಾಲೆಗಳು ಮತ್ತು ವಿಶ್ವವಿದ್ಯಾಲಯಗಳ ದೊಡ್ಡ ಕೊರತೆಯಿದೆ” ಎಂದು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಜಾತಿ ಸಮೀಕ್ಷೆಗೆ ವಿರೋಧ: OBCಗಳನ್ನು ವಂಚಿಸುವ ತಂತ್ರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವಲ್ಲಿ ಸರ್ಕಾರ ವಿಫಲವಾಗಿದೆ. ಈ ಬಗ್ಗೆ ಪ್ರಶ್ನಿಸಿದರೆ, ಬೆಂಗಳೂರು ಅಭಿವೃದ್ಧಿ ಖಾತೆಯನ್ನು ನಿರ್ವಹಿಸುತ್ತಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಕೇಳುವಂತೆ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿಗಳೇ ಸಭೆ ನಡೆಸಿ ಗುಂಡಿಗಳನ್ನು ಮುಚ್ಚಲು ಗಡುವು ನಿಗದಿಪಡಿಸಿದ್ದರು. ಈಗ ಅವರು ಬೇಜವಾಬ್ದಾರಿಯ ಹೇಳಿಕೆ ನೀಡುತ್ತಿದ್ದಾರೆ” ಎಂದು ದೂರಿದ್ದಾರೆ.

ನವೆಂಬರ್ ಅಂತ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, “ಇದು ಕಾಂಗ್ರೆಸ್‌ನ ಆಂತರಿಕ ವಿಷಯ. ಅದರ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...