ಜಾತಿಗಳ ನಡುವೆ ಕಂದಕ ತರಲು ಜಾತಿ ಸಮೀಕ್ಷೆ: ಪ್ರತಿಪಕ್ಷ ನಾಯಕ ಆರ್ ಅಶೋಕ

Date:

ಸಿಎಂ ಸಿದ್ದರಾಮಯ್ಯ ಜಾತಿಗಳ ನಡುವೆ ಕಂದಕ ತರಲು ಗಣತಿ ಮಾಡಿಸಿದ್ದಾರೆ. ಈಗ ಹೊಸ ಗಣತಿ ಮಾಡಿಸುತ್ತಾರೆಂದರೆ ಈ ಹಿಂದಿನ ಗಣತಿ ಬೋಗಸ್ ಎಂದರ್ಥ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು.

ಸುದ್ದಿಗಾರರೊರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರ ಸರ್ಕಾರ ಕಾಟಾಚಾರಕ್ಕೆ ಜಾತಿ ಒಳಮೀಸಲು ಸಮೀಕ್ಷೆ ಮಾಡಿದೆ. ಈ ಹಿಂದಿನ ಜಾತಿ ಗಣತಿ ಬಿಡುಗಡೆಯಾಗಿ ಹತ್ತು ವರ್ಷವಾಗಿದೆ. ಆದರೆ ಈಗ ಮಾಡಿದ ಒಳಮೀಸಲು ಸಮೀಕ್ಷೆ ಕೇವಲ 15 ದಿನಗಳಲ್ಲಿ ಮುಗಿದಿದೆ. ಕೇಂದ್ರ ಸರ್ಕಾರ ನಡೆಸುವ ಸಮೀಕ್ಷೆಗೆ ಎಲ್ಲ ಕಡೆ ಮಾನ್ಯತೆ ಇದೆ. ಆದರೆ ರಾಜ್ಯ ಸರ್ಕಾರ ಮಾಡುವ ಸಮೀಕ್ಷೆಗೆ ಬೆಲೆ ಇಲ್ಲ. ಜಾತಿಗಳ ನಡುವೆ ಕಂದಕ ತಂದು ಬೇಳೆ ಬೇಯಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಈ ಹುನ್ನಾರ ಮಾಡಿದ್ದಾರೆ ಎಂದರು‌.

ಕಾಂಗ್ರೆಸ್ ಸರ್ಕಾರ ಮರಳಿ ಜಾತಿ ಗಣತಿ ಮಾಡಲಿದೆ ಎಂದರೆ ಈ ಹಿಂದಿನ ಗಣತಿ ಬೋಗಸ್ ಎಂದರ್ಥ. ಇದರಿಂದಾಗಿ ಸರ್ಕಾರಕ್ಕೆ ಮುಖಭಂಗವಾಗಿದೆ. ಕೇಂದ್ರ ಸರ್ಕಾರ ನಡೆಸುವ ಗಣತಿಗೆ ರಾಜ್ಯ ಸರ್ಕಾರ ಸಹಕಾರ ನೀಡಿದರೆ ಸಾಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹದಾಯಿ: ನಾಯಕರೇ ನಾಡದ್ರೋಹಿಗಳು

ರಾಜ್ಯ ಸರ್ಕಾರ ಎಲ್ಲರಿಗೂ ಮಾರ್ಗದರ್ಶನ ನೀಡಬೇಕು. ಆದರೆ ಇದೇ ಸರ್ಕಾರದ ಪಕ್ಷದ ನಾಯಕರು ಸಂಸತ್ತಿನಲ್ಲಿ ಎಲ್ಲದಕ್ಕೂ ಸಭಾತ್ಯಾಗ ಮಾಡುತ್ತಾರೆ‌. ಸಂಸತ್ತಿನಲ್ಲಿ ರಾಜ್ಯದ ವಿಷಯವನ್ನು ಚರ್ಚೆ ಮಾಡಬೇಕು. ನಮ್ಮ ಪಕ್ಷದ ಎಲ್ಲ ಸಂಸದರು ರಾಜ್ಯದ ನೆಲ, ಜಲ ವಿಚಾರವಾಗಿ ಮಾತಾಡುತ್ತಾರೆ ಎಂದರು.

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾಗಿರುವುದು ಸ್ವಾಗತಾರ್ಹ. ಶಾಸಕರ ಮನೆ ಸುಟ್ಟಿರುವ ಘಟನೆ ಇನ್ನೂ ಕಣ್ಣ ಮುಂದಿದೆ. ಪಿಎಫ್‌ಐ ಸೇರಿದಂತೆ ಪಾಕಿಸ್ತಾನದ ಪರವಾಗಿರುವವರು ಅನೇಕರು ಇದರಲ್ಲಿ ಭಾಗಿಯಾಗಿದ್ದರು. ಅವರೆಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

ನಾನು ಸಾರಿಗೆ ಸಚಿವನಾಗಿದ್ದಾಗ, ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಿದ್ದೆ. ಈಗ ಕೂಡ ಸರ್ಕಾರ ಅವರ ಅಹವಾಲು ಆಲಿಸಬೇಕು. ನಾನು ಕೂಡ ಅದಕ್ಕೆ ಸ್ಪಂದಿಸುತ್ತೇನೆ‌. ಆಂಧ್ರಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತರ ಕೊಲೆಯಾಗಿರುವುದು ಖಂಡನೀಯ. ಇಲ್ಲಿನ ಸರ್ಕಾರ ಬಿಜೆಪಿ ಕಾರ್ಯಕರ್ತರಿಗೆ ರಕ್ಷಣೆ‌ ನೀಡುವಂತೆ ಸಲಹೆ, ಸೂಚನೆ ಕೊಡಬೇಕು ಎಂದರು.

ಸ್ಮಾರ್ಟ್ ಮೀಟರ್ ಖರೀದಿಯಲ್ಲಿ ಕಾಂಗ್ರೆಸ್ ಲೂಟಿ ಮಾಡುತ್ತಿದೆ. ಇದರ ತನಿಖೆಯಾಗಿ ಸತ್ಯ ಹೊರಬರಲಿ. ಇದರಲ್ಲಿ ಜನರಿಗೆ ನ್ಯಾಯ ಸಿಗಲು ಹೋರಾಟ ಮಾಡುತ್ತೇವೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...