ಸುಪ್ರೀಂನಲ್ಲಿ ಕರ್ನಾಟಕಕ್ಕೆ ಹಿನ್ನಡೆ: 15 ದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಲು ನಿರ್ದೇಶನ

Date:

ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮಹತ್ವದ ನಿರ್ದೇಶನ ಹೊರಡಿಸಿದ್ದು, ತಮಿಳುನಾಡಿಗೆ ಮುಂದಿನ 15 ದಿನ ಪ್ರತಿದಿನವೂ ಐದು ಸಾವಿರ ಕ್ಯೂಸೆಕ್ ನೀರು ಹರಿಸಲು ಗುರುವಾರ ತಿಳಿಸಿದೆ.

ಆ ಮೂಲಕ ಕಾವೇರಿ ವಿವಾದಕ್ಕೆ ಸಂಬಂಧಿಸಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರಿದ್ದ ತ್ರಿಸದಸ್ಯ ಪೀಠವು ಸಿಎಡಬ್ಲ್ಯು ಎಂಎ ಆದೇಶದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂಕೋರ್ಟ್ ನಕಾರವಾಗಿ ಸ್ಪಂದಿಸಿದೆ.

ಆ ಮೂಲಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿಯಂತ್ರಣಾ ಸಮಿತಿ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕರ್ನಾಟಕವು ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಿದ ಮನವಿಯನ್ನು ತಿರಸ್ಕರಿಸಿರುವ ತ್ರಿಸದಸ್ಯ ಪೀಠವು ಮಾನ್ಯ ಮಾಡಲಿಲ್ಲ. ಜತೆಗೆ ಉಭಯ ರಾಜ್ಯಗಳ ರೈತರು ತಮ್ಮ ವಾದವನ್ನೂ ಆಲಿಸಲು ಕೋರಿದ್ದ ಅರ್ಜಿಯನ್ನು ಪುರಸ್ಕರಿಸಲೂ ಪೀಠ ನಿರಾಕರಿಸಿದೆ.

ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್​ ನೀರು ಬಿಡುವಂತೆ ಸೂಚನೆ ನೀಡಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿತ್ತು. ಈ ನಿರ್ಧಾರವನ್ನು ಎತ್ತಿ ಹಿಡಿದಿದ್ದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ತಮಿಳುನಾಡಿಗೆ ಸೆಪ್ಟೆಂಬರ್​ 13ರಿಂದ ಅನ್ವಯವಾಗುವಂತೆ 15 ದಿನಗಳ ಕಾಲ ಪ್ರತಿದಿನ ಐದು ಸಾವಿರ ಕ್ಯೂಸೆಕ್​ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಕರ್ನಾಟಕವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು.

ತಮಿಳುನಾಡು ಪರ ವಕೀಲರಾದ ಮುಕುಲ್​ ರೋಹಟಗಿ ಮತ್ತು ಕರ್ನಾಟಕದ ಪರ ವಕೀಲ ಶ್ಯಾಮ್​ ದಿವಾನ್​ ತಮ್ಮ ತಮ್ಮ ವಾದವನ್ನು ಮಂಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...