ಕಾವೇರಿ ವಿವಾದ | ಸಿಎಂ ಸಿದ್ದರಾಮಯ್ಯರನ್ನು ‘ಮದ್ರಾಸಿ’ ಎಂದ ಸೂಲಿಬೆಲೆ; ನೆಟ್ಟಿಗರ ತರಾಟೆ

Date:

ತಮಿಳುನಾಡಿಗೆ ನೀರು ಹರಿಸುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸಿ ಟ್ವೀಟ್ ಮಾಡಿದ್ದ ಹಿಂದುತ್ವ ಕೋಮುವಾದಿ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಅವರನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಜಗತ್ತಿನ ಎಲ್ಲ ಸಮಸ್ಯೆಗಳಿಗೂ ಪರಿಹಾರ ಹುಡುಕಿಕೊಡುವ ನಿಮ್ಮ ವಿಶ್ವಗುರು ಕಾವೇರಿ ವಿಚಾರದಲ್ಲಿ ಯಾಕೆ ಸುಮ್ಮನಿದ್ದಾರೆ ಎಂದು ಕಿಡಿಕಾರಿದ್ದಾರೆ.

ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳದಲ್ಲಿ ನೀರಿನ ಅಭಾವ ಸೃಷ್ಠಿಯಾಗಿದೆ. ಈ ನಡುವೆ , ತಮಿಳುನಾಡಿಗೆ ದಿನನಿತ್ಯ 5,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಸುಪ್ರೀಂ ಕೋರ್ಟ್‌ ಆದೇಶ ನೀಡಿವೆ. ನೀರು ಹರಿಸದಂತೆ ರಾಜ್ಯದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ವಿಚಾರಾಗಿ ಸಿದ್ದರಾಮಯ್ಯ ವಿರುದ್ಧ ಟ್ವೀಟ್ ಮಾಡಿರುವ ಸೂಲಿಬೆಲೆ, ಸಿದ್ದರಾಮಯ್ಯ ಅವರನ್ನು ಮದ್ರಾಸಿ ಎಂದು ನಿಂದಿಸಿದ್ದಾರೆ.

ಬರಹ ವಿರುದ್ಧ ಚಿತ್ರವೊಂದನ್ನು ಸೂಲಿಬೆಲೆ ಟ್ವೀಟ್ ಮಾಡಿದ್ದು, ಅದರಲ್ಲಿ, ತಮಿಳಿಯನ್ ಒಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮವರು. ಅದು ‘ಸಿದ್ರಾಮ’ ಹೆಸರನ್ನು ಹಿಂಬದಿಯಿಂದ ಓದಿದರೆ ಗೊತ್ತಾಗುತ್ತದೆ ಎಂದಿರುವಂತೆ ಬರೆಯಲಾಗಿದೆ. ಈ ಪೋಸ್ಟ್‌ ನೋಡಿದ ಕನ್ನಡಿಗರು ಮತ್ತು ರೈತರ ಪರ ಹೋರಾಟಗಾರರು ಸೂಲಿಬೆಲೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೂಲಿಬೆಲೆ ಅವರ ಹಿಂದಿನ ಹೇಳಿಕೆಗಳನ್ನು ಉಲ್ಲೇಖಿಸಿದರು ನೆಟ್ಟಿಗರು, “ನೀವಾದ್ರೂ ಲ್ಯಾಪ್ ಟಾಪ್ ಕನೆಕ್ಟ್ ಮಾಡಿ ಮೋದಿಗೆ ಹೇಳಿ ಕರ್ನಾಟಕ ನೀರನ್ನು ಉಳಿಸಿ ಎಂದು. ಈ ತರ ಚೀಪ್ ಪೋಸ್ಟ್ ಮಾಡಬೇಡಿ, ನಿಮ್ಮ ಘನತೆಯನ್ನು ಕಾಪಾಡಿಕೊಳ್ಳಿ ಎಂದು ನೆಟ್ಟಿಗರು ಸಲಹೆ ಕೊಟ್ಟಿದ್ದಾರೆ. ಹಾಗೂ ಕಾವೇರಿ ಹೋರಾಟಕ್ಕೆ ನಿನ್ನ ಬೆಂಬಲ ಎಂದು ಒಂದಾದರು ಪೋಸ್ಟ್ ಮಾಡಿಲ್ವಲ್ಲೋ ಮಾರಾಯ” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಸೂಲಿಬೆಲೆ ವಿರುದ್ಧ ಕಿಡಿಕಾರಿರುವ ಅರುಣ್ ಜಾವಗಲ್, “ಜಗತ್ತಿನ ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಶಕ್ತಿಯಿರುವ ವಿಶ್ವಗುರುವಿಗೆ ಕಾವೇರಿ ಸಮಸ್ಯೆಯೇಕೆ ಕಾಣುತ್ತಿಲ್ಲಾ? ನಿಮ್ಮ ಪಕ್ಷದ ತೇಜಸ್ವಿ ಸೂರ್ಯ, ಪ್ರತಾಪ್ ಸಿಂಹ, ಪ್ರಲ್ಹಾದ್ ಜೋಶಿ, BL ಸಂತೋಶ್ ರವರುಗಳು ಏಕೆ ಕಾವೇರಿ ವಿಚಾರವಾಗಿ ಮೌನ ತಾಳಿದ್ದಾರೆ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಯೂರ್ ವರ್ಮ ಹೆಸರಿನ ಮತ್ತೊಬ್ಬ ನೆಟ್ಟಿಗ, “ರೈತರ ಸಂಕಷ್ಟದ ಸಮಯದಲ್ಲಿ ಅವರಿಗೆ ದನಿ ಜೋಡಿಸುವುದನ್ನು ಬಿಟ್ಟು ಹೀಗೆ ವ್ಯಂಗ್ಯ ಮಾಡುತ್ತಿದ್ದೀಯಲ್ಲ, ನೀನು ಒಬ್ಬ ಮನುಷ್ಯನ” ಎಂದು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...