ಕಾವೇರಿ ವಿವಾದ | ನೀರಿಲ್ಲವೆಂದು ಸುಪ್ರೀಂ ಕೋರ್ಟಿಗೆ ನಾಳೆ ಅರ್ಜಿ: ಸಿಎಂ ಸಿದ್ದರಾಮಯ್ಯ

Date:

  • ಮಳೆ ಕೊರತೆಯಿಂದ ರಾಜ್ಯದ ಅಣೆಕಟ್ಟು​ಗಳಲ್ಲಿ ನೀರಿಲ್ಲ ಎಂದ ಮುಖ್ಯಮಂತ್ರಿ
  • ಕೇಂದ್ರ ಸಚಿವರು ರಾತ್ರಿ 1 ಗಂಟೆಗೆ ಕರೆದರೂ ನಾವು ಭೇಟಿಯಾಗಲು ಸಿದ್ಧ: ಡಿಕೆ

ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ‘ನದಿಯಲ್ಲಿ ನೀರು ಇಲ್ಲ’ ಎಂದು ಸೆ.21ರಂದು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ದೆಹಲಿಯಲ್ಲಿ ಇಂದು ಆಯೋಜಿಸಲಾಗಿದ್ದ ಸಭೆಯ ಬಳಿಕ ಮಾತನಾಡಿದ ಅವರು, “ಇಂದಿನ ಸಭೆಯಲ್ಲಿ ಎಲ್ಲ ಪಕ್ಷದ ಸಂಸದರು, ಕೇಂದ್ರ ಸಚಿವರು ಭಾಗಿಯಾಗಿದ್ದರು. ಬೇರೆ ಕೆಲಸವಿದ್ದ ಹಿನ್ನೆಲೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಸಭೆಗೆ ಬಂದಿರಲಿಲ್ಲ” ಎಂದು ತಿಳಿಸಿದರು.

“ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ಅಣೆಕಟ್ಟು​ಗಳಲ್ಲಿ ನೀರು ಇಲ್ಲ. 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದೇವೆ. 123 ವರ್ಷಗಳಲ್ಲಿ ಎಂದೂ ಇಷ್ಟು ಮಳೆ ಕೊರತೆ ಆಗಿರಲಿಲ್ಲ. ಕಾವೇರಿ ನೀರಿನ ಬಗ್ಗೆ ಹಿಂದೆ ಸುಪ್ರೀಂಕೋರ್ಟ್ ಆದೇಶ ಇದೆ. ರಾಜ್ಯದ ಕಾವೇರಿ ನದಿ ನೀರು ವಿಚಾರದಲ್ಲಿ ಸಂಕಷ್ಟ ಸೂತ್ರ ಅಗತ್ಯ. ಸಂಕಷ್ಟದ ಪರಿಸ್ಥಿತಿಯಲ್ಲಿ ಎಷ್ಟು ನೀರು ಬಿಡಬೇಕೆಂದು ತಿಳಿಸಿಲ್ಲ. ಸಂಕಷ್ಟದ ಸೂತ್ರ ಏನು ಅನ್ನುವುದು ತಯಾರಿಯಾಗಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಳೆ ಸಾಮಾನ್ಯವಾಗಿದ್ದರೆ 108 ಟಿಎಂಸಿ ನಾವು ಕೊಡಬೇಕಿತ್ತು. ಮುಂದೆ ಮಳೆ ಬರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಮಳೆ ಕೊರತೆಯಿಂದ ನಾವು ಕಷ್ಟದಲ್ಲಿ ಇದ್ದೇವೆ. ಎರಡೂ ರಾಜ್ಯಗಳ ನಾಯಕರನ್ನು ಪ್ರಧಾನಿ ಕರೆದು ಮಾತನಾಡಬೇಕು. ಕೇಂದ್ರ ಜಲಸಂಪನ್ಮೂಲ ಸಚಿವರ ಭೇಟಿಗೆ ಸಮಯ ಕೇಳಲಾಗಿದೆ. ನಾಳೆ ಸುಪ್ರೀಂಕೋರ್ಟ್​ಗೆ ನೀರು ಇಲ್ಲವೆಂದು ಅರ್ಜಿ ಹಾಕುತ್ತೇವೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇದೇ ವಿಚಾರವಾಗಿ ಮಾತನಾಡಿರುವ ದೆಹಲಿಯಲ್ಲಿ ಮಾತನಾಡಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸಭೆಯಲ್ಲಿ ಎಲ್ಲ ಪಕ್ಷದ ಸಂಸದರು, ಜನಪ್ರತಿನಿಧಿಗಳು ಭಾಗಿಯಾಗಿದ್ದರು. ಎಲ್ಲರೂ ಒಗ್ಗಟ್ಟು ಪ್ರದರ್ಶಿಸಲು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಚಿವ ಗಜೇಂದ್ರ ಸಿಂಗ್ ಭೇಟಿಗೆ ಸಮಯ ಕೇಳಿದ್ದೇವೆ. ರಾತ್ರಿ 1 ಗಂಟೆಗೆ ಸಮಯ ನೀಡಿದರೂ ನಾವು ಭೇಟಿಯಾಗಲು ಸಿದ್ಧ” ಎಂದು ಹೇಳಿದರು.

Irshad Venoor
Website |  + posts

ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಇರ್ಷಾದ್ ವೇಣೂರು
ಇರ್ಷಾದ್ ವೇಣೂರುhttps://eedina.com
ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...