ಕಾವೇರಿ ವಿವಾದ | ಬಿಜೆಪಿ, ಜೆಡಿಎಸ್‌ನಿಂದ ರಾಜಕೀಯ: ಸಿಎಂ ಸಿದ್ದರಾಮಯ್ಯ

Date:

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನವರು ರಾಜಕೀಯ ಮಾಡುತ್ತಿದ್ದಾರೆ. ತಮ್ಮ ರಾಜೀನಾಮೆ ಕೇಳುತ್ತಿರುವ ವಿರೋಧ ಪಕ್ಷಗಳು, ಸರ್ವ ಪಕ್ಷ ಸಭೆಯಲ್ಲಿ ಮೌನವಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಸೋಮವಾರ ಮಾತನಾಡಿದ ಅವರು, “ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಭಟನೆಗೆ ಅವಕಾಶವಿದೆ. ಅದನ್ನು ನಾವು ಹತ್ತಿಕ್ಕಲು ಹೋಗುವುದಿಲ್ಲ” ಎಂದರು.

ಬಲವಾಗಿ ವಾದ ಮಂಡನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾವೇರಿ ನೀರು ಹರಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ಆದೇಶ ಇದೆ. ನೀರು ಹರಿಸಲು ಸಾಧ್ಯವಿಲ್ಲ ಎಂದು ವಾದ ಮಂಡಿಸಲಾಗಿದೆ. ನಮ್ಮ ಅರ್ಜಿ ವಜಾ ಆಗಿದ್ದು, ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ನಿರ್ವಹಣಾ ಪ್ರಾಧಿಕಾರ ಎರಡರ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದೆವು. ಸುಪ್ರೀಂಕೋರ್ಟ್ ನಮ್ಮ ಹಾಗೂ ತಮಿಳುನಾಡಿನ ಅರ್ಜಿಯನ್ನು ತಿರಸ್ಕಾರ ಮಾಡಿದೆ” ಎಂದರು.

“ತಮಿಳುನಾಡು 24,000 ಕ್ಯೂಸೆಕ್ ನೀರು ಕೇಳಿದ್ದರು. ನಂತರ 7200 ಕ್ಯೂಸೆಕ್ ಕೇಳಿದರು. ನಾವು 5000 ಕ್ಯೂಸೆಕ್ ನೀರು ಕೂಡ ಕೊಡಲಾಗುವುದಿಲ್ಲ. ನಮ್ಮ ಬಳಿ ನೀರಿಲ್ಲ ಎಂದು ವಾದಿಸಿದ್ದು, ಅದನ್ನು ನ್ಯಾಯಾಲಯ ಒಪ್ಪಿಲ್ಲ. ಪುನಃ ಸೆಪ್ಟೆಂಬರ್ 26 ರಂದು ಸರ್ವೋಚ್ಚ ನ್ಯಾಯಾಲಯದ ಮುಂದೆ ವಿಚಾರಣೆಗೆ ಬರಲಿದ್ದು. ನಮ್ಮ ವಾದವನ್ನು ಇನ್ನಷ್ಟು ಬಲವಾಗಿ ಮಂಡಿಸಲಾಗುವುದು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...