ಕಾವೇರಿ ವಿವಾದ | ಮೇಕೆದಾಟುಗಾಗಿ ಪಾದಯಾತ್ರೆ ಮಾಡಿದವರೇ ರೈತರನ್ನು ಬಂಧಿಸಿದ್ದಾರೆ: ಎಚ್‌ಡಿಕೆ ಕಿಡಿ

Date:

ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಂಗಳೂರು ಬಂದ್‌ಗೆ ಕರೆಕೊಟ್ಟಿದ್ದು, ಬಂದ್‌ಗೆ ಭಾಗಶಃ ಬೆಂಬಲ ವ್ಯಕ್ತವಾಗಿದೆ. ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರದ ನಡೆಯನ್ನು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ.

ಹೋರಾಟಗಾರರ ಬಂಧನದ ಬಗ್ಗೆ ಟ್ವೀಟ್ ಮಾಡಿರುವ ಎಚ್.ಡಿ ಕುಮಾರಸ್ವಾಮಿ, “ಇದೆಂಥಾ ಚೋದ್ಯ? ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು ಕಾಂಗ್ರೆಸ್ ಸರ್ಕಾರದ ಕಿಡಿಗೇಡಿತನದ ಪರಮಾವಧಿ” ಎಂದಿದ್ದಾರೆ.

“ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ? ಕೋವಿಡ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಬಹುದಾದರೆ, ನಾಡಿನ ಜೀವನಾಡಿ ಕಾವೇರಿಗಾಗಿ ಕನ್ನಡಿಗರು ಪ್ರತಿಭಟನೆ ನಡೆಸಬಾರದೇ? ಶಾಂತವಾಗಿ ಹೋರಾಟ ನಡೆಸುತ್ತಿದ್ದ ರೈತರು, ಹೋರಾಟಗಾರರನ್ನು ಬಂಧಿಸಿರುವುದು ಖಂಡನೀಯ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿರುವುದು ಕನ್ನಡಿಗರ ಸರ್ಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರ್ಕಾರವೋ? ಇಷ್ಟಕ್ಕೂ ಕನ್ನಡಿಗರು ಮತ ಹಾಕಿದ್ದು ಯಾರಿಗೆ? ಹೋರಾಟಗಾರರು, ರೈತರನ್ನು ಕೂಡಲೇ ಬಂಧಮುಕ್ತಗೊಳಿಸಬೇಕು. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಪಕ್ಷವು ಡಿಎಂಕೆ ಪಕ್ಷದ ಬಿ ಟೀಂ ಆಗಿ ಪರಿವರ್ತನೆ ಆದ ಪರಿಣಾಮವೇ ಈ ಕಾವೇರಿ ಬಿಕ್ಕಟ್ಟು ಎನ್ನುವುದು ಕನ್ನಡಿಗರಿಗೆ ಈಗ ಸ್ಪಷ್ಟವಾಗಿ ಅರ್ಥವಾಗಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...