ವಿಪಕ್ಷಗಳಿಂದ ನೀರಿನ ರಾಜಕಾರಣ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

Date:

ಕಾವೇರಿ ನೀರಿನ ವಿಚಾರದಲ್ಲಿ ವಿಪಕ್ಷಗಳ ಮುಖಂಡರಾದ ಬಿಎಸ್​ವೈ, ಬೊಮ್ಮಾಯಿ, ಹೆಚ್​ಡಿ ಕುಮಾರಸ್ವಾಮಿಯವರು ನೀರಿನ ರಾಜಕೀಯ ಮಾಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ಸಭೆಯ ಒಳಗಡೆ ರಾಜ್ಯದ ಹಿತದ ಬಗ್ಗೆ ಮಾತನಾಡುತ್ತಾರೆ. ಹೊರಗಡೆ ಬಂದಾಗ ರಾಜಕಾರಣ ಮಾಡುತ್ತಿದ್ದಾರೆ. ನಾವು ನಾಡಿನ ಜನತೆಯ ಹಿತವನ್ನು ಎಷ್ಟರಮಟ್ಟಿಗೆ ಕಾಪಾಡಬೇಕೋ ಅಷ್ಟು ಕಾಪಾಡಿದ್ದೇವೆ. ಈಗಲೂ ಕಾಪಾಡುತ್ತಿದ್ದೇವೆ. ಮುಂದೆಯೂ ಕಾಪಾಡುತ್ತೇವೆ ಎಂದು ಹೇಳಿದರು.

ನಾವು ವಿಪಕ್ಷಗಳ ಧೋರಣೆಯ ವಿರುದ್ಧ ನಡೆದುಕೊಂಡಿದ್ದಿದ್ದರೆ ಅಥವಾ ರಾಜ್ಯದ ಹಿತ ಕಾಪಾಡಲು ನಮ್ಮ ಕರ್ತವ್ಯ ನಿರ್ವಹಿಸದೇ ಇದ್ದಿದ್ದರೆ ವಿಪಕ್ಷಗಳು ಮಾತನಾಡಲಿ. ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿಯವರು ನೀರಿನ ರಾಜಕೀಯ ಮಾಡುತ್ತಿದ್ದಾರೆ. ಆದರೆ ನಾವು ರೈತರನ್ನು ಬದುಕಿಸಲು ಹೊರಟಿದ್ದೇವೆ. ನಾನು ಅಂಕಿ-ಅಂಶಗಳನ್ನು ಇಲ್ಲಿ ಬಹಿರಂಗವಾಗಿ ತಿಳಿಸಿದರೆ ರಾಜ್ಯದ ಹಿತಕ್ಕೆ ಧಕ್ಕೆಯಾಗುತ್ತದೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾಜಿ ಪ್ರಧಾನಿ ದೇವೇಗೌಡರು ‘ಎಕನಾಮಿಕ್ಸ್ ಟೈಮ್ಸ್‌’ ಪತ್ರಿಕೆಗೆ ಈ ಹಿಂದೆ ಸಂದರ್ಶನ ನೀಡಿದ್ದರು. ಆ ಸಂದರ್ಶನ ನೋಡಿದರೆ ಎಲ್ಲರಿಗೂ ಗೊತ್ತಾಗುತ್ತದೆ. ಯಾಕೆಂದರೆ ಅದರಲ್ಲಿ ಎಲ್ಲದಕ್ಕೂ ಉತ್ತರ ಸಿಗುತ್ತದೆ. ಈ ನಡುವೆ ಕಾವೇರಿಗೆ ಸಂಬಂಧಿಸಿ ಪ್ರಧಾನಿ ಮಧ್ಯ ಪ್ರವೇಶಿಸಬೇಕೆಂದು ದೇವೇಗೌಡರು ಹೇಳಿದ್ದಾರೆ. ನಾವು ರಾಜ್ಯದ ಜನರ ರಕ್ಷಣೆ ಮಾಡಲು ಹೊರಟಿದ್ದೇವೆ” ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

ಇದನ್ನು ಓದಿದ್ದೀರಾ? ಕಾವೇರಿ ವಿವಾದ | ಸೆ.26ರಂದು ‘ಬೆಂಗಳೂರು ಬಂದ್‌’

ಇದೇ ವೇಳೆ ಸೆ.26ರಂದು ‘ಬೆಂಗಳೂರು ಬಂದ್‌’ ಸುದ್ದಿಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, “ಬೆಂಗಳೂರನ್ನು ಬಂದ್ ಮಾಡುವುದೆಂದರೆ ನಮ್ಮ ಹೃದಯವನ್ನು ನಾವೇ ಚುಚ್ಚಿಕೊಂಡಂತೆ. ನಾವು ಎಲ್ಲ ರೀತಿಯ ಸಹಕಾರವನ್ನು ರೈತರಿಗೆ ಕೊಟ್ಟಿದ್ದೇವೆ. ಬಂದ್ ಮಾಡುವುದರಿಂದ ಯಾವುದೇ ಉಪಯೋಗವಿಲ್ಲ. ರಾಜ್ಯದ ಪರವಾಗಿಯೇ ನಾವು ಇದ್ದೇವೆ. ದಯವಿಟ್ಟು ಅಂತಹ ತಪ್ಪುಗಳನ್ನು ಮಾಡುವುದಕ್ಕೆ ಹೋಗಬೇಡಿ. ಕರ್ನಾಟಕ ಸರ್ಕಾರವೇ ರಾಜ್ಯದ ಹಿತ ಕಾಪಾಡುತ್ತದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...