ಮೇಕೆದಾಟು ಯೋಜನೆಗೆ ಕರ್ನಾಟಕಕ್ಕೆ ಅವಕಾಶ ನೀಡುವುದಿಲ್ಲ: ತಮಿಳುನಾಡು ಸಚಿವ

Date:

ಕಾವೇರಿ ನಮ್ಮ ಜೀವನದ ಪ್ರಶ್ನೆ ಆದಕಾರಣ ಮೇಕೆದಾಟು ಬಳಿ ಜಲಾಶಯ ನಿರ್ಮಾಣಕ್ಕೆ ಕರ್ನಾಟಕಕ್ಕೆ ಅವಕಾಶ ನೀಡುವುದಿಲ್ಲ. ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈ ಮುರುಗನ್ ತಿಳಿಸಿದ್ದಾರೆ.  

ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಶೇಖಾವತ್ ಅವರನ್ನು ಭೇಟಿ ಮಾಡಿದ ನಂತರ ಚೆನ್ನೈನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ರಾಜ್ಯದ ಕಾವೇರಿ ನದಿ ಮುಖಜ ಭೂಮಿಯ ಜಿಲ್ಲೆಗಳಲ್ಲಿನ ಬೆಳೆಗಳನ್ನು ರಕ್ಷಿಸಲು ಕರ್ನಾಟಕವು ತಕ್ಷಣ ನದಿಯಿಂದ ನೀರು ಬಿಡಬೇಕು. ಈ ಸಂಬಂಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಕರ್ನಾಟಕದೊಂದಿಗೆ ಮಾತುಕತೆ ನಡೆಸಬೇಕು ಅಥವಾ ನೀರು ಬಿಡುಗಡೆ ಮಾಡಲು ಆದೇಶಿಸಬೇಕು ಎಂಬುದಾಗಿ ಶೇಖಾವತ್ ಅವರಿಗೆ ಮನವಿ ಸಲ್ಲಿಸಲಾಯಿತು ಎಂದು ದುರೈ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಥ್ರೆಡ್ಸ್: ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಕೋಟಿ ಮಂದಿ ಇನ್‌ಸ್ಟಾಲ್‌; ಆ್ಯಪ್‌ನಲ್ಲಿರುವ ವಿಶೇಷತೆಗಳೇನು?

ಜುಲೈ 3ರವರೆಗೆ ನಮ್ಮ ರಾಜ್ಯವು ಕಾವೇರಿ ನದಿಯಿಂದ ಕಡಿಮೆ ಪ್ರಮಾಣದ ನೀರನ್ನು ಪಡೆಯುತ್ತಿರುವುದರ ಬಗ್ಗೆ ಕೇಂದ್ರದ ಗಮನ ಸೆಳೆಯಲಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ನದಿ ನೀರನ್ನೇ ನಂಬಿಕೊಂಡಿರುವ ಜಿಲ್ಲೆಗಳಲ್ಲಿ ಅಲ್ಪಾವಧಿ ಬೆಳೆಗಳ ಮೇಲೆ ಪರಿಣಾಮ ಬೀರಲಿದೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ಪ್ರಾಧಿಕಾರದ ಸಭೆ ಕರೆಯಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ದುರೈ ಹೇಳಿದ್ದಾರೆ.

ನೀರಿನ ಹಂಚಿಕೆ ಕುರಿತಂತೆ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಪಾಲಿಸಬೇಕಾದ ಹೊಣೆ ಕರ್ನಾಟಕ ಸರ್ಕಾರದ ಮೇಲಿದೆ. ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಜಲಾಶಯ ಯೋಜನೆ ಬಗ್ಗೆ ಪ್ರತಿಕ್ರಿಸಿಯಿಸಿರುವ ಅವರು, ಕರ್ನಾಟಕ ನಮ್ಮ ಜೊತೆ ಸಭೆ ನಡೆಸಿದರೂ, ಪತ್ರ ಬರೆದರೂ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...