ನೀರು ಹರಿಸುವುದು ನಿಲ್ಲಿಸದಿದ್ದರೆ, ಸೆ.12ರ ನಂತರ ಕಾವೇರಿ ರಕ್ಷಣಾ ಯಾತ್ರೆ: ಬಸವರಾಜ ಬೊಮ್ಮಾಯಿ

Date:

  • ನ್ಯಾಯಾಲಯದಲ್ಲಿ ವಿಚಾರಣೆ ಮುಗಿಯೋವರೆಗೂ ನೀರು ನಿಲ್ಲಿಸಿ: ಮಾಜಿ ಸಿಎಂ ಆಗ್ರಹ
  • ರೈತ ಸಂಘದವರಿಂದ ಕಾವೇರಿ ರಕ್ಷಣೆಗೆ ಪ್ರಾಮಾಣಿಕ ಹೋರಾಟ

ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸದಿದ್ದರೇ ಸೆ.12ರ ನಂತರ ಕಾವೇರಿ ಕೊಳ್ಳದ ಜಿಲ್ಲೆಗಳ ಜನರೊಂದಿಗೆ ಸೇರಿ ‘ಕಾವೇರಿ ರಕ್ಷಣಾ ಯಾತ್ರೆ’ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಂಡ್ಯದ ಕೆಆರ್‌ಎಸ್‌ಗೆ ಭೇಟಿ ನೀಡಿ ನೀರಿನ ವಸ್ತುಸ್ಥಿತಿ ಪರಿಶೀಲನೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ವರ್ಷ ಮಳೆ ಕೊರತೆಯಾಗಿರುವುದು ಮೇ, ಜೂನ್ ತಿಂಗಳ ಪ್ರಾರಂಭದಲ್ಲಿಯೇ ಗೊತ್ತಾಗಿದೆ. ಆದರೂ ಸರ್ಕಾರ ಸಂಪೂರ್ಣವಾಗಿ ಕಾವೇರಿ ವ್ಯಾಪ್ತಿಯ ನಾಲ್ಕು ಅಣೆಕಟ್ಟುಗಳ ನಿರ್ವಹಣೆಯಲ್ಲಿ ವಿಫಲವಾಗಿದೆ‌. ಕುಡಿಯುವ ನೀರಿಗೆ ಅನುಕೂಲವಾಗಲು ಕೆರೆಗಳಿಗೆ, ರೈತರ ಹೊಲಗಳಿಗೆ ಜೂನ್ ತಿಂಗಳಲ್ಲಿ ನೀರು ಬಿಡಬೇಕಿತ್ತು. ಜೂನ್‌ನಲ್ಲಿ ಕರೆಯುವ ಸಭೆಯನ್ನು ಆಗಸ್ಟ್‌ನಲ್ಲಿ ಕರೆದಿದ್ದಾರೆ. ತಮಿಳುನಾಡಿನವರು 15000 ಕ್ಯೂಸೆಕ್ಸ್ ನೀರು ಕೇಳಿದ ಮೇಲೆ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳದೇ ಕಾಲಹರಣ ಮಾಡಿದೆ” ಎಂದು ಆರೋಪಿಸಿದರು.

ತಮಿಳುನಾಡಿನವರು ಕುರುವೈ ಬೆಳೆಗೆ ಈಗಾಗಲೇ 32 ಟಿಎಂಸಿ ಬದಲು 60 ಟಿಎಂಸಿ ನೀರು ಬಳಕೆ ಮಾಡಿಕೊಂಡಿದ್ದಾರೆ. ಆದರೂ ಅವರ ಬೇಡಿಕೆಯಂತೆ ಪ್ರತಿದಿನ ನೀರು ಹರಿಸುತ್ತಿದ್ದಾರೆ. ಈ ಬಗ್ಗೆ ಸರ್ವ ಪಕ್ಷ ಸಭೆಯಲ್ಲೇ ಕೇಳಿದಾಗ ಇನ್ನು ಮುಂದೆ ನೀರು ಬಿಡುವುದಿಲ್ಲ ಅಂತ ಹೇಳಿ, ನಿರಂತರ ನೀರು ಹರಿಸುತ್ತಿದ್ದಾರೆ. ಸಿಡಬ್ಲುಎಂಎ ಎದುರು ಸರಿಯಾಗಿ ವಾದ ಮಾಡಿದ್ದರೆ ಸುಮಾರು 15 ಟಿಎಂಸಿ ನೀರು ಉಳಿಯುತ್ತಿತ್ತು ಎಂದು ಬೊಮ್ಮಾಯಿ ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೀರು ಹರಿಸುವುದನ್ನು ನಿಲ್ಲಿಸಬೇಕು
ರಾಜ್ಯ ಸರ್ಕಾರ ಸೆ. 12ನೇ ತಾರೀಖಿನ ನಂತರವೂ ನೀರು ಬಿಡುವ ಸಾಧ್ಯತೆ ಇದೆ. ಸುಪ್ರೀಂಕೋರ್ಟ್ ವಿಚಾರಣೆ ನಡೆಯುವವರೆಗೂ ನೀರು ಹರಿಯುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಕಾವೇರಿ ಮಕ್ಕಳಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಮಾಜಿ ಸಿಎಂ ತಿಳಿಸಿದರು.

ಮಂಡ್ಯ ಜಿಲ್ಲೆಯೊಂದರಲ್ಲೆ ಸುಮಾರು 4 ಲಕ್ಷ ಎಕರೆ ಬೆಳೆ ಒಣಗುತ್ತಿದೆ. ಕೃಷಿ ಅಧಿಕಾರಿಗಳು ಒಣ ಬೇಸಾಯದ ಬೆಳೆ ಬೆಳೆಯುವಂತೆ ಸೂಚನೆ ನೀಡುತ್ತಿದ್ದಾರೆ. ಕೆಆರ್ ಎಸ್ ಡ್ಯಾಮ್ ನಲ್ಲಿ ಕೇವಲ 13 ಟಿಎಂಸಿ ನೀರು ಮಾತ್ರ ಬಳಕೆಗೆ ಇದೆ. ಮುಂದಿನ ಮೇ ವರೆಗೂ ಇನ್ನೂ ಎರಡು ಟಿಎಂಸಿ ನೀರು ಆವಿಯಾಗಿ ಹೋಗುತ್ತದೆ. ಇದರಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ರಾಜ್ಯದ ಜನರು ಇದನ್ನು ಕ್ಷಮಿಸುವುದಿಲ್ಲ ಎಂದು ಬೊಮ್ಮಾಯಿ ತಿಳಿಸಿದರು.

ಡಿಸಿಎಂ ಡಿಕೆ ಶಿವಕುಮಾರ್ ಅವರು ಮೇಕೆದಾಟು ಬಗ್ಗೆ ಹೇಳಿದ್ದಾರೆ. ನ್ಯಾಷನಲ್ ಹೈಡ್ರೊ ಎಲೆಕ್ಟ್ರಿಕ್ ಕಾರ್ಪೊರೇಶನ್ ನವರು ವಿದ್ಯುತ್ ಉತ್ಪಾದನೆಗೆ ನಾಲ್ಕು ಡ್ಯಾಮ್ ಗಳಿಗೆ ಅನುಮತಿ ನೀಡಿದ್ದರು. ಆದರೆ, ತಮಿಳುನಾಡು ವಿರೋಧ ಮಾಡಿತು. ನಾನು 2012 ರಲ್ಲಿ ನೀರಾವರಿ ಸಚಿವನಾಗಿದ್ದಾಗ ಮೇಕೆದಾಟು ಯೋಜನೆ ಮಾಡಲು ತೀರ್ಮಾನಿಸಿ, ಫಿಜಿಬಿಲಿಟಿ ವರದಿ ಸಿದ್ದಪಡಿಸಿದ್ದೇವು. ಡಿಪಿಆರ್ ಸಿದ್ದಪಡಿಸುವ ಸಂದರ್ಭದಲ್ಲಿ ಕಾಂಗ್ರೆಸ್ ನವರು ಮೇಕೆದಾಟು ಪಾದಯಾತ್ರೆ ಮಾಡಿದರು. ಪ್ರಕರಣ ನ್ಯಾಯಾಲಯದಲ್ಲಿದೆ ಎಂದಾಗ ಒಪ್ಪಲಿಲ್ಲ. ಈಗ ಅವರೇ ಸತ್ಯ ಒಪ್ಪಿಕೊಂಡಿದ್ದಾರೆ ಎಂದರು.
ರೈತ ಸಂಘದವರು ಕಾವೇರಿ ರಕ್ಷಣೆಗೆ ಪ್ರಾಮಾಣಿಕವಾಗಿ ಹೋರಾಟ ಮಾಡುತ್ತಿದ್ದಾರೆ. ನಾವು ರಾಜಕಾರಣ ಮಾಡಬಾರದು ಅಂತ ಕಾದು ನೋಡಿದೆವು. ಸಿಡಬ್ಲುಸಿ ಸಭೆ ಕರೆಯುವ ಮೊದಲು ನಾನು ಸಿಎಂಗೆ ಪತ್ರ ಬರೆದಿದ್ದೆ, ಸರ್ವಪಕ್ಷ ಸಭೆ ಕರೆಯುವಂತೆ ಒತ್ತಡ ಹೇರಿದ್ದೇವೆ. ಸರ್ಕಾರ ಈಗಲೂ ನೀರು ಹರಿಸುವುದನ್ನು ತಡೆಯುವಂತೆ ಒತ್ತಡ ಹೇರಲು ವಸ್ತುಸ್ಥಿತಿ ಅರಿಯಲು ಬಂದಿದ್ದೇವೆ ಎಂದರು.

ಕಾಂಗ್ರೆಸ್ ‌ನಾಯಕರ ಹೇಳಿಕೆಗಳನ್ನು ನೋಡಿದರೆ, ತಮಿಳುನಾಡಿನ ಓಲೈಕೆಗೆ ರಾಜಕಾರಣ ಮಾಡುತ್ತಿದ್ದಾರೆ.
ಕಾವೇರಿ ಹಿನ್ನೀರು ಸಂಪೂರ್ಣ ಖಾಲಿಯಾಗಿದೆ. ಸರ್ಕಾರ ಇನ್ನೂ ನೀರು ಹರಿಸಿದರೆ ಈ ಪರಿಸ್ಥಿತಿಯಲ್ಲಿ ನಾವು ಕಾವೇರಿ ಮಕ್ಕಳಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಗೋವಿಂದ ಕಾರಜೋಳ, ಆರ್. ಅಶೋಕ್, ಡಾ. ಅಶ್ವಥ್ ನಾರಾಯಣ, ಕೆ.ಗೋಪಾಲಯ್ಯ, ಸಂಸದರಾದ ಸುಮಲತಾ ಅಂಬರೀಶ್, ಪ್ರತಾಪ್ ಸಿಂಹ ಜೊತೆಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...