ಕಾವೇರಿ ನೀರು | ಸಿಡಬ್ಲ್ಯೂಎಂಎಗೆ ಮೇಲ್ಮನವಿ, ಜು.14ಕ್ಕೆ ಸರ್ವಪಕ್ಷ ಸಭೆ: ಸಿದ್ದರಾಮಯ್ಯ

Date:

ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಶುಕ್ರವಾರ (ಜು.12) ಗೃಹ ಕಚೇರಿ ಕೃಷ್ಣಾದಲ್ಲಿ ಈ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿ,”ರಾಜ್ಯದ ಮುಂದಿನ ನಡೆ ಏನು ಎಂಬ ಕುರಿತು ಜುಲೈ 14 ರಂದು ಸರ್ವಪಕ್ಷ ಸಭೆ ನಡೆಸಿ ತೀರ್ಮಾನಿಸಲಾಗುವುದು” ಎಂದರು.

“ಈ ಬಾರಿ ವಾಡಿಕೆ ಮಳೆ ಆಗುವುದೆಂಬ ಹವಾಮಾನ ಮುನ್ಸೂಚನೆ ಇದ್ದರೂ ಈ ವರೆಗೆ ಶೇ. 28 ರಷ್ಟು ಒಳಹರಿವಿನ ಕೊರತೆ ಇದೆ. ಇದನ್ನು CWRC ಸ್ಪಷ್ಟವಾಗಿ ನಮ್ಮ ನಿಲುವನ್ನು ಹೇಳಿದ್ದೆವು. ಜೊತೆಗೆ ಜುಲೈ ಅಂತ್ಯದ ವರೆಗೆ ಯಾವುದೇ ತೀರ್ಮಾನ ಮಾಡದಂತೆ ಮನವಿ ಮಾಡಿದ್ದೆವು. ಆದರೂ CWRC ಅವರು ಜುಲೈ 12 ರಿಂದ ಪ್ರತಿ ದಿನ ಒಂದು ಟಿಎಂಸಿ ನೀರು ಬಿಡುಗಡೆ ಮಾಡುವಂತೆ ತಿಳಿಸಿದ್ದಾರೆ.
ಸರ್ಕಾರ ಈ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕೆಂಬ ಅಭಿಪ್ರಾಯ ಇಂದಿನ ಸಭೆಯಲ್ಲಿ ವ್ಯಕ್ತವಾಯಿತು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜುಲೈ 14 ರಂದು ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ನಡೆಸಲು ತೀರ್ಮಾನಿಸಲಾಯಿತು. ಕರ್ನಾಟಕದ ನೀರಿನ ವಿಚಾರದಲ್ಲಿ ಎಲ್ಲ ಪಕ್ಷದವರೂ ಒಟ್ಟಾಗಿದ್ದೇವೆ. ಆದ್ದರಿಂದ ಸರ್ವಪಕ್ಷ ಸಭೆ ನಡೆಸಲಾಗುವುದು” ಎಂದರು.

“ಕೇಂದ್ರ ಮಂತ್ರಿಗಳು, ಕಾವೇರಿ ಭಾಗದ ಲೋಕಸಭೆ, ರಾಜ್ಯಸಭೆ ಸದಸ್ಯರು ಮತ್ತು ಶಾಸಕರನ್ನು ಸಹ ಸಭೆಗೆ ಆಹ್ವಾನಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಮುಂದಿನ ಹೆಜ್ಜೆಯನ್ನು ತೀರ್ಮಾನಿಸಲಾಗುವುದು” ಎಂದು ಹೇಳಿದರು.

“ಬಿಳಿಗುಂಡ್ಲುವಿನಲ್ಲಿ ಅಳತೆ ಮಾಡುವಾಗ, ಕಬಿನಿ ಅಣೆಕಟ್ಟಿನ ಒಳಹರಿವಿನಷ್ಟು ಕ್ಯೂಸೆಕ್ಸ್‌ನಷ್ಟು ನೀರನ್ನು ತಮಿಳು ನಾಡಿಗೆ ಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶದ ಎಲ್ಲಾ 4 ಜಲಾಶಯಗಳಲ್ಲಿ ಒಟ್ಟು ಕೇವಲ 60 ಟಿಎoಸಿ ನೀರು ಲಭ್ಯವಿದೆ. ಕೃಷಿ ಚಟುವಟಿಕೆಗಳಿಗೂ ನಾವು ನೀರು ಒದಗಿಸಬೇಕಾಗಿದೆ. ಮಳೆ ಕೊರತೆಯನ್ನು ಗಮನದಲ್ಲಿರಿಸಿ ಜುಲೈ ಅಂತ್ಯದವರೆಗೆ ಕಾಯಲು ಮನವಿ ಮಾಡಿದ್ದೇವೆ” ಎಂದು ಮುಖ್ಯಮಂತ್ರಿಗಳು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...