ಎರಡು ವರ್ಷದಿಂದ ಬಂಧಿಸದ ಸಿಬಿಐ, ಇಡಿ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಬಂಧಿಸಿದೆ; ಸುಪ್ರೀಂಗೆ ಕೇಜ್ರಿವಾಲ್

Date:

ಆಪಾದಿತ ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮನ್ನು ಸಿಬಿಐ ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಅವರ ಅರ್ಜಿಯನ್ನು ಗುರುವಾರ ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಿದೆ. “ಕಳೆದ ಎರಡು ವರ್ಷಗಳಲ್ಲಿ ಸಿಬಿಐ ನನ್ನನ್ನು ಬಂಧಿಸಲಿಲ್ಲ. ಆದರೆ, ಇಡಿ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕವೇ ನನ್ನನ್ನು ಬಂಧಿಸಿದೆ ಎಂದು ಕೇಜ್ರಿವಾಲ್ ವಾದಿಸಿದ್ದಾರೆ.

ಆಪಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿತ್ತು. ಚುನಾವಣೆಯ ಸಮಯದಲ್ಲಿ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಲಾಗಿತ್ತು. ಬಳಿಕ, ಮತ್ತೆ ಜೂನ್ 2ರಂದು ಕೇಜ್ರಿವಾಲ್ ಅವರನ್ನು ಬಂಧಿಸಲಾಗಿತ್ತು. ನಂತರ, ಅವರು ಮತ್ತೊಮ್ಮೆ ಜಾಮೀನು ಪಡೆದುಕೊಂಡಿದ್ದರು. ಅವರಿಗೆ ಇಡಿ ದಾಖಲಿಸಿದ ಪ್ರಕರಣದಲ್ಲಿ ಜಾಮೀನು ದೊರೆತ ಬಳಿಕ, ಜೂನ್ 26ರಂದು ಸಿಬಿಐ ಆಪಾದಿತ ಅಬಕಾರಿ ನೀತಿ ಹಗರಣದ ಸಂಬಂಧ ಬಂಧಿಸಿದೆ. ಹೀಗಾಗಿ, ಕೇಜ್ರಿವಾಲ್ ಜೈಲಿನಲ್ಲಿಯೇ ಇದ್ದಾರೆ.

ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು ಕೋರಿ ಕೇಜ್ರಿವಾಲ್ಸುಪ್ರೀಂ ಮೆಟ್ಟಿಲೇರಿದ್ದಾರೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರು ಅರ್ಜಿ ವಿಚಾರಣೆ ನಡೆಸಿದ್ದು, ವೇಳೆ, ಇಡಿ ದಾಖಲಿಸಿದ್ದ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ, ಸಿಬಿಐ ತಮ್ಮನ್ನು ಬಂಧಿಸಿದೆ ಎಂದು ಕೇಜ್ರಿವಾಲ್ ಗಮನ ಸೆಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಜ್ರಿವಾಲ್ ಪರವಾಗಿ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದ್ದು, “ಸಿಬಿಐ ಎಫ್‌ಐಆರ್‌ನಲ್ಲಿ ಕೇಜ್ರಿವಾಲ್ ಹೆಸರಿಲ್ಲ” ಎಂದು ಹೇಳಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಈ ಹಿಂದೆ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು. ಅಲ್ಲದೆ, ಕೇಜ್ರಿವಾಲ್ ಸಮಾಜಕ್ಕೆ ಬೆದರಿಕೆಯಾಗಿಲ್ಲವೆಂದು ಸುಪ್ರೀಂ ತಮ್ಮ ಆದೇಶದಲ್ಲಿ ಹೇಳಿತ್ತು ಎಂಬುದನ್ನು ಸಂಘ್ವಿ ಎತ್ತಿ ತೋರಿಸಿದ್ದಾರೆ.

ಈ ವರದಿ ಓದಿದ್ದೀರಾ?: ಕೋವಿಡ್ ಹಗರಣ | 2,200 ಕೋಟಿ ಭ್ರಷ್ಟಾಚಾರ ತನಿಖಾ ಆಯೋಗದ ವರದಿಯಲ್ಲಿ ಸಾಬೀತಾಗುವುದೇ?

ಈ ಹಿಂದೆ, ಸಿಬಿಐ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಕೇಜ್ರಿವಾಲ್ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅವರ ಬಂಧನವನ್ನು ಅಗಸ್ಟ್‌ 5ರಂದು ಹೈಕೋರ್ಟ್‌ ಎತ್ತಿಹಿಡಿದಿತ್ತು. ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯದ ಮೊರೆ ಹೋಗುವಂತೆ ಸೂಚಿಸಿತ್ತು.

ಬಳಿಕ, ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಆಗಸ್ಟ್ 14 ರಂದು ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ನಿರಾಕರಿಸಿತ್ತು. ಸಿಬಿಐನಿಂದ ಪ್ರತಿಕ್ರಿಯೆ ಕೇಳಿತ್ತು. ಗುರುವಾರ, ಕೇಜ್ರಿವಾಲ್ ಅವರ ಅರ್ಜಿಯನ್ನು ಮತ್ತೆ ವಿಚಾರಣೆಗೆ ಸುಪ್ರೀಂ ಕೋರ್ಟ್‌ ತೆಗೆದುಕೊಂಡಿದೆ. ಜಾಮೀನು ಮಂಜೂರಾಗುವುದೇ ಇಲ್ಲವೇ ಎಂಬುದು ಶೀಘ್ರದಲ್ಲೇ ತಿಳಿಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...