ಸಿಬಿಐ ತನಿಖೆ | ಸಂಪುಟ ನಿರ್ಧಾರಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಸಚಿವ ಕೃಷ್ಣ ಬೈರೇಗೌಡ

Date:

ಕೇಂದ್ರ ಸರ್ಕಾರ ಸ್ವಾಮ್ಯದ ಸಂಸ್ಥೆಗಳ ಸಿಬ್ಬಂದಿಗಳ ಮೇಲಿನ ಪ್ರಕರಣಗಳನ್ನು ಸಿಬಿಐ ತನಿಖೆಗೆ ತೆಗೆದುಕೊಳ್ಳುವ ಬಗ್ಗೆ ಗುರುವಾರದ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದಕ್ಕೆ ಬೇರೆ ಅರ್ಥ ನೀಡುವ ಅಗತ್ಯ ಇಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅಭಿಪ್ರಾಯಪಟ್ಟರು.

ವಿಕಾಸಸೌಧದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಯಾವುದೇ ಪ್ರಕರಣಗಳನ್ನು ಸಿಬಿಐ ತನಿಖೆಗೆ ನೀಡುವ ಬಗ್ಗೆ ತಪ್ಪು ಗ್ರಹಿಕೆ ಆಗಿದೆ. ಅಸಲಿಗೆ ಯಾರೇ ಶಾಸಕ ಸಚಿವ ಅಥವಾ ಖಾಸಗಿ ವ್ಯಕ್ತಿಗಳ ವಿರುದ್ಧ ಸಿಬಿಐ ವಿಚಾರಣೆ ಕೈಗೆತ್ತಿಕೊಳ್ಳಬೇಕು ಎಂದರೆ ಸರ್ಕಾರದ ಅನುಮತಿ ಕಡ್ಡಾಯ ಎಂಬ ನಿಯಮ ಈಗಾಗಲೇ ಇದೆ” ಎಂದರು.

“ರಾಜ್ಯ ಸರ್ಕಾರದ ಅನುಮತಿ ತೆಗೆದುಕೊಂಡೇ ಸಿಬಿಐ ಅಧಿಕಾರಿಗಳು ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳಬೇಕು. ಈ ಸಂಬಂಧ ಸರ್ಕಾರ ಯಾವ ಬದಲಾವಣೆಯನ್ನೂ ಮಾಡಿಲ್ಲ. ಇದೇ ಕಾರಣಕ್ಕೆ ಇಂದು ಸಿಬಿಐ ಯಾವುದೇ ಪ್ರಕರಣ ತನಿಖೆಗೆ ತೆಗೆದುಕೊಳ್ಳಬೇಕು ಎಂದರೆ ಒಂದೋ ರಾಜ್ಯ ಸರ್ಕಾರ ಅನುಮತಿ ನೀಡಬೇಕು. ಇಲ್ಲವೇ ನ್ಯಾಯಾಲಯ ನಿರ್ದೇಶಿಸಬೇಕು ಎಂಬುದು ನಿಯಮ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆದರೆ, 2005 ರಲ್ಲಿ ನಾವು ಒಂದು ವಿನಾಯಿತಿ ನೀಡಿದ್ದೆವು. ಕೆಲವು ಕೇಂದ್ರ ಸರ್ಕಾರ ಸ್ವಾಮ್ಯದ ಸಂಸ್ಥೆಗಳ ಸಿಬ್ಬಂದಿಗಳ ಮೇಲೆ ಕೇಸ್ ತಗೆದುಕೊಳ್ಳಲು ರಾಜ್ಯ ಸರ್ಕಾರ ಸಿಬಿಐ ಗೆ ವಿನಾಯಿತಿ ನೀಡಿತ್ತು. ಈಗ ಆ ವಿನಾಯಿತಿಯನ್ನು ನಮ್ಮ ಸರ್ಕಾರ ಹಿಂಪಡೆದಿದೆ ಅಷ್ಟೆ. ಏಕೆಂದರೆ ಕಾನೂನು ಪ್ರಕಾರ ಆ ಹಕ್ಕು ಇರುವುದು ರಾಜ್ಯ ಪೊಲೀಸರಿಗೆ ಮಾತ್ರ. ಹೀಗಾಗಿ ಈ ನಿರ್ಧಾರ ಯಾವುದೇ ಮಂತ್ರಿ ಅಥವಾ ಮುಖ್ಯಮಂತ್ರಿಗಳಿಗೆ ಸಂಬಂಧಪಟ್ಟ ವಿಚಾರ ಅಲ್ಲ” ಎಂದು ಅವರು ಸ್ಪಷ್ಟಪಡಿಸಿದರು.

ಮುನಿರತ್ನ ಅಪರಾಧದಲ್ಲಿ ಬಿಜೆಪಿಗರೂ ಭಾಗಿ

“ಶಾಸಕ ಮುನಿರತ್ನ ಅವರ ಎಲ್ಲ ಅಪರಾಧ ಪ್ರಕರಣಗಳನ್ನೂ ಬಿಜೆಪಿಯ ಇತರೆ ನಾಯಕರೂ ಭಾಗಿಯಾಗಿದ್ದಾರಾ? ಇದೇ ಕಾರಣಕ್ಕೆ ಎಲ್ಲರೂ ಒಟ್ಟಾಗಿ ಮುನಿರತ್ನನನ್ನು ಉಳಿಸುವ ಕೆಲಸಕ್ಕೆ ಮುಂದಾಗಿದ್ದಾರಾ? ಎಂದು ಸಚಿವ ಕೃಷ್ಣ ಬೈರೇಗೌಡ ಅನುಮಾನ ವ್ಯಕ್ತಪಡಿಸಿದರು.

“ಮುನಿರತ್ನ ತನ್ನನ್ನು ವಿಕಾಸಸೌಧ ಕಚೇರಿಯಲ್ಲೇ ಅತ್ಯಾಚಾರ ಮಾಡಿದ್ದಾರೆ. ಕೆಲವು ಅತ್ಯಾಚಾರ ಪ್ರಕರಣಗಳಿಗೆ ಪೊಲೀಸ್ ಅಧಿಕಾರಿಗಳನ್ನು ಬಳಸಿಕೊಂಡಿದ್ದಾರೆ ಎಂದು ಮಹಿಳೆಯೊಬ್ಬರು ನ್ಯಾಯಾಧೀಶರ ಎದುರು ಸೆಕ್ಷನ್ 164 ಅಡಿಯಲ್ಲಿ ಹೇಳಿಕೆ ದಾಖಲಿಸಿದ್ದಾರೆ. ಇದಲ್ಲದೆ, ರಾಜಕೀಯ ಹೊಂದಾಣಿಕೆ ಇಲ್ಲದ ಕಾರಣ ಅವರದ್ದೇ ಪಕ್ಷದಲ್ಲಿರುವ ಎದುರಾಳಿ ಕಾರ್ಪೊರೇಟರ್ ಪತಿಗೆ ಏಡ್ಸ್ ಸೋಂಕಿತ ಮಹಿಳೆಯ ಮೂಲಕ ಹನಿಟ್ರ್ಯಾಪ್ ಮಾಡಿಸಿ ಆತನಿಗೂ ಮಾರಕ ರೋಗ ಹರಡಿಸುವ ಯೋಜನೆ ರೂಪಿಸಿದ್ದಾರೆ. ಓರ್ವ ಐಎಎಸ್ ಅಧಿಕಾರಿ ಕೂಡ ಇವರ ಸಹಾಯ ತಗೊಂಡು ಮತ್ತೊಬ್ಬರನ್ನು ಹನಿಟ್ರ್ಯಾಪ್ ಮಾಡಲು ಮುಂದಾಗಿರುವ ಬಗ್ಗೆ ತನಿಖೆಯಿಂದ ಮಾಹಿತಿ ಹೊರಬಿದ್ದಿದೆ” ಎಂದರು.

“ಈತ ಎಷ್ಟು ಜನಕ್ಕೆ ಏಡ್ಸ್ ಹಬ್ಬಿಸಿದ್ದಾರೆ. ಎಷ್ಟು ಜನರನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಬೀಳಿಸಿದ್ದಾರೆ ಗೊತ್ತಿಲ್ಲ. ವಿಕಾಸಸೌಧದಲ್ಲೂ ಅತ್ಯಾಚಾರದಂತಹ ಗಂಭೀರ ಅಪರಾಧ ಎಸಗಿದ್ದಾರೆ. ಈ ಬಗ್ಗೆ ಸ್ವತಃ ಸಂತ್ರಸ್ಥೆ ನ್ಯಾಯಾಲಯದ ಎದುರು ಹೇಳಿಕೆ ದಾಖಲಿಸಿದ್ದಾರೆ. ಇವೆಲ್ಲಾ ಗಾಳಿಯಲ್ಲಿ ಗುಂಡು ಹಾರಿಸುವ ಹಿಟ್ ಅಂಡ್ ರನ್ ಹೇಳಿಕೆಗಳಲ್ಲ. ಇವೆಲ್ಲವೂ ಸಂತ್ರಸ್ತೆ ನ್ಯಾಯಾಲಯದ ಎದುರು ನೀಡಿರುವ ಹೇಳಿಕೆ. ಆದರೆ, ಇಷ್ಟೆಲ್ಲಾ ಆಗಿದ್ರೂ ಮುನಿರತ್ನ ಅವರನ್ನು ಬಿಜೆಪಿ ಅಮಾನತು ಮಾಡಿದೆಯಾ? ಇದು ಅವರಿಗೆ ರಕ್ಷಣೆ ಹೌದ ಅಲ್ವ? ಸಂತ್ರಸ್ತೆ ನ್ಯಾಯಾಧೀಶರ ಎದುರು ನೀಡಿದ ಹೇಳಿಕೆಯೂ ಲೆಕ್ಕಕ್ಕೆ ಇಲ್ವ. ಮುನಿರತ್ನ ಅವರ ಎಲ್ಲಾ ಅಪರಾಧ ಕೆಲಸದಲ್ಲೂ ಬಿಜೆಪಿಯೂ ಭಾಗವಾಗಿರುವುದರಿಂದ ಬಿಜೆಪಿ ನಾಯಕರು ಅವರ ರಕ್ಷಣೆಗೆ ನಿಂತಿದ್ದಾರಾ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...