ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಮನೆ ಮೇಲೆ ಸಿಬಿಐ ದಾಳಿ

Date:

ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಸ್ವೀಕರಿಸಿದ ಆರೋಪ ಎದುರಿಸುತ್ತಿರುವ ಸಂಸತ್‌ನಿಂದ ಉಚ್ಚಾಟಿತ ಸಂಸದೆ ಮಹುವಾ ಮೋಯಿತ್ರಾ ಅವರ ಕೋಲ್ಕತ್ತಾ ಮತ್ತು ಇತರ ನಗರಗಳಲ್ಲಿನ ಮನೆಗಳ ಮೇಲೆ ಸಿಬಿಐ ದಾಳಿ ನಡೆಸಿದೆ.

ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಸ್ವೀಕರಿಸಿದ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಲೋಕಪಾಲ್, ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಸೂಚಿಸಿದೆ. ಸದ್ಯ ಸಿಬಿಐ ಅಧಿಕಾರಿಗಳು ಶನಿವಾರ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

ಲೋಕಪಾಲ್ ನಿರ್ದೇಶನದ ಮೇರೆಗೆ ಮೊಯಿತ್ರಾ ವಿರುದ್ಧ ಸಿಬಿಐ ಗುರುವಾರ ಎಫ್‌ಐಆರ್ ದಾಖಲಿಸಿದೆ. ಆರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸಿಬಿಐಗೆ ಲೋಕಪಾಲ್‌ ಸೂಚಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಬಿಐ ತಂಡಗಳು ಶನಿವಾರ ಮುಂಜಾನೆ ಕೋಲ್ಕತ್ತಾ ಮತ್ತು ಇತರ ನಗರಗಳಲ್ಲಿನ ಮೊಯಿತ್ರಾ ಅವರ ನಿವಾಸಗಳಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು, “ಈ ಹಿಂದೆ ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅದಾನಿ ಗ್ರೂಪ್ ವಿರುದ್ಧ ಪ್ರಶ್ನೆ ಕೇಳಲು ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ ಅವರು ಉದ್ಯಮಿಯೊಬ್ಬರಿಂದ ಲಂಚ ಸ್ವೀಕರಿಸಿದ್ದಾರೆ” ಎಂದು ಆರೋಪಿಸಿದ್ದರು.

ನಿಶಿಕಾಂತ್ ದುಬೆ ನೀಡಿದ ದೂರಿನ ಆಧಾರದ ಪ್ರಕರಣ ದಾಖಲಾಗಿದೆ. ಮೊಯಿತ್ರಾ ವಿರುದ್ಧದದ ಆರೋಪಗಳ ಪ್ರಾಥಮಿಕ ತನಿಖೆ ವರದಿಗಳನ್ನು ಪಡೆದಿರುವ ಲೋಕಪಾಲ್, ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ಅನುಮತಿ ನೀಡಿದೆ. ಈ ಪ್ರಕರಣದಲ್ಲಿ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಹೊರಹಾಕಲಾಗಿದೆ. ಟಿಎಂಸಿ ನಾಯಕಿ ತನ್ನ ಉಚ್ಚಾಟನೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದತ್ತು ಮಗು ಪ್ರಕರಣ | ಸೋನು ಶ್ರೀನಿವಾಸ್ ಗೌಡ 4 ದಿನ ಪೊಲೀಸ್​ ಕಸ್ಟಡಿಗೆ ಒಪ್ಪಿಸಿ ಸಿಜೆಎಂ ಕೋರ್ಟ್ ಆದೇಶ

ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಕೃಷ್ಣಾನಗರ ಕ್ಷೇತ್ರದಿಂದ ಟಿಎಂಸಿ ಅಭ್ಯರ್ಥಿಯಾಗಿ ಮೊಹಿತ್ರಾ ಮತ್ತೆ ಕಣಕ್ಕಿಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...