ಅತೀ ಶೀಘ್ರದಲ್ಲಿ ಜನಗಣತಿ: ಅಮಿತ್ ಶಾ

Date:

ದೇಶದಲ್ಲಿ ಜನಗಣತಿ ನಡೆಸುವ ಕುರಿತು ಸರ್ಕಾರವು ‘ಅತೀ ಶೀಘ್ರ’ದಲ್ಲಿ ಘೋಷಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದ ಮೂರನೇ ಅವಧಿಯ ಎನ್‌ಡಿಎ ಸರ್ಕಾರ 100 ದಿನಗಳನ್ನು ಪೂರೈಸಿದ್ದು, ಅದನ್ನು ಗುರುತಿಸಲು ಅಮಿತ್ ಶಾ ಅವರನ್ನು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. “ಜನಗಣತಿಯನ್ನು ಘೋಷಿಸಿದಾಗ ನಾವು ಎಲ್ಲ ವಿವರಗಳನ್ನು ಸಾರ್ವಜನಿಕಗೊಳಿಸುತ್ತೇವೆ” ಎಂದು ಹೇಳಿದರು.

ಭಾರತವು 1881ರಿಂದ ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿಯನ್ನು ನಡೆಸುತ್ತಿದೆ. ಅದರಂತೆ 2020ರಲ್ಲಿ ಜನಗಣತಿ ನಡೆದು, 2021ರಲ್ಲಿ ವರದಿ ಬಿಡುಗಡೆಯಾಗಬೇಕಿತ್ತು. ಆದರೆ, ಕೊರೋನ ಸೋಂಕಿನ ಆಕ್ರಮಣದಿಂದಾಗಿ ಜನಗಣತಿ ವಿಳಂಬವಾಗಿದೆ. 2020-21ರಲ್ಲಿ ಜನಗಣತಿ ನಡೆಯದೇ ಇರುವುದರಿಂದ ಸರ್ಕಾರಿ ಸಂಸ್ಥೆಗಳು 2011ರಲ್ಲಿ ನಡೆದಿದ್ದ ಜನಗಣತಿಯ ಮಾಹಿತಿಯನ್ನೇ ಆಧರಿಸಿ ನೀತಿಗಳನ್ನು ರೂಪಿಸುತ್ತಿವೆ. ಇದರಿಂದ, ನೀತಿಗಳು ಎಲ್ಲ ಜನರನ್ನು ತಲುಪಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪಗಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಕೀಯ ಪಕ್ಷಗಳು ಜನಗಣತಿಗೆ ಒತ್ತಾಯಿಸುತ್ತಿವೆ. ಇದೆಲ್ಲದರ ನಡುವೆ, ಇದೀಗ ಜನಗಣತಿಯನ್ನು ಶೀಘ್ರವೇ ನಡೆಸಲಾಗುವುದು ಎಂದು ಅಮಿತ್ ಶಾ ಹೇಳಿದ್ದಾರೆ.

ಸಂಪೂರ್ಣ ಜನಗಣತಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ನಡೆಸಲು ಸರ್ಕಾರಕ್ಕೆ 12,000 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚವಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜನಗಣತಿ ಸಮೀಕ್ಷೆಯ ವೇಳೆ ಕುಟುಂಬದ ದೂರವಾಣಿ ಸಂಖ್ಯೆ, ಇಂಟರ್ನೆಟ್ ಸಂಪರ್ಕ, ಮೊಬೈಲ್ ಅಥವಾ ಸ್ಮಾರ್ಟ್‌ಫೋನ್, ಬೈಸಿಕಲ್, ಸ್ಕೂಟರ್ ಅಥವಾ ಮೋಟಾರ್‌ಸೈಕಲ್ಅನ್ನು ಹೊಂದಿದೆಯೇ? ಕುಟುಂಬವು ಕಾರು, ಜೀಪ್ ಅಥವಾ ವ್ಯಾನ್ ಹೊಂದಿದೆಯೇ ಎಂಬ ಅಂಶಗಳೂ ಇರುತ್ತವೆ.

ಅಲ್ಲದೆ, ಜನರು ತಮ್ಮ ಮನೆಯಲ್ಲಿ ಸೇವಿಸುವ ಸಿರಿಧಾನ್ಯ ಯಾವುದು, ಕುಡಿಯುವ ನೀರಿನ ಮುಖ್ಯ ಮೂಲ ಯಾವುದು, ಮುಖ್ಯ ಬೆಳಕಿನ ಮೂಲ, ಶೌಚಾಲಯ ಇದೆಯೇ, ಅಡುಗೆಮನೆ ಮತ್ತು ಎಲ್‌ಪಿಜಿ ಲಭ್ಯತೆ, ಅಡುಗೆಗೆ ಬಳಸುವ ಮುಖ್ಯ ಇಂಧನ, ರೇಡಿಯೋ, ಟ್ರಾನ್ಸಿಸ್ಟರ್, ದೂರದರ್ಶನಗಳನ್ನು ಹೊಂದಿದ್ದಾರೆಯೇ ಎಂಬ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ವರದಿಯಾಗಿದೆ.

ಮನೆಯ ಮಹಡಿ, ಗೋಡೆ ಮತ್ತು ಮೇಲ್ಛಾವಣಿಯ ಪ್ರಧಾನ ವಸ್ತು ಯಾವುದು, ಮನೆಯ ಸ್ಥಿತಿ ಹೇಗಿದೆ, ಕುಟುಂಬದಲ್ಲಿ ಸಾಮಾನ್ಯವಾಗಿ ವಾಸಿಸುವ ಒಟ್ಟು ವ್ಯಕ್ತಿಗಳ ಸಂಖ್ಯೆ ಎಷ್ಟು, ಕುಟುಂಬದ ಮುಖ್ಯಸ್ಥರು ಮಹಿಳೆಯೇ ಅಥವಾ ಪುರುಷರೇ ಎಂಬ ಬಗ್ಗೆಯೇ ಪ್ರಶ್ನಿಸಲಾಗುತ್ತದೆ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...