ಇಂಡಿಯಾ ಒಕ್ಕೂಟಕ್ಕೆ ಹೆದರಿ ಅರವಿಂದ್ ಕೇಜ್ರಿವಾಲ್‌ ಬಂಧಿಸಲು ಕೇಂದ್ರದಿಂದ ಸಂಚು: ಮೋಹನ್ ದಾಸರಿ

Date:

“ಇಂಡಿಯಾ ಒಕ್ಕೂಟದಲ್ಲಿ ಎಎಪಿ-ಕಾಂಗ್ರೆಸ್ ನಡುವೆ ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ ಯಶಸ್ವಿಯಾದ ಬೆನ್ನಲ್ಲೇ, ಕೇಂದ್ರ ಸರ್ಕಾರ ಸಿಬಿಐ ಮೂಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲು ಸಂಚು ರೂಪಿಸಿದೆ” ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಚಾಲಕ ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಸುಮಾರು ಎರಡು ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲು ಸಂಚು ರೂಪಿಸುತ್ತಲೇ ಇದೆ. ಆಮ್ ಆದ್ಮಿ ಪಾರ್ಟಿ ಮುಖಂಡರ ಮನೆಗಳ ಮೇಲೆ ನೂರಾರು ಬಾರಿ ಸಿಬಿಐ ಮತ್ತು ಇಡಿ ದಾಳಿ ಮಾಡಿಸಲಾಗಿದೆ. ಆದರೆ, ಒಂದು ರೂಪಾಯಿ ಕೂಡ ಅಕ್ರಮ ಹಣ ಸಿಕ್ಕಿಲ್ಲ” ಎಂದರು.

“ಸಿಬಿಐ ಕರೆದಾಗಲೆಲ್ಲಾ ಅರವಿಂದ್ ಕೇಜ್ರಿವಾಲ್ ಉತ್ತರ ನೀಡಿದ್ದಾರೆ. ಜಾರಿ ನಿರ್ದೇಶನಾಲಯದಿಂದ ಎರಡು ತಿಂಗಳಲ್ಲಿ 7 ಸಮನ್ಸ್ ನೀಡಲಾಗಿದೆ. ಕೇಜ್ರಿವಾಲ್‌ ಎಲ್ಲ ಸಮನ್ಸ್‌ಗಳಿಗೂ ಉತ್ತರಿಸಿದ್ದಾರೆ. ಈ ಸಮನ್ಸ್‌ಗಳು ಬಿಜೆಪಿ ಕಚೇರಿಯಿಂದ ತಯಾರಾಗುತ್ತಿವೆ. ಇಡಿ ಕೋರ್ಟ್ ಮೆಟ್ಟಿಲೇರಿದ್ದು, ಮಾರ್ಚ್‌ 16ರಂದು ನಡೆಯುವ ವಿಚಾರಣೆವರೆಗೂ ಕೇಜ್ರಿವಾಲ್ ಬಂಧನ ಸಾಧ್ಯವಿಲ್ಲ. ಈ ವಿಚಾರ ತಿಳಿದ ನಂತರ, ಸಿಬಿಐ ಅನ್ನು ದಾಳವಾಗಿ ಬಳಸಿಕೊಂಡು ಬಂಧಿಸುವ ಷಡ್ಯಂತ್ರ ರೂಪಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಾರ್ಟಿ ಲೋಕಸಭಾ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸುವುದಿಲ್ಲ, ನಾವು ಸುಲಭವಾಗಿ 400 ಸೀಟು ಗೆಲ್ಲಬಹುದು ಎಂದು ಪ್ರಧಾನಿ ಮೋದಿ ಭ್ರಮೆಯಲ್ಲಿದ್ದರು. ಆದರೆ, ಇಂಡಿಯಾ ಒಕ್ಕೂಟದ ಸೀಟು ಹಂಚಿಕೆ ಮಾತುಕತೆ ಕೊನೆಯ ಹಂತ ತಲುಪಿದ್ದು, ದೇಶದ 6 ರಾಜ್ಯಗಳಲ್ಲಿ ಕಾಂಗ್ರೆಸ್-ಎಎಪಿ ಜೊತೆಯಾಗಿರುವುದು ಬಿಜೆಪಿ ನಿದ್ದೆಗೆಡಿಸಿದೆ. ಇಂಡಿಯಾ ಒಕ್ಕೂಟದಿಂದ ಹೊರಬಂದರೆ ಎಲ್ಲ ಕೇಸುಗಳನ್ನು ರದ್ದು ಮಾಡುವ ಜೊತೆ, ಬಂಧಿಸಿರುವ ಎಎಪಿ ನಾಯಕರನ್ನು ಬಿಡುಗಡೆ ಮಾಡುವುದಾಗಿ ಬಿಜೆಪಿ ಹೇಳುತ್ತಿದೆ” ಎಂದು ತಿಳಿಸಿದರು.

“ಪ್ರಜಾಪ್ರಭುತ್ವ, ಸಂವಿಧಾನವನ್ನು ಉಳಿಸಲು ಇಂಡಿಯಾ ಒಕ್ಕೂಟ ರಚನೆಯಾಗಿದ್ದು, ಬಿಜೆಪಿಯನ್ನು ಅಧಿಕಾರದಿಂದ ತೊಲಗಿಸುವುದು ಖಚಿತ. ಬಿಜೆಪಿ ಸಾಮ್ರಾಜ್ಯ ಪತನವಾಗುವ ಸಮಯ ಹತ್ತಿರ ಬಂದಿದೆ. ಇಂಡಿಯಾ ಒಕ್ಕೂಟದ ಗೆಲುವನ್ನು ಸಹಿಸದೆ ಬಿಜೆಪಿ ವಿಪಕ್ಷದ ನಾಯಕರನ್ನು ಹತ್ತಿಕ್ಕಲು ನೋಡುತ್ತಿದೆ. ಬಿಜೆಪಿ ಸರ್ವಾಧಿಕಾರಿ ಮಾದರಿ ಆಡಳಿತ ನಡೆಸುತ್ತಿದ್ದು, ಪ್ರಜಾಪ್ರಭುತ್ವ ಅಪಾಯದಲ್ಲಿದೆ” ಎಂದರು.

ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ

“ಬಿಜೆಪಿ ಪ್ರಜಾಪ್ರಭುತ್ವ ವಿರೋಧಿ ಎನ್ನುವುದು ಚಂಡೀಗಢ ಮೇಯರ್ ಚುನಾವಣೆಯಲ್ಲಿ ಸಾಬೀತಾಗಿದೆ. ಇದೇ ಮೊದಲ ಬಾರಿಗೆ ಸುಪ್ರೀಂಕೋರ್ಟ್ ಚುನಾವಣಾ ಫಲಿತಾಂಶ ಪ್ರಕಟಿಸಿದೆ. ಎಎಪಿಯ ಕುಲದೀಪ್ ಮೇಯರ್ ಆಗಿದ್ದಾರೆ. ಪ್ರಜಾಪ್ರಭುತ್ವವನ್ನು ಕೊಲೆ ಮಾಡಲು ಹೊರಟಿರುವ ಬಿಜೆಪಿ ವಿರುದ್ಧ ಫೆಬ್ರುವರಿ 24ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ” ಎಂದರು.

ಆಮ್ ಆದ್ಮಿ ಪಾರ್ಟಿಯ ರಾಜ್ಯ ಖಜಾಂಚಿ ಪ್ರಕಾಶ್ ಮಾತನಾಡಿ, “ಇಂಡಿಯಾ ಒಕ್ಕೂಟವನ್ನು ಮುಗಿಸಲು ಕೇಂದ್ರ ಸರ್ಕಾರ ಸಿಬಿಐ, ಇಡಿ ಸಂಸ್ಥೆಗಳನ್ನು ಬಳಸುತ್ತಿದೆ. ಬಿಜೆಪಿ ಬೆದರಿಕೆಗೆ ನಾವು ಇಂಡಿಯಾ ಒಕ್ಕೂಟ ತೊರೆಯುವುದಿಲ್ಲ. ಹಲವು ಎಕ್ಸ್‌ ಖಾತೆಗಳನ್ನು ಬ್ಲಾಕ್ ಮಾಡುತ್ತಿದ್ದು, ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ತೋರುತ್ತಿದೆ. ಇದನ್ನೆಲ್ಲಾ ವಿರೋಧಿಸಿ ಶನಿವಾರ ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ ಹಮ್ಮಿಕೊಂಡಿದೆ” ಎಂದರು.

ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಮಾತನಾಡಿ, “ಆಪರೇಷನ್ ಕಮಲ ಎನ್ನುವ ಅನೈತಿಕ ಮಾರ್ಗದಿಂದ ಬಿಜೆಪಿ ಅನೇಕ ರಾಜ್ಯಗಳಲ್ಲಿ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಿದೆ. ಇಡಿ, ಸಿಬಿಐ ಬಳಸಿ ಪ್ರಾದೇಶಿಕ ಪಕ್ಷಗಳನ್ನು ಮುಗಿಸಿದ್ದಾರೆ. ಅರವಿಂದ್ ಕೇಜ್ರಿವಾಲ್‌ರನ್ನು ಬಂಧಿಸಿದರೆ ಅದರ ಪರಿಣಾಮವನ್ನು ಬಿಜೆಪಿ ಸರ್ಕಾರ ಎದುರಿಸಬೇಕಾಗುತ್ತದೆ. ರೈತರನ್ನು ದೆಹಲಿಯೊಳಗೆ ಬಿಡದೆ ಅವಮಾನ ಮಾಡಿದ್ದೀರಾ, ಬಿಜೆಪಿಗೆ ಅಂತ್ಯಕಾಲ ಸಮೀಪವಾಗಿದ್ದು, ಜನರೇ ಬುದ್ದಿ ಕಲಿಸಲಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ನಟ ದರ್ಶನ್ ವಿರುದ್ಧ ಮತ್ತೆರಡು ದೂರು ದಾಖಲು; ಕ್ಷಮೆ ಕೇಳಿದ ಶಫಿ

ಮಾಧ್ಯಮಗೋಷ್ಠಿಯಲ್ಲಿ ಆಮ್ ಆದ್ಮಿ ಪಾರ್ಟಿ ರಾಜ್ಯ ಉಪಾಧ್ಯಕ್ಷ ಸುರೇಶ್ ರಾಥೋಡ್, ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ, ರಾಜ್ಯ ಉಪಾಧ್ಯಕ್ಷ ರುದ್ರಯ್ಯ ನವಲಿಮಠ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...