ಕೇಂದ್ರ, ರಾಜ್ಯ ಸರ್ಕಾರಗಳು ರೈತರ ಬದುಕಿನೊಂದಿಗೆ ಚೆಲ್ಲಾಟ ಆಡುತ್ತಿವೆ: ಕುರುಬೂರು ಶಾಂತಕುಮಾರ್

Date:

  • ‘ರೈತರು ಬರಗಾಲದ ಸಂಕಷ್ಟದಿಂದ ನರಳುತ್ತಿದ್ದಾರೆ’
  • ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಡಿ.23ಕ್ಕೆ ಧರಣಿ 

ರೈತರು ಬರಗಾಲದ ಸಂಕಷ್ಟದಿಂದ ನರಳುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಯಾವುದೇ ಪರಿಹಾರ ಕ್ರಮ ಕೈಗೊಳ್ಳದೇ ರಾಜಕೀಯವಾಗಿ ಚೆಲ್ಲಾಟ ಆಡುತ್ತಿವೆ ಎಂದು ರೈತ ಹೋರಾಟಗಾರ ಕುರುಬೂರು ಶಾಂತಕುಮಾರ್ ವಾಗ್ದಾಳಿ ನಡೆಸಿದರು.

ಕಲಬುರಗಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ರೈತರ ಸಾಲ ವಸೂಲಿಗೆ ಬ್ಯಾಂಕ್ ಗಳು ನೀಡುವ ಕಿರುಕುಳ ನಿಲ್ಲಬೇಕು. ಕೈಗಾರಿಕೆ, ಉದ್ಯಮಿಗಳಿಗೆ ಸಂಕಷ್ಟದ ನೆರವು ಸಾಲ ಮನ್ನಾ ಮಾಡಿರುವ ರೀತಿ, ರೈತರ ಎಲ್ಲ ಬ್ಯಾಂಕು ಹಾಗೂ ಸಹಕಾರ ಸಂಘಗಳ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಲೇಬೇಕು” ಎಂದು ಆಗ್ರಹಿಸಿದರು.

“ರಾಜ್ಯದ 220 ತಾಲೂಕುಗಳು ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿವೆ. ಕೃಷಿ ಸಾಲ ಪಡೆದ ರೈತರು ಬೆಳೆ ಬೆಳೆಯಲು ಹೂಡಿಕೆ ಮಾಡಿದ್ದಾರೆ. ಬೆಳೆ ನಾಶವಾಗಿದೆ ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಬ್ಬಿನ ಉತ್ಪಾದನಾ ವೆಚ್ಚ ಏರಿಕೆಯಾಗಿದೆ. ಪ್ರತಿ ಟನ್ ಕಬ್ಬಿನ ಉತ್ಪಾದನಾ ವೆಚ್ಚ 3,580 ಆಗುತ್ತದೆ. ಕೇಂದ್ರ ಸರ್ಕಾರ  3,150 ದರ ನಿಗದೆ ಮಾಡಿದೆ. ಇದನ್ನು ಕನಿಷ್ಠ ಟನ್‌ಗೆ 4,000 ರೂ. ನಿಗದಿ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರದ ಆರು ತಿಂಗಳ ‘ಅನನ್ಯ ಸಾಧನೆ’ ಮತ್ತು ವಿರೋಧ ಪಕ್ಷಗಳ ‘ಜವಾಬ್ದಾರಿ’

“ಕಳೆದ ವರ್ಷದ ಹೆಚ್ಚುವರಿ 150 ರೂ. ಕಬ್ಬಿನ ಬಾಕಿ ಹಣ ಕೊಡಿಸಬೇಕು. ಬರಗಾಲ ಪೀಡಿತ ಪ್ರದೇಶದ ರೈತರಿಗೆ ಕೂಡಲೇ ಬರ ಪರಿಹಾರ ನಷ್ಟ ಎಕರೆಗೆ 25,000 ರೂ. ನೀಡಬೇಕು. ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿ ಮಾಡಬೇಕು. ಸ್ವಾಮಿನಾಥನ್ ಆಯೋಗದಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು” ಎಂದರು.

“ಈ ಎಲ್ಲ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಡಿಸೆಂಬರ್ 23 ರಂದು ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ” ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ರಮೇಶ್ ಹೂಗಾರ್, ರಾಜ್ಯ ಉಪಾಧ್ಯಕ್ಷ ಬಸವರಾಜ್ ಪಾಟೀಲ್, ಸಂಘಟನಾ ಕಾರ್ಯದರ್ಶಿ ಹತ್ತಹಳ್ಳಿ ದೇವರಾಜ್, ಧರ್ಮರಾಜ್ ಸಾವು, ಶರಣು ಬಿಲ್ಲದ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...