‘ಕರ್ನಾಟಕಕ್ಕೆ ಕೇಂದ್ರದ ಮೋಸ’ ಮೋದಿಯ ಆಶೀರ್ವಾದವೇ, ಶಾಪವೇ: ಸಿದ್ದರಾಮಯ್ಯ

Date:

  • ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಜೆಪಿ ನಡ್ಡಾಗೆ ಪ್ರಶ್ನೆಗಳ ಸುರಿಮಳೆ
  • ‘40% ಕಮಿಷನ್ ಪಡೆಯುತ್ತಿರುವುದು ಮೋದಿ ಆಶೀರ್ವಾದವೇ ಶಾಪವೇ?’

‘ಕರ್ನಾಟಕದ ಜನ ನರೇಂದ್ರ ಮೋದಿಯವರ ಆಶೀರ್ವಾದದಿಂದ ವಂಚಿತರಾಗಬಾರದು, ಬಿಜೆಪಿಗೆ ಮತ ನೀಡಬೇಕು’ ಎಂಬ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿ, ಕೆಲವು ಪ್ರಶ್ನೆಗಳನ್ನು ನಡ್ಡಾರವರ ಮುಂದಿಟ್ಟಿದ್ದಾರೆ. “ಜೆಪಿ ನಡ್ಡಾ ಅವರೇ, ತೆರಿಗೆ ಹಂಚಿಕೆಯ ತಾರತಮ್ಯ ನೀತಿಯಲ್ಲಿ ಕರ್ನಾಟಕ ಅಂದಾಜು ಒಂದು ಲಕ್ಷ ಕೋಟಿ ರೂಪಾಯಿ ಕಳೆದುಕೊಂಡದ್ದು, ಕನ್ನಡಿಗರು ಕೇಂದ್ರಕ್ಕೆ ನೀಡುವ ಪ್ರತಿ ಒಂದು ರೂಪಾಯಿ ತೆರಿಗೆಯಲ್ಲಿ ಹದಿನೈದು ಪೈಸೆ ಮಾತ್ರ ವಾಪಸು ನೀಡುವುದು, ಮೋದಿಯವರ ಆಶೀರ್ವಾದವೇ ಶಾಪವೇ?” ಎಂದು ಪ್ರಶ್ನಿಸಿದ್ದಾರೆ.

“ಕೇಂದ್ರ ಸರ್ಕಾರದ ಅನುದಾನ ಕಡಿತದಿಂದಾಗಿ ರಾಜ್ಯ ಸರ್ಕಾರ ಮಾಡಿಕೊಂಡ ಸಾಲ ರೂ.2.40 ಲಕ್ಷ ಕೋಟಿಗಳಿಂದ ರೂ.5.60 ಲಕ್ಷ ಕೋಟಿಗೆ ಏರಿಕೆಯಾಗಿದ್ದು ಮತ್ತು ಪ್ರತಿಯೊಬ್ಬ ಕನ್ನಡಿಗನ ತಲೆಮೇಲೆ ರೂ.86,000 ಸಾಲದ ಹೊರೆ ಬಿದ್ದಿರುವುದು ಮೋದಿ ಆಶೀರ್ವಾದವೇ? ಶಾಪವೇ?” ಎಂದು ಕುಟುಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2019ರಲ್ಲಿ ನೆರೆ ಹಾವಳಿ ನಷ್ಟಕ್ಕೆ ರೂ.35,000 ಕೋಟಿ ಪರಿಹಾರ ಕೇಳಿದ್ದರೂ, ಕೇವಲ ರೂ.1,869 ಕೋಟಿ ಮಾತ್ರ ಕೇಂದ್ರ ಸರ್ಕಾರ ಕೊಟ್ಟಿದ್ದು, 2020 ಮತ್ತು 2021ರಲ್ಲಿಯೂ ಇದೇ ಅನ್ಯಾಯ ಮುಂದುವರಿಸಿದ್ದು ಮೋದಿ ಆಶೀರ್ವಾದವೇ? ಶಾಪವೇ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

“ಕನ್ನಡಿಗರು ಕಟ್ಟಿರುವ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಸಿಂಡಿಕೇಟ್ ಬ್ಯಾಂಕ್, ಕಾರ್ಪೋರೇಷನ್ ಬ್ಯಾಂಕ್ ಮತ್ತು ವಿಜಯ ಬ್ಯಾಂಕ್ ಗಳನ್ನು ನುಂಗಿ ಹಾಕಲಾಗಿದೆ. ಕನ್ನಡಿಗರ ಹೆಮ್ಮೆಯ ‘ನಂದಿನಿ’ಯನ್ನು ಗುಜರಾತ್ ಮೂಲದ ‘ಅಮುಲ್’ ಆಪೋಶನ ತೆಗೆದುಕೊಳ್ಳಲು ಹೊರಟಿರುವುದು ಏನು? ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಮೌಢ್ಯಕ್ಕೆ ಸೆಡ್ಡು; ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ

“ಐಬಿಪಿಎಸ್ ಮತ್ತು ಎಲ್ಐಸಿ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲಿಕ್ಕೆ ಅವಕಾಶ ನೀಡದೆ ಹಿಂದಿ ಮತ್ತು ಇಂಗ್ಲೀಷ್ ನಲ್ಲಿ ಬರೆಯುವುದನ್ನು ಕಡ್ಡಾಯಗೊಳಿಸಿ ಕನ್ನಡಿಗ ಯುವಜನರ ಹೊಟ್ಟೆಗೆ ಹೊಡೆದಿದೆ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

“ಕರ್ನಾಟಕ ಗಡಿಪ್ರದೇಶವನ್ನು ಆಕ್ರಮಿಸುವ ದುರುದ್ದೇಶದಿಂದ ಮಹಾರಾಷ್ಟ್ರದ ಬಿಜೆಪಿ ಬೆಂಬಲಿತ ಸರ್ಕಾರ ನಮ್ಮ ರಾಜ್ಯದ 865 ಹಳ್ಳಿಗಳಲ್ಲಿ ಆರೋಗ್ಯ ಯೋಜನೆಯನ್ನು ಜಾರಿಗೊಳಿಸಲು ಹೊರಟಿರುವುದು ಮೋದಿ ಆಶೀರ್ವಾದವೇ? ಶಾಪವೇ?” ಎಂದಿದ್ದಾರೆ.

“ಮಹದಾಹಿ ಯೋಜನೆಗೆ ತಾತ್ವಿಕ ಒಪ್ಪಿಗೆ ನೀಡಲು ವಿಳಂಬ ಮಾಡಿದ್ದು, ಮೇಕೆದಾಟು ಯೋಜನೆಗೆ ಅನುಮತಿ ನೀಡಲು ವಿಫಲವಾಗಿದ್ದು, ಕೇಂದ್ರ ಸರ್ಕಾರದ ನೆರವಿನ ಕೊರತೆಯಿಂದ ಎತ್ತಿನಹೊಳೆ ಯೋಜನೆ ಕುಂಟುತ್ತಾ ಸಾಗಿರುವುದು ಮೋದಿ ಆಶೀರ್ವಾದವೇ? ಶಾಪವೇ?” ಎಂದು ಕೇಳಿದ್ದಾರೆ.

“ರಾಜ್ಯ ಬಿಜೆಪಿ ನಾಯಕರು 40% ಕಮಿಷನ್ ಮೂಲಕ ಕಳೆದ ನಾಲ್ಕು ವರ್ಷಗಳಲ್ಲಿ ಅಂದಾಜು ಒಂದುವರೆ ಲಕ್ಷ ಕೋಟಿ ರೂಪಾಯಿಗಳನ್ನು ನುಂಗಿ ಹಾಕಿರುವುದು ಮೋದಿ ಆಶೀರ್ವಾದವೇ? ಶಾಪವೇ?” ಎಂದು ಸಿದ್ದರಾಮಯ್ಯ ಅವರು ಜೆಪಿ ನಡ್ಡಾ ಅವರು ಮುಂದೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...