ಲೋಕಸಭಾ ಚುನಾವಣೆ ಹತ್ತಿರವಾದಂತೆ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ದರ ರೂ. 200 ಇಳಿಸಿದ ಸರ್ಕಾರ

Date:

2024ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಕೇಂದ್ರ ಸರ್ಕಾರವು ಎಲ್ಲ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ₹200 ರೂಪಾಯಿ ಇಳಿಕೆ ಮಾಡಿರುವುದಾಗಿ ಘೋಷಿಸಿದೆ.

ಕೇಂದ್ರ ಸಚಿವ ಸಂಪುಟದ ತೀರ್ಮಾನವನ್ನು ದೆಹಲಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್, “ಓಣಂ ಮತ್ತು ರಕ್ಷಾಬಂಧನ್ ಹಬ್ಬದ ಸಂದರ್ಭದಲ್ಲಿ ಎಲ್ಲ ಗ್ರಾಹಕರಿಗೆ ಎಲ್‌ಪಿಜಿ ದರವನ್ನು 200 ರೂಪಾಯಿಗಳಷ್ಟು ಕಡಿಮೆ ಮಾಡಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ಮಹಿಳೆಯರಿಗೆ ಇದು ವಿಶೇಷ ಉಡುಗೊರೆ” ಎಂದು ಹೇಳಿದ್ದಾರೆ.

‘ಬಿಪಿಎಲ್ ಕಾರ್ಡ್​ದಾರರಿಗೆ ನೀಡಲಾಗುವ ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಎಲ್​ಪಿಜಿ ಸಿಲಿಂಡರ್​ಗಳ ಮೇಲೂ ಕೂಡ ಹೆಚ್ಚುವರಿ 200 ರೂ. ನಷ್ಟು ಸಬ್ಸಿಡಿ ಕೊಡಲು ನಿರ್ಧರಿಸಿದೆ. ಆ ಮೂಲಕ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಈ ಮೊದಲು ನೀಡುತ್ತಿದ್ದ 200 ರೂ. ಸೇರಿ ಒಟ್ಟು 400 ರೂ. ಸಬ್ಸಿಡಿ ದೊರೆಯಲಿದೆ. ಕೇಂದ್ರ ಸಂಪುಟ ಸಭೆಯಲ್ಲಿ ಈ ಕ್ರಮಕ್ಕೆ ಅನುಮೋದನೆ ಸಿಕ್ಕಿದೆ’ ಎಂದು ಅನುರಾಗ್ ಠಾಕೂರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ವೇಳೆ, “ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ 75 ಲಕ್ಷ ಹೊಸ ಗ್ಯಾಸ್ ಸಂಪರ್ಕಗಳನ್ನು ನೀಡಲಾಗುವುದು. ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಈ ಗ್ಯಾಸ್ ದರ ಇಳಿಕೆಯ ನಿರ್ಧಾರದಿಂದ ಎಲ್ಲ ಮಹಿಳೆಯರಿಗೂ ಲಾಭವಾಗಲಿದೆ” ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...