‘ನ್ಯಾಷನಲ್ ದಸ್ತಕ್‌’ ಚಾನೆಲ್ ನಿರ್ಬಂಧಕ್ಕೆ ಯೂಟ್ಯೂಬ್‌ಗೆ ಕೇಂದ್ರ ಸರ್ಕಾರ ಸೂಚನೆ

Date:

ಯೂಟ್ಯೂಬ್ ಡಿಜಿಟಲ್ ನ್ಯೂಸ್ ಪ್ಲಾಟ್‌ಫಾರ್ಮ್ ‘ನ್ಯಾಷನಲ್ ದಸ್ತಕ್‌’ಅನ್ನು ನಿರ್ಬಂಧಿಸಲು ಕೇಂದ್ರ ಸರ್ಕರವು ಯೂಟ್ಯೂಬ್‌ಗೆ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಚಾನೆಲ್‌ಗೆ ಯೂಟ್ಯೂಬ್‌ ನೋಟಿಸ್ ಕಳುಹಿಸಿದೆ. ಅಲ್ಲದೆ, ಮತ್ತೊಂದು ಚಾನೆಲ್ ‘ಆರ್ಟಿಕಲ್ 19 ಇಂಡಿಯಾ’ಗೂ ಕೂಡ ನೋಟಿಸ್‌ ನೀಡಿರುವುದಾಗಿ ವರದಿಯಾಗಿದೆ.

ಇತ್ತೀಚೆಗಷ್ಟೇ, ಸುಮಾರು 3 ಲಕ್ಷ ಚಂದಾದಾರರನ್ನು ಹೊಂದಿದ್ದ ‘ಬೋಲ್ಟಾ ಹಿಂದೂಸ್ತಾನ್’ ಸುದ್ದಿ ಚಾನೆಲ್‌ಅನ್ನು ಸರ್ಕಾರದ ನಿರ್ದೇಶನದಂತೆ ನಿರ್ಬಂಧಿಸಲಾಗಿತ್ತು. ಇದೀಗ, ಈ ಎರಡೂ ಹಿಂದಿ ಚಾನೆಲ್‌ಗಳನ್ನು ನಿರ್ಬಂಧಿಸಲು ಸೂಚನೆ ನೀಡಲಾಗಿದೆ. ಸದ್ಯ, ಇನ್ನೂ ಚಾನೆಲ್‌ಗಳನ್ನು ನಿರ್ಬಂಧಿಸಲಾಗಿಲ್ಲ.

‘ನ್ಯಾಷನಲ್‌ ದಸ್ತಕ್’ ಚಾನೆಲ್ 9.41 ಮಿಲಿಯನ್ ಚಂದಾದಾರರನ್ನು ಹೊಂದಿದ್ದು, ಸಂಪಾದಕ ಶಂಭು ಕುಮಾರ್ ಸಿಂಗ್ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿದೆ. 2015ರಿಂದ ಸಕ್ರಿಯವಾಗಿರುವ ಚಾನೆಲ್, “ದಲಿತ ಮತ್ತು ಬುಡಕಟ್ಟು, ಹಿಂದುಳಿದ ವರ್ಗಗಳು, ಮಹಿಳೆಯರು, ರೈತರು, ಅಲ್ಪಸಂಖ್ಯಾತರು ಹಾಗೂ ಶೋಷಿತರ ಬಲವಾದ ಧ್ವನಿಯಾಗಿದೆ” ಎಂದು ಹೇಳಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯೂಟ್ಯೂಬ್‌ ನೀಡಿರುವ ನೋಟಿಸ್‌ಅನ್ನು ಚಾನೆಲ್‌ ತನ್ನ ‘ಎಕ್ಸ್‌’ ಖಾತೆಯಲ್ಲಿ ಹಂಚಿಕೊಂಡಿದೆ. “ಸರ್ಕಾರವು ‘ನ್ಯಾಷನಲ್ ದಸ್ತಕ್’ ಅನ್ನು ಮುಚ್ಚಲು ಬಯಸಿದೆ. ಯೂಟ್ಯೂಬ್ ಏಪ್ರಿಲ್ 3ರಂದು ನೋಟಿಸ್ ಕಳುಹಿಸಿದೆ. ದೇಶದಲ್ಲಿ ಚುನಾವಣಾ ‘ಮಾದರಿ ನೀತಿ ಸಂಹಿತೆ’ ಜಾರಿಯಲ್ಲಿರುವಾಗ ಇಂತಹ ಕ್ರಮಗಳು ನಡೆಯುತ್ತಿವೆ” ಎಂದು ಹೇಳಿದೆ.

“ಲಕ್ಷಗಟ್ಟಲೆ ಪತ್ರಿಕೆಗಳು ಮತ್ತು ಟಿವಿ ಸುದ್ದಿ ವಾಹಿನಿಗಳು ಕಾರ್ಯನಿರ್ವಹಿಸುತ್ತಿವೆ. ಆದರೆ, ಬಹುಜನರ ನ್ಯಾಷನಲ್‌ ದಸ್ತಕ್ ಬಗ್ಗೆ ಸರ್ಕಾರಕ್ಕೆ ತುಂಬಾ ಭಯವಿದೆಯೇ?” ಎಂದು ಚಾಲನೆ ಹೇಳಿದೆ.

ಇನ್ನು, ಪತ್ರಕರ್ತ ನವೀನ್ ಕುಮಾರ್ ನಡೆಸುತ್ತಿರುವ ಡಿಜಿಟಲ್ ಸುದ್ದಿ ಮಾಧ್ಯಮ ‘ಆರ್ಟಿಕಲ್ 19 ಇಂಡಿಯಾ’ ಸಹ ಇದೇ ರೀತಿಯ ನೋಟಿಸ್‌ಅನ್ನು ಪಡೆದಿದೆ. ಈ ಚಾನಲ್ 28 ಲಕ್ಷ ಚಂದಾದಾರರನ್ನು ಹೊಂದಿದೆ.

ವಿವಾದಾತ್ಮಕ ‘ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿಸಂಹಿತೆ) ನಿಯಮಗಳು-2021’ಅನ್ನು ಉಲ್ಲೇಖಿಸಿರುವ ಯೂಟ್ಯೂಬ್, ನೋಟಿಸ್‌ ನೀಡಿದೆ. ಅಂದಹಾಗೆ, ಈ ನಿಯಮಗಳನ್ನು ಹಲವಾರು ಡಿಜಿಟಲ್ ಸುದ್ದಿ ಮಾಧ್ಯಮಗಳು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದವು. ಈ ನಿಯಮಗಳಿಗೆ 2021ರ ಆಗಸ್ಟ್‌ನಲ್ಲಿ ಬಾಂಬೆ ಹೈಕೋರ್ಟ್‌ನ ವಿಭಾಗೀಯ ಪೀಠವು ತಡೆಯಜ್ಞೆ ನೀಡಿದೆ.

ಯೂಟ್ಯೂಬ್ ನೋಟಿಸ್ ಹೀಗಿದೆ:

ಮಾಹಿತಿ ತಂತ್ರಜ್ಞಾನದ ನಿಯಮಗಳು-2021ರ ನಿಯಮ 15(2) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ-2000 ಸೆಕ್ಷನ್ 69ಎ ಅಡಿಯಲ್ಲಿ ನಿಮ್ಮ ಚಾನಲ್ಅನ್ನು ನಿರ್ಬಂಧಿಸುವಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ನಾವು ಸೂಚನೆ ಪಡೆದಿದ್ದೇವೆ.

ಸರ್ಕಾರದ ಸೂಚನೆಯು ಗೌಪ್ಯವಾಗಿರುವ ಕಾರಣ, ಅದನ್ನು ನಿಮ್ಮೊಂದಿಗೆ (ಚಾನೆಲ್) ಹಂಚಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮೇಲಿನ ಯುಆರ್‌ಎಲ್‌ಗೆ ಸಂಬಂಧಿಸಿದಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಶೀಘ್ರದಲ್ಲೇ ಅಂತಿಮ ಆದೇಶವನ್ನು ರವಾನಿಸುವ ಸಾಧ್ಯತೆಯಿದೆ. ಸ್ಥಳೀಯ ಕಾನೂನುಗಳನ್ನು ನಾವು ಅನುಸರಿಸಬೇಕಿದ್ದು, ಮುಂದಿನ ಸೂಚನೆಯ ನಂತರ ನಾವು ಸರ್ಕಾರದ ಆದೇಶವನ್ನು ಅನುಸರಿಸಬೇಕಾಗಬಹುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...