ಜಾತಿಗಣತಿಗೆ ಕೇಂದ್ರ ಒಪ್ಪಿಗೆ; ಬೃಹತ್ ಗೆಲುವು ಎಂದ ವಿಪಕ್ಷಗಳು

Date:

ದೇಶಾದ್ಯಂತ ಜನಗಣತಿಯ ಜೊತೆಗೆ ಜಾತಿಗಣತಿಯನ್ನೂ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದು ತಮ್ಮ ಬೃಹತ್ ಗೆಲುವು ಎಂದು ಜಾತಿಗಣತಿಗಾಗಿ ನಿರಂತರವಾಗಿ ಒತ್ತಾಯಿಸಿದ್ದ ವಿಪಕ್ಷಗಳು ಹೇಳಿಕೊಂಡಿವೆ. ಚುನಾವಣಾ ವಸ್ತಿಲಿನಲ್ಲಿರುವ ಬಿಹಾರದಲ್ಲಿ ಮಿತ್ರಪಕ್ಷಗಳಾದ (ಮಹಾಘಟಬಂಧನ್) ಕಾಂಗ್ರೆಸ್‌ ಮತ್ತು ಲಾಲು ಯಾದವ್ ಅವರ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಜಾತಿಗಣತಿಗೆ ಕೇಂದ್ರ ಒಪ್ಪಿರುವುದರ ಹಿಂದೆ ತಮ್ಮ ಹೋರಾಟದ ಶ್ರಮವಿದೆ ಎಂದು ಹೇಳಿಕೊಂಡಿವೆ.

“30 ವರ್ಷಗಳ ಹಿಂದೆ ನಾವು (ಸಮಾಜವಾದಿಗಳು) ಮೀಸಲಾತಿ, ಜಾತಿ ಜನಗಣತಿ, ಸಮಾನತೆ, ಭ್ರಾತೃತ್ವ, ಜಾತ್ಯತೀತತೆ ಇತ್ಯಾದಿಗಳ ಬಗ್ಗೆ ಏನನ್ನು ಯೋಚಿಸಿದ್ದೆವೋ, ಅದನ್ನು ದಶಕಗಳ ನಂತರ ಇತರರು ಅನುಸರಿಸುತ್ತಿದ್ದಾರೆ. ಜಾತಿಗಣತಿಗೆ ಒತ್ತಾಯಿಸಿದ್ದಕ್ಕೆ ನಮ್ಮನ್ನು ‘ಜಾತಿವಾದಿಗಳು’ ಎಂದು ಕರೆದಯುತ್ತಿದ್ದವರಿಗೆ ಈಗ ಉತ್ತರ ಸಿಕ್ಕಿದೆ. ಈ ಸಂಘಿಗಳು ನಮ್ಮ ಕಾರ್ಯಸೂಚಿಗೆ ತಕ್ಕಹಾಗೆ ನೃತ್ಯ ಮಾಡುವಂತೆ ನಾವು ಮಾಡುತ್ತೇವೆ” ಎಂದು ಆರ್‌ಜೆಡಿ ಸಂಸ್ಥಾಪಕ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.

“ಇದು ನಮ್ಮ ದೊಡ್ಡ ಗೆಲುವು. ಪ್ರಧಾನಿ ನರೇಂದ್ರ ಮೋದಿ ಜಾತಿ ಜನಗಣತಿಯನ್ನು ವಿರೋಧಿಸಿದ್ದರು. ಆದರೆ, ಕೇಂದ್ರವು ಈಗ ನಮ್ಮ ಕಾರ್ಯಸೂಚಿಗೆ ತಕ್ಕಂತೆ ಕೆಲಸ ಮಾಡುತ್ತಿದೆ” ಎಂದು ಲಾಲು ಅವರ ಪುತ್ರ, ಆರ್‌ಜೆಡಿ ನಾಯಕ ತೇಜಶ್ವಿ ಯಾದವ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ಜಾತಿಗಣತಿಗೆ ಮೋದಿ ಸರ್ಕಾರ ಒಪ್ಪಿಗೆ; ರಾಹುಲ್ ಗಾಂಧಿ ಹೋರಾಟದ ಫಲ ಎಂದ ನೆಟ್ಟಿಗರು

ಕಾಂಗ್ರೆಸ್ ಕೂಡ, ಜಾತಿಗಣತಿಯು ತನ್ನ ಹೋರಾಟದ ಸುದೀರ್ಘ ವಿಷಯವಾಗಿತ್ತು. ಇದು ತಮ್ಮ ಹೋರಾಟ ಫಲ ಎಂದು ಹೇಳಿದೆ. 2024ರ ಲೋಕಸಭಾ ಚುನಾವಣೆಗೆ ಮುನ್ನ, ಆರ್‌ಜೆಡಿ ಮತ್ತು ಸಮಾಜವಾದಿ ಪಕ್ಷದಂತಹ ಪಕ್ಷಗಳು ನಡೆಸಿದ್ದ ಜಾತಿ ಜನಗಣತಿಯ ಬೇಡಿಕೆಯನ್ನು ಕಾಂಗ್ರೆಸ್ ಕೈಗೆತ್ತಿಕೊಂಡಿತು. ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ನಿರಂತರವಾಗಿ ಜಾತಿಗಣತಿಗಾಗಿ ಧ್ವನಿ ಎತ್ತುತ್ತಾ ಬಂದಿದ್ದಾರೆ. ಲೋಕಸಭಾ ಚುನಾವಣೆಯ ಸಮಯದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಜಾತಿಗಣತಿಯನ್ನು ನಡೆಸುವುದಾಗಿ ಮತ್ತು ಮೀಸಲಾತಿಯ ಮಿತಿಯನ್ನು ಹೆಚ್ಚಿಸುವುದಾಗಿ ರಾಹುಲ್‌ ಗಾಂಧಿ ಭರವಸೆ ನೀಡಿದ್ದರು.

“ಕಾಂಗ್ರೆಸ್ ಮತ್ತು ಅದರ ಇಂಡಿಯಾ ಮೈತ್ರಿಕೂಟದ ಪಾಲುದಾರರು ಜಾತಿಗಣತಿಯನ್ನು ಕೇವಲ ರಾಜಕೀಯ ಸಾಧನವಾಗಿ ಬಳಸಿಕೊಂಡಿದ್ದಾರೆ. 2010ರಲ್ಲಿ ಜಾತಿಗಣತಿಗೆ ಸಂಪುಟ ಅನುಮೋದನೆ ಪಡೆದಿದ್ದರೂ ಸಹ ಹಿಂದಿನ ಯುಪಿಎ ಸರ್ಕಾರ ಜನಗಣತಿಯ ಬದಲು ಜಾತಿ ಸಮೀಕ್ಷೆಯನ್ನು ನಡೆಸಿತು” ಎಂದು ಸಚಿವ ಅಶ್ವಿನ್ ವೈಷ್ಣವ್ ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...